ಮೋದಿ ರಾಜಕೀಯ ಭವಿಷ್ಯ ನಾಶಮಾಡಬಲ್ಲೆ: ನಾಲಿಗೆ ಹರಿಬಿಟ್ಟ ಡೊನಾಲ್ಡ್ ಟ್ರಂಪ್

Trump increases H-1B visa fee to 88 lakhs.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಪ್ತ ಮೀತ್ರ, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ವರ್ತನೆ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಬಿಜೆಪಿ (BJP) ಬೆಂಬಲಿಗರಿಗೆ ಇರಿಸುಮುರಿಸು ಉಂಟು ಮಾಡುತ್ತಿದ್ದಾರೆ.

ಈಗಾಗಲೇ ಪಾಕಿಸ್ತಾನ ಮತ್ತು ಭಾರತದ ನಡುವಿನ ಕದನ ವಿರಾಮಕ್ಕೆ ಕಾರಣ ನಾನೇ ಎಂದು ಸಮಾರು 67 ಸಾರಿ ಕೊಚ್ಚಿಕೊಂಡಿದ್ದಾರೆ. ಅಲ್ಲದೆ ಇದಕ್ಕೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿದ್ದು, ಎಲ್ಲರಿಗೂ ತಿಳಿದಿದೆ.

ಆದರೆ ಇದು ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿ ಎಂದು ವಿಜಯ ಯಾತ್ರೆ ಮಾಡುತ್ತಿದ್ದ ಮೋದಿ ಸರ್ಕಾರಕ್ಕೆ ಮುಜುಗರಕ್ಕೆ ಕಾರಣವಾಗಿ, ಟ್ರಂಪ್ ಹೆಳಿಕೆ ಬೆನ್ನಲ್ಲೇ ಸದ್ದಿಲ್ಲದೆ ಸಿಂಧೂರ ವಿಜಯ ಯಾತ್ರೆ ಕೊನೆಯಾಗಿ ಹೋಯಿತು.

ಬಳಿಕ ಇತ್ತೀಚೆಗೆ ರಾತ್ರೋ ರಾತ್ರಿ ನಡೆದ ಟ್ರೇಡ್ ಡೀಲ್ ಕುರಿತು ಗೋದಿ ಮೀಡಿಯಾಗಳು ಮೋದಿ ಸರ್ಕಾರದ ಪರವಾಗಿ ವರದಿ ಮಾಡುತ್ತಿದ್ದರು, ಅಮೇರಿಕಾದ ಉತ್ಪನ್ನಗಳಿಗೆ ಶೂನ್ಯ ತೆರಿಗೆ, ಭಾರತದ ಉತ್ಪನ್ನಗಳಿಗೆ ಶೇ. 18 ತೆರಿಗೆ ವಿಧಿಸಿರುವುದು, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳ ಮೇಲೆ ಅಮೇರಿಕಾದ ಉತ್ಪದನ್ನಗಳು ದೊಡ್ಡ ಮಟ್ಟದ ನಷ್ಟಕ್ಕೆ ಕಾರಣವಾಗಲಿದೆ ಎಂಬ ಆತಂಕದ ಚರ್ಚೆ ನಡೆಯುತ್ತಿದೆ.

ಇದರ ಬೆನ್ನಲ್ಲೇ ಇಂದು ಟ್ರಂಪ್ ಮತ್ತೆ ವಾಚಾಳಿ ಮುಂದುವರಿಸಿರುವ ಹಳೆಯ ವಿಡಿಯೋ ವೈರಲ್ ಆಗಿದೆ.

ಅಕ್ಟೋಬರ್ 16, 2025 ರಂದು ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಈ ಹೇಳಿಕೆಯಲ್ಲಿ “ಮೋದಿ ಗ್ರೇಟ್ ಮನುಷ್ಯ, ಅವರು ಟ್ರಂಪ್‌ನ ಪ್ರೀತಿಸುತ್ತಾರೆ, ಬಯಸಿದರೆ ನಾನು ಅವರ ರಾಜಕೀಯ ಜೀವನವನ್ನು ನಾಶಮಾಡಬಲ್ಲೆ, ಆದರೆ ನಾ ಬಯಸುವುದಿಲ್ಲ” ಎಂದು ಟ್ರಂಪ್ ಹೇಳುತ್ತಿದ್ದಾರೆ!

ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ‌

ಟ್ರಂಪ್ ಹೇಳಿಕೆಯ ಅರ್ಥವೇನು? ಟ್ರಂಪ್ ಅವರ ಬಳಿ ಏನೋ ಒಂದು ಇದೆ, ಅದು ಬಹಿರಂಗವಾದರೆ, ಅದು ಮೋದಿಯ ರಾಜಕೀಯ ವೃತ್ತಿಜೀವನವನ್ನು ನಾಶಪಡಿಸುತ್ತದೆ ಎಂಬ ಕಾರಣಕ್ಕಾಗಿ ಮೋದಿ ಟ್ರಂಪ್ ಅವರನ್ನು ಪ್ರೀತಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದರ್ಥ ಅಲ್ಲವೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನೂ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಟ್ವೀಟ್ ಮಾಡಿ: ಡೊನಾಲ್ಡ್ ಟ್ರಂಪ್ ಅವರ ದಿಟ್ಟ ಹೇಳಿಕೆ;
“ನಾನು ಬಯಸಿದರೆ, ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನು ಕೊನೆಗೊಳಿಸಬಹುದಿತ್ತು… ಆದರೆ ನಾನು ಬಯಸುವುದಿಲ್ಲ.”

ಟ್ರಂಪ್ ಅವರ ಹೇಳಿಕೆಯು ರಾಜಕೀಯ ವಲಯಗಳಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ದೊಡ್ಡ ಪ್ರಶ್ನೆ: ಟ್ರಂಪ್ ಅವರ ಬಳಿ ಮೋದಿ ಬಗ್ಗೆ ಯಾವ ಫೈಲ್ ಇದೆ?

ಅಮೆರಿಕ ಅಧ್ಯಕ್ಷರು ಇಷ್ಟು ದಿಟ್ಟ ಹೇಳಿಕೆ ನೀಡುತ್ತಿರುವ ರಹಸ್ಯವೇನು?

ಈ ಹೇಳಿಕೆಯು ರಾಜತಾಂತ್ರಿಕತೆಯ ಬಗ್ಗೆ ಮಾತ್ರವಲ್ಲ, ನಿಗೂಢತೆ ಮತ್ತು ರಾಜಕೀಯ ಒತ್ತಡ ಎರಡನ್ನೂ ಸೂಚಿಸುತ್ತದೆ.

ಈಗ ಎಲ್ಲರ ಕಣ್ಣುಗಳು ಇದರ ಮೇಲೆ ಇವೆ:

ನಿಜವಾಗಿಯೂ ಫೈಲ್ ಇದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]