ಬೆಂ.ಗ್ರಾ ಜಿಲ್ಲೆ: ತೋಟಗಾರಿಕೆ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ, ಕಸಬಾ ಹೋಬಳಿಯ ಅಣ್ಣೇಶ್ವರ ಗ್ರಾಮ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಫೆಬ್ರವರಿ 11 ರಂದು ಬೆಳಿಗ್ಗೆ11.00 ಗಂಟೆಗೆ “ಬೆಣ್ಣೆಹಣ್ಣು ಮತ್ತು ಮೆಕಡೇಮಿಯ ಹಣ್ಣಿನ ವೈಜ್ಞಾನಿಕ ಬೇಸಾಯ ಪದ್ದತಿಯ ಕುರಿತು ವಿಚಾರ ಸಂಕೀರಣ (Seminar)” ಹಮ್ಮಿಕೊಳ್ಳಲಾಗಿದೆ.
ವಿಚಾರ ಸಂಕೀರಣದಲ್ಲಿ ವಿಷಯ ತಜ್ಞರಾಗಿ ನಿವೃತ್ತ ತೋಟಗಾರಿಕೆ ಅಪರ ನಿರ್ದೇಶಕರು ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಡಾ. ಹಿತ್ತಲಮನಿ ಎಸ್.ವಿ ರವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಜಿಲ್ಲೆಯ ಎಲ್ಲಾ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.