ನೆಲಮಂಗಲ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ನೆಲಮಂಗಳ ಸಮೀಪ ಹನುಮಂತಪುರ ಗೇಟ್ ಬಳಿ ಖಾಸಗಿ ಬಸ್‌ಗೆ (Private Bus) ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು (Crime) ಭಸ್ಮವಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಖಾಸಗಿ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ವೇಳೆ, ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿದ್ದ ನಡೆಯುತ್ತಿದ್ದ ಕಾಮಗಾರಿಯ ಕಾರಣದಿಂದ ಬಸ್ ನಿಧಾನವಾಗಿ ಸಾಗುತ್ತಿದ್ದಾಗ, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
Bus Fire Near Bengaluru, 30 Safe
— @Vinod Fattepur (@ChalavadiVinod) February 6, 2026
A tourist bus went off the road near Nelamangala on the Bengaluru–Tumakuru highway and caught fire after hitting an electric line. The bus was gutted, but all 30 passengers escaped safely.#Bengaluru #nelamangala pic.twitter.com/xWLw5Yumlh
ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಚಾಲಕನ ಸಮಯಪ್ರಜ್ಞೆಯಿಂದ ಹಾಗೂ ಪ್ರಯಾಣಿಕರ ತ್ವರಿತ ಪ್ರತಿಕ್ರಿಯೆಯಿಂದ ಎಲ್ಲರೂ ಬಸ್‌ನಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ ರಸ್ತೆ ಬಿಟ್ಟು ಕೆಳಕ್ಕೆ ಹೋಗಿದೆ. ಈ ವೇಳೆ ನೋಡು ನೋಡುತ್ತಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲಿ ಬೆಂಕಿ ಬಸ್ ಪೂರ್ತಿ ವ್ಯಾಪಿಸಿದ್ದು, ಸುಟ್ಟು ಭಸ್ಮವಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.