Selection for hostel admission

ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸುವ ಸಲುವಾಗಿ ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಯೋಜನಾ ಸಮಿತಿ ಚುನಾವಣೆ-2026 ರ (Planning Committee elections) ಚುನಾವಣಾಧಿಕಾರಿ ಹಾಗೂ ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಚುನಾವಣೆ ಅಧಿಸೂಚನೆ ಹೊರಡಿಸಿದ್ದಾರೆ.

ಅಧಿಸೂಚನೆಯಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ನಿಯಮಗಳು, 1996 ರ ನಿಯಮ 8 ರ ಪ್ರಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ದೊಡ್ಡಬಳ್ಳಾಪುರ ನಗರಸಭೆ, ನೆಲಮಂಗಲ ನರಸಭೆ, ವಿಜಯಪುರ ಪುರಸಭೆ ಮತ್ತು ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿಯಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಸಲಾಗುತ್ತಿದೆ.

ಅಂದರಂತೆ ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಸದಸ್ಯರು ದಿನಾಂಕ:07.02.2026 ರಿಂದ 17.02.2026 ರವರೆಗಿನ ಯಾವುದೇ ದಿನದಂದು (ಸಾರ್ವತ್ರಿಕ ರಜಾ ದಿನವನ್ನು ಹೊರತುಪಡಿಸಿ) ಕಛೇರಿ ಸಮಯದಲ್ಲಿ ಬೆಳಿಗ್ಗೆ 11.00 ರಿಂದ ಅಪರಾಹ್ನ 2.00 ರವರೆಗೆ ಚುನಾವಣೆಯ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರದ ಪತ್ರಗಳನ್ನು ಪಡೆಯಬಹುದು.

ನಾಮಪತ್ರಗಳನ್ನು ಅಭ್ಯರ್ಥಿ ಅಥವಾ ಅವರ ಸೂಚಕರು ದಿನಾಂಕ:17.02.2026 ರಂದು ಮೀರದಂತೆ ಯಾವುದೇ ದಿನಾಂಕದಂದು (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 11.00 ಗಂಟೆಯಿಂದ ಅಪರಾಹ್ನ 02.00 ಗಂಟೆಯ ನಡುವೆ ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು.

ನಾಮಪತ್ರಗಳನ್ನು ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಛೇರಿ ದಿನಾಂಕ: 18.02.2026 ರಂದು ಪೂರ್ವಾಹ್ನ 11.00 ಗಂಟೆಗೆ ಪರಿಶೀಲನೆ ಮಾಡುವುದು.

ಅಭ್ಯರ್ಥಿ ಅಥವಾ ಅವರ ಸೂಚಕರ ಮೂಲಕ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ನೋಟೀಸನ್ನು 19.02.2026 ರಿಂದ 21.02.2026 (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಬೆಳಗ್ಗೆ 11.00 ಗಂಟೆಯಿಂದ ಅಪರಾಹ್ನ 02.00 ಗಂಟೆಗೆ ಮುಂಚೆ ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದು.

ಚುನಾವಣೆಗೆ ಸ್ಪರ್ಧೆ ಇರುವ ಸಂದರ್ಭದಲ್ಲಿ ಮತದಾನವನ್ನು ದಿನಾಂಕ:27.02.2026ರಂದು ಬೆಳಿಗ್ಗೆ 09.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಗುವುದು.

ದಿನಾಂಕ 27.02.2026 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಪರಾಹ್ನ 03 ಗಂಟೆಗೆ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು, ಚುನಾವಣೆ ಪ್ರಕ್ರಿಯೆಯು ದಿನಾಂಕ: 28.02.2026 ರಂದು ಮುಕ್ತಾಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ

ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸುವ ಸಲುವಾಗಿ ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಯೋಜನಾ ಸಮಿತಿ ಚುನಾವಣೆ-2026 ರ

[ccc_my_favorite_select_button post_id="119273"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!