RCB: ಮತ್ತೆ ಕಪ್ ನಮ್ದು

RCB lift the trophy again

ವಡೋದರಾ: 4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಆದಿಯಾಗಿ ಅನೇಕರು ಸಂಭ್ರಮಿಸಿ, ಶುಭಾಶಯ ಕೋರಿದ್ದಾರೆ.

ಬಿಸಿಎ ಸ್ಟೇಡಿಯಂನಲ್ಲಿ ಗೆಲ್ಲಲು 204 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಆರ್‌ಸಿಬಿ ಆರಂಭದಲ್ಲೇ ಗ್ರೇಸ್ ಹ್ಯಾರಿಸ್ ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಯಿತು, 7 ಎಸೆತಗಳಲ್ಲಿ ಎರಡು ಬೌಂಡರಿ ಸಹಿತ 9 ರನ್ ಗಳಿಸಿದ್ದರು.

ಮಂಧನಾ-ವೋಲ್ಡ್ ಭರ್ಜರಿ ಆಟ

ಎರಡನೇ ವಿಕೆಟ್‌ಗೆ ನಾಯಕಿ ಸ್ಮೃತಿ ಮಂಧಾನಾ ಹಾಗೂ ಜಾರ್ಜಿಯಾ ವೋಲ್ ಗೆ ಸ್ಪೋಟಕ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಇಬ್ಬರೂ ಡೆಲ್ಲಿ ಬೌಲರ್‌ಗಳ ಮೇಲೆ ಒತ್ತಡ ಹೇರಿದರು.

ಮಂಧಾನಾ ಕೇವಲ 23 ಎಸೆತಗಳನ್ನು ಎದು ರಿಸಿ ಅರ್ಧಶತಕ ಪೂರೈಸಿದರು, ಮತ್ತೊಂದು ತುದಿಯಲ್ಲಿ ವೋಲ್ ಕೂಡಾ ಅರ್ಧಶತಕ ಗಳಿಸಿದರು. ಎರಡನೇ ವಿಕೆಟ್‌ಗೆ ಈ ಜೋಡಿ ಕೇವಲ 92 ಎಸೆತಗಳಲ್ಲಿ 165 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದರು.

ವೋಲ್ 79 ರನ್ ಸಿಡಿಸಿದರೆ, ನಾಯಕಿ ಸ್ಮೃತಿ ಮಂಧಾನಾ ಕೇವಲ 41 ಎಸೆತಗಳಲ್ಲಿ 12 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 87 ರನ್ ಬಾರಿಸಿದರು. ಕೊನೆಯಲ್ಲಿ ನಡಿನ್ ಡಿ ಕ್ಲಾರ್ಕ್ ಮತ್ತು ರಾಧಾ ಯಾದವ್ ಆರ್‌ಸಿಬಿಯ ಕ ಗೆಲುವಿನ ರನ್ ಬಾರಿಸಿದರು. ಆರ್‌ಸಿಬಿ 19.4 ಓವರ್‌ಗಳಲ್ಲಿ 4 ವಿಕೆಟ್‌ಗೆ 204 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು..

ಇನ್ನೂ 2024ರಿಂದ RCB ಗೆಲುವಿನ ಸರಣಿ ಮುಂದುವರಿದಿದ್ದು, ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದ್ದು, ವಾಟ್ಸಪ್ ಸ್ಟೇಟಸ್, ಇನ್ಸ್ಟಾಗ್ರಾಮ್, ಫೇಸ್‌ಬುಕ್‌ ಖಾತೆಗಳಲ್ಲಿ ಚಾಂಪಿಯನ್ ಪೋಸ್ಟ್ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ‌.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]