Krishna river water for Kolar, Chikkaballapur districts; Discussion with Andhra CM: H.D. Kumaraswamy

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ ಚರ್ಚೆ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮೆಟ್ರೋ (Metro) ರೈಲು ಪ್ರಯಾಣ ದರ ಏರಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನತೆಗೆ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಆರೋಪಿಸಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು; ಮೆಟ್ರೋ ಯೋಜನೆಯಲ್ಲಿ ತನ್ನ ಪಾಲು ಜಾಸ್ತಿ ಇದೆ. ಹಾಗಿದ್ದ ಮೇಲೆ ಬೆಲೆ ಏರಿಕೆ ಮಾಡುವುದು ಯಾರು? ರಾಜ್ಯ ಸರ್ಕಾರ ಜನರಿಗೆ ಮಂಕುಬೂದಿ ಎರಚುತ್ತಿದೆ ಎಂದರು.

ಕೇಂದ್ರ ಸರ್ಕಾರ ಕೇವಲ 20%ರಷ್ಟು ಮಾತ್ರ ಅನುದಾನ ನೀಡುತ್ತದೆ. ಉಳಿದ 80%ರಷ್ಟು ಅನುದಾನವನ್ನು ರಾಜ್ಯ ಸರಕಾರವೇ ಭರಿಸುತ್ತದೆ ಎಂದು ಸ್ವತಃ ಮುಖ್ಯಮಂತ್ರಿ ಅವರೇ ಹೇಳಿದ್ದಾರೆ. ಹೀಗಿದ್ದ ಮೇಲೆ ದರ ಏರಿಕೆ ಮಾಡಿದ್ದು ಯಾರು? ಕೇಂದ್ರ ಸರ್ಕಾರವ ಅಥವಾ ರಾಜ್ಯ ಸರ್ಕಾರವ? ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಮಾತ್ರ ಮೆಟ್ರೋ ಪ್ರಯಾಣ ಪದೇಪದೇ ದೊಡ್ಡ ಮೊತ್ತದಲ್ಲಿ ಏರಿಕೆಯಾಗುತ್ತಿದೆ. ಅದೇ ರೀತಿ ಬೇರೆ ರಾಜ್ಯಗಳ ಮೆಟ್ರೋ ದರ ಯಾಕೆ ಏರಿಕೆ ಆಗುತ್ತಿಲ್ಲ? ಅಲ್ಲಿನ ಸರ್ಕಾರಗಳು ಹೇಗೆ ನಡೆಸುತ್ತಿವೆ ಎಂಬುದನ್ನು ಇವರು ಹೇಳಬೇಕಲ್ಲವೇ? ಬೇರೆಯದಕ್ಕೆಲ್ಲ ನಮ್ಮ ಪಾಲು ಜಾಸ್ತಿ ಎನ್ನುವವರು ಪ್ರಯಾಣ ದರದ ವಿಷಯದಲ್ಲಿ ಯಾಕೆ ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಅವರು ಕೇಳಿದರು.

ಕಳೆದ ಎರಡೂವರೆ ವರ್ಷದಿಂದ ಇವರು ಮಾಡುತ್ತಿರುವ ತಪ್ಪು ನಿರ್ಣಯಗಳಿಂದ ಜನ ರೋಸಿ ಹೋಗಿದ್ದಾರೆ. ಅದನ್ನು ಕೇಂದ್ರದ ತಲೆಗೆ ಕಟ್ಟುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡಿಕೊಂಡು ಬರುತ್ತಿದ್ದಾರೆ. ಜನರು ಎಚ್ಚೆತ್ತುಕೊಳ್ಳಬೇಕು ಎಂದು ನಾನು ಹೇಳಲು ಇಚ್ಚಿಸುತ್ತೇನೆ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈಗ ಐದು ಗ್ಯಾರೆಂಟಿ ಕೊಡ್ತಾ ಇದ್ದಾರೆ ಅಲ್ಲವೇ? ಅವುಗಳಿಂದ ನಾವು ಜನರನ್ನು ಬದುಕಿಸುತ್ತಿದ್ದೇವೆ. ಜನರಿಗೆ ಖರ್ಚು ಮಾಡುವ ಶಕ್ತಿ.ಕೊಟ್ಟಿದ್ದೇವೆ, ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚಳವಾಗಿದೆ ಎಂದೆಲ್ಲಾ ಹೇಳುತ್ತಿದ್ದಾರೆ. ಅದಕ್ಕೆ ಇರಬೇಕು, ಜನರಲ್ಲಿ ದುಡ್ಡಿದೆ ಎಂದು ಮನಸೋ ಇಚ್ಛೆ ತೆರಿಗೆ ಹಾಕುವುದು, ದರ ಏರಿಕೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ಟೀಕಾಪ್ರಹಾರ ನಡೆಸಿದರು.

ಗ್ಯಾರಂಟಿಗಳಿಂದ ಜನರ ಸ್ವಾಭಿಮಾನದ ಬದುಕು ನಡೆಸುತ್ತಿದ್ದಾರೆ. ಸಂತೋಷವಾಗಿದ್ದಾರೆ. ಏನೇ ದರ ಏರಿಕೆ ಮಾಡಿದರೂ ಜನರು ಸಂತೋಷವಾಗಿ ಕೊಡುತ್ತಾರೆ ಎನ್ನುವ ಭಾವನೆ ಸರ್ಕಾರಕ್ಕೆ ಬಂದ ಹಾಗಿದೆ. ಮುಖ್ಯಮಂತ್ರಿಗಳು ಆ ಭ್ರಮೆಯಲ್ಲಿ ಇದ್ದಾರೆ. ಹೀಗಾಗಿ ಜನವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಕೋಲಾರದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಈ ಜಿಲ್ಲೆಗಳಿಗೆ ನದಿಯ ನೀರು ಕೊಡುತ್ತೇವೆಂದು ಹೇಳಿ ಎತ್ತಿನಹೊಳೆ ಯೋಜನೆ ಮಾಡಿದರು. ಆದರೆ ಬೆಂಗಳೂರಿನ ರೊಚ್ಚು ನೀರು ಕೊಟ್ಟರು. ಮೂರನೇ ಹಂತದ ಶುದ್ಧೀಕರಣ ಮಾಡಿ ಎಂದರೂ ಮಾಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕೃಷ್ಣಾ ನದಿಯ ನೀರು ಬಿಟ್ಟರೆ ನಮಗೆ ಬೇರೆ ದಾರಿ ಇಲ್ಲ ಎಂದು ಎಂದರು.

ಈ ಜಿಲ್ಲೆಗೆ ಕೃಷ್ಣಾ ನೀರು ತರುವ ಬಗ್ಗೆ ಸಂಸದರಾದ ಮಲ್ಲೇಶ್ ಬಾಬು ಅವರು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ನನ್ನ ಬೆಂಬಲವೂ ಇದೆ. ಕೃಷ್ಣ ನದಿ‌ ನೀರನ್ನು ಹರಿಸುವ ಕುರಿತು ಮಲ್ಲೇಶ್ ಬಾಬು ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಆಂಧ್ರದ ಮುಖ್ಯಮಂತ್ರಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕೆಲಸ ಸಾಧಿಸಬೇಕಿದೆ. ಅದಕ್ಕಾಗಿ ಅವರನ್ನು‌ ಭೇಟಿ ಮಾಡುತ್ತೇನೆ. ಅವರ ರಾಜ್ಯದ ಜನರ ಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಅವರ ಸಹಕಾರ ತೆಗೆದುಕೊಳ್ಳುವ ಕೆಲಸ‌ ಮಾಡುತ್ತೇವೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಮಲ್ಲೇಶ್ ಬಾಬು ಅವರನ್ನು ಗೆಲ್ಲಿಸಿದ ರುಣ ನಮ್ಮ‌ಮೇಲಿದೆ. ಅದನ್ನು ತೀರಿಸುವ ಕೆಲಸ ಮಾಡುವ ಪ್ರಯತ್ನ ಮಾಡುತ್ತೇವ ಎಂದು ಕೇಂದ್ರ ಸಚಿವರು ಹೇಳಿದರು.

2014ರಲ್ಲಿ ಚಿಕ್ಕಬಳ್ಳಾಪುರದಲ್ಲಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆಆಡಿದ ದಿನವೇ ನಾನು ಕೋಲಾರದಲ್ಲಿದ್ದೆ. ಅವತ್ತೇ ಹೇಳಿದ್ದೆ. ಇಲ್ಲಿ ನೀರು ಸಿಗುವುದಿಲ್ಲ, ಸರಕಾರ ಸುಳ್ಳು ಹೇಳುತ್ತಿದೆ ಎಂದು ಹೇಳಿದ್ದೆ. ಆದರೂ ಐದೇ ವರ್ಷದಲ್ಲಿ ನೀರು ಕೊಡುತ್ತೇವೆ ಎಂದು ಹೇಳಿದರು.

ನಾನು ನಮ್ಮ ಕಡೆಯ ಹಳ್ಳಿ ಭಾಷೆಯಲ್ಲಿ ಅವತ್ತೇ ಹೇಳಿದ್ದೆ. ಎತ್ತಿನಹೊಳೆಯಿಂದ ಎರಡು ವರ್ಷಗಳಲ್ಲಿ‌ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ಳುವೆ ಎಂದು‌ ಹೇಳಿದ್ದೆ. ನನ್ನ ತಲೆಯಲ್ಲಿ ಕೂದಲು ಹೋಯಿತೇ ಹೊರತು ಈ ಜಿಲ್ಲೆಗಳಿಗೆ ನೀರು ಹರಿಯಲಿಲ್ಲ ಎಂದು ಅವರು ಲೇವಡಿ ಮಾಡಿದರು.

ಅವತ್ತಿನ ಕಾಂಗ್ರೆಸ್ ಸರ್ಕಾರ ನೀರು ಕೊಡುವುದಾಗಿ ಹೇಳಿ‌ ಹತ್ತು ವರ್ಷ ಆಗಿದೆ. ಆ ಯೋಜನೆಯ ಹೆಸರಿನಲ್ಲಿ ಎಷ್ಟೆಲ್ಲಾ ಲೂಟಿ ಆಗಿದೆ ಎನ್ನುವುದು ಗೊತ್ತಿದೆ. ಸಿಎಜಿ ವರದಿಯಲ್ಲಿ ಇದೆಲ್ಲವೂ ಇದೆ. ಅನರ್ಹ ಗುತ್ತಿಗೆದಾರರಿಗೆ ಕಾಮಗಾರಿ ಕೊಟ್ಟಿದ್ದಾರೆ, ಕಳಪೆ ಕಾಮಗಾರಿ ಆಗಿ ಹಣ ದುರುಪಯೋಗ ಆಗಿದೆ ಎಂದು ವರದಿಯಲ್ಲಿ ಉಲ್ಲೇಖವಿದೆ. ಈಗ ₹30,000 ಕೋಟಿಗೆ ಎತ್ತಿನಹೊಳೆ ಯೋಜನಾ ವೆಚ್ಚ ತಲುಪಿದೆ. ಇದೆಲ್ಲಾ ನಮ್ಮ ಶ್ರೀನಿವಾಸಪುರದ ಬುದ್ದಿವಂತ ಮಾಜಿ ಶಾಸಕರಿಗೆ ಗೊತ್ತಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಬೆಂಗಳೂರಿನ ರೊಚ್ಚು ನೀರಿನಿಂದಾಗಿ ಸಣ್ಣ ಮಕ್ಕಳು ಕೂಡ ಕಾಯಿಲೆಗೆ ತುತ್ತಾಗುತ್ತಿವೆ. ನದಿಯ ನೀರು ಕೊಡುತ್ತೇವೆ ಎಂದವರು ರೊಚ್ಚು ನೀರು ಕೊಟ್ಟು ಮೋಸ ಮಾಡಿದರು. ಈ ಜಿಲ್ಲೆಗಳ ಜನ ಕಾಂಗ್ರೆಸ್ಸಿಗರಿಗೆ ಏನು ದ್ರೋಹ ಮಾಡಿದ್ದರು? ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ವರದಿ ನೀಡಿವೆ. ಅವುಗಳನ್ನು ನೋಡಿದರೆ ಈ ಜಿಲ್ಲೆಗಳಿಗೆ ಆಗಿರುವ ಹಾನಿ ಏನೆಂಬುದು ಗೊತ್ತಾಗುತ್ತದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಬೆಳೆಯುತ್ತಿದ್ದ ತರಕಾರಿಗಳನ್ನು ದೇಶ ವಿದೇಶಗಳಲ್ಲಿ ಪೈಪೋಟಿಗೆ ಬಿದ್ದು ಖರೀದಿ ಮಾಡುತ್ತಿದ್ದರು. ಇವತ್ತು ಈ ಭಾಗದ ತರಕಾರಿಯನ್ನು ಕೇಳುವವರೇ ಇಲ್ಲ. ಈಗ ನೋಡಿದರೆ 2027ಕ್ಕೆ ಎತ್ತಿನಹೊಳೆ ನೀರು ಕೊಡುತ್ತೇವೆ ಎಂದು ಸಬೂಬು ಹೇಳುತ್ತಿದ್ದಾರೆ! ಎತ್ತಿನಹೊಳೆಯ ಯಂತ್ರೋಪಕರಣಗಳು ಈಗಾಗಲೇ ತುಕ್ಕು ಹಿಡಿಯುತ್ತಿವೆ. ಕೋಲಾರ, ಚಿಕ್ಕಬಳ್ಳಾಪುರ ಜನರೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕೆಯಲ್ಲಿ ಬಂದ ಒಂದು ವರದಿಯನ್ನು ಗಮನಿಸಿ ಬಂಗಾರಪೇಟೆಯ ಯರಗೋಳ್ ಯೋಜನೆ ಅನುಷ್ಠಾನಕ್ಕೆ ನಾನು ತೀರ್ಮಾನ ಮಾಡಿದ್ದೆ. ಆದರೆ, ದುರಂತವೆಂದರೆ ಯರಗೋಳ್ ಜಲಾಶಯಕ್ಕೆ ಕೂಡ ಕೆಸಿ ವ್ಯಾಲಿಯ ರೊಚ್ಚು ನೀರು ಹರಿಸುತ್ತಿದ್ದಾರೆ. ಎತ್ತಿನಹೊಳೆ ದುಡ್ಡು ಹೊಡೆಯುವ ಕಾರ್ಯಕ್ರಮ, ಇದನ್ನು ಶಂಕುಸ್ಥಾಪನೆ ದಿನವೇ ಹೇಳಿದ್ದೆ. ಅದು ಇವತ್ತು ಸತ್ಯವಾಗಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರಕ್ಕೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ನೀರು ಕೊಡಲು ಇನ್ನು ಎಷ್ಟು ದಿನ ಬೇಕು? ಎಷ್ಟು ದಿನ ಹೀಗೆಯೇ ಸುಳ್ಳು ಹೇಳಿಕೊಂಡು ತಿರುಗುತ್ತೀರಿ? ನಾಡಿನ ಜನರು 140 ಶಾಸಕರನ್ನು‌ ಗೆಲ್ಲಿಸಿ ಕೊಟ್ಟು ಕೆಲಸ ಮಾಡಿ ಎಂದು ಹೇಳಿದರೆ, ಇವರು ಮಾತ್ರ ಕುರ್ಚಿ ಕಿತ್ತಾಟ ನಡೆಸುತ್ತಿದ್ದಾರೆ.

ಮಾತೆತ್ತಿದರೆ ಕೇಂದ್ರ ಸರ್ಕಾರದ ಬೆರಳು ಮಾಡುತ್ತಾರೆ. ರಾಜ್ಯದ ಕೆಲಸಗಳಿಗೆ ಸಂಬಂಧಿಸಿ ಈವರೆಗೂ ಸಿಎಂ, ಡಿಸಿಎಂ ಸೇರಿ ಯಾವೊಬ್ಬ ಸಚಿವರು ನಮ್ಮನ್ನು ಭೇಟಿ ಮಾಡಿಲ್ಲ. ಆದರೂ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ನಮ್ಮ ಪ್ರಯತ್ನದಿಂದ ಇತಿಹಾಸದಲ್ಲಿ ಮೊದಲ ಬಾರಿಗೆ ಕೆಂದ್ರ ಸರ್ಕಾರ ಮಾವಿಗೆ ಬೆಂಬಲ‌ ಬೆಲೆ‌ ನೀಡಿದೆ. ತಂಬಾಕು ಬೆಳೆಗಾರರ ಹಿತರಕ್ಷಣೆ ಮಾಡಿದ್ದೇವೆ. ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ್ದೇವೆ ಎಂದು ಅವರು ಹೇಳಿದರು.

ರಮೇಶ್ ಕುಮಾರ್ ಗೆ ನೋಟಿಸ್; ನನಗೆ ಸಂಬಂಧವಿಲ್ಲ ಎಂದ ಹೆಚ್ಡಿಕೆ

ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ನೋಟಿಸ್ ನೀಡಿರುವುದಕ್ಕೂ ನನಗೂ ಯಾವ ಸಂಬಂಧವೂ ಇಲ್ಲ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಸ್ಪಷ್ಟಪಡಿಸಿದರು.

ಬಿಡದಿಯಲ್ಲಿ ಈ ಸರ್ಕಾರ ನನಗೂ ನೋಟಿಸ್ ಕೊಟ್ಟು ಕೊಡಬಾರದ ಕಾಟ ನೀಡುತ್ತಿದೆ. ಅದಕ್ಕೆ ರಮೇಶ್ ಕುಮಾರ್ ಅವರು ಕಾರಣ ಎಂದು ಹೇಳಿದರೆ ಆಗುತ್ತದೆಯೇ? ನನ್ನ ವಿಚಾರಕ್ಕೆ ಎಸ್ ಐಟಿ ರಚನೆ ಮಾಡಿದ್ದಾರೆ. ಅವರ ವಿಚಾರಕ್ಕೆ ಯಾಕೆ ರಚನೆ ಮಾಡಿಲ್ಲ ಏಕೆ? ಕೋರ್ಟುಗಳು ಇವೆ, ಹೋರಾಟ ಮಾಡಲಿ, ನಾನು ಕೂಡ ಅದನ್ನೇ ಮಾಡುತ್ತಿದ್ದೇನೆ. ಅದನ್ನು ಬಿಟ್ಟು ಅವರ ವೈಯುಕ್ತಿಕವಾಗಿ ಇರುವ ಸಮಸ್ಯೆಯಿಂದಾಗಿ ಕೃಷಿ‌ ಕುರಿತು ಏನೇನೋ‌ ಹೇಳುತ್ತಿದ್ದಾರೆ. ಕಾನೂನುನ್ನು ಜಯಿಸುವಷ್ಟು ಬುದ್ಧಿವಂತ ಅವರು. ನಿಮಗೆ ಸಮಸ್ಯೆ ಬಂದಿದ್ದಾಗ ಅದು ಅರ್ಥ ಆಗಿದೆ ಎಂದು ಟಾಂಗ್ ಕೊಟ್ಟರು.

ಸೀಟು ಹಂಚಿಕೆ ಮಾತುಕತೆ ನಡೆದಿಲ್ಲ

ಮಂಡ್ಯ ಅಥವ ರಾಜ್ಯದ ಯಾವುದೇ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಸೀಟು ಕುರಿತು ಮಾತುಕತೆ ಆಗಿಲ್ಲ. ಅದಕ್ಕೆ ಇನ್ನೂ ಸಮಯ ಇದೆ. ಬಿಜೆಪಿಯೊಂದಿಗೆ ಪರಸ್ಪರ ಮಾತಿನ ಮೂಲಕ ಎಲ್ಲವನ್ನು ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಮೊದಲ ಆದ್ಯತೆ ಜಿಲ್ಲಾ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ಗಮನ ನೀಡಿದ್ದೇವೆ ಎಂದು ಕೇಂದ್ರ ಸಚಿವರು ಹೇಳಿದರು.

ಸಂಸದರಾದ ಮಲ್ಲೇಶ್ ಬಾಬು, ಶಾಸಕರಾದ ಜಿ.ಕೆ. ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ಇಂಚರ ಗೋವಿಂದರಾಜು, ಮೇಲೂರು ರವಿ, ಮಾಜಿ ಶಾಸಕರಾದ ಚೌಡರೆಡ್ಡಿ ತೂಪಲ್ಲಿ, ಹೆಚ್.ಎಂ. ರಮೇಶ್ ಗೌಡ, ಡಾ. ಕೆ.ಅನ್ನದಾನಿ ಮುಂತಾದವರು ಹಾಜರಿದ್ದರು.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!