ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

Doddaballapur: Accident News Update.. Boy dies

ದೊಡ್ಡಬಳ್ಳಾಪುರ: ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ ಸಂಭವಿಸಿದೆ.

ಮೃತನನ್ನು ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಉಜ್ಜನಿ ಮೂಲದ ಜೆಸಿಬಿ ಚಾಲಕ ಅಶೋಕ (35 ವರ್ಷ) ಎಂದು ಗುರುತಿಸಲಾಗಿದೆ‌.

ಮೃತನು ಮಡದಿ ಹಾಗೂ ಮಗುವಿನೊಂದಿಗೆ ಕರೀಂಸೊಣ್ಣೇನಹಳ್ಳಿಯಲ್ಲಿ ವಾಸವಿದ್ದು, ಭಾನುವಾರ ಸಂಜೆ ಮಡದಿಗೆ ಅನಾರೋಗ್ಯದ ಕಾರಣ ಆಲಹಳ್ಳಿಯಲ್ಲಿ ಚಿಕಿತ್ಸೆಗೆ ದ್ವಿಚಕ್ರ ವಾಹನದ ಮಗುವಿನೊಂದಿಗೆ ಕರೆತಂದಿದ್ದಾನೆ‌.

ಚಿಕಿತ್ಸೆ ಬಳಿಕ ದ್ವಿಚಕ್ರ ವಾಹನದಲ್ಲಿ ಮತ್ತೆ ಮನೆಗೆ ತೆರಳುವ ವೇಳೆ ಅರಳು ಮಲ್ಲಿಗೆ ಕೆರೆ ಕಟ್ಟೆಯ ಮೇಲೆ ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ‌.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಅಶೋಕ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನಪ್ಪಿದ್ದು, ಆತನ ಮಡದಿ ಹಾಗು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]