ದೊಡ್ಡಬಳ್ಳಾಪುರ: ಖಾಸಗಿ ಕಂಪನಿಯಲ್ಲಿ ನೈಟ್ ಶಿಫ್ಟ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಮೃತನನ್ನು ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಸಮೀಪದ ಚಿಕ್ಕ ಹೊಸಹಳ್ಳಿ ಗ್ರಾಮದ ನಿವಾಸಿ ಹರೀಶ್ (26 ವರ್ಷ) ಎಂದು ಗುರುತಿಸಲಾಗಿದೆ.
ಮೃತನು ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿಯ ಬ್ಯಾಂಕ್ ಸರ್ಕಲ್ ಬಳಿ ಖಾಸಗಿ ಕಂಪನಿ ನೌಕರನಾಗಿದ್ದು, ಶುಕ್ರವಾರದ ರಾತ್ರಿ ಪಾಳಿ ಕರ್ತವ್ಯ ಮುಗಿಸಿ, ಇಂದು ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುವ ವೇಳೆ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪಿದ್ದಾನೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೇಲ್ನೋಟಕ್ಕೆ ಸೆಲ್ಫ್ ಆಕ್ಸಿಡೆಂಟ್ ಎನ್ನಲಾಗುತ್ತಿದೆಯಾದರೂ, ಪೋಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.