BJP MPs issue notice to cancel Rahul Gandhi's membership of Parliament

ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿ: ಬಿಜೆಪಿ ನೋಟಿಸ್‌

ನವದೆಹಲಿ: ಕಾಂಗ್ರೆಸ್ (Congress) ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಬಿಜೆಪಿ (BJP) ಸಂಸದರು ನೋಟಿಸ್‌ ಸಲ್ಲಿಸಿದ್ದಾರೆ.

ಭಾರತ- ಅಮೇರಿಕಾ ನಡುವಿನ ಒಪ್ಪಂದದ ಕುರಿತಂತೆ ನಿನ್ನೆ ರಾಹುಲ್ ಗಾಂಧಿ ಅವರ ಬಜೆಟ್ ಮೇಲಿನ ಭಾಷಣದ ವಿರುದ್ಧ ಬಿಜೆಪಿ ಸಂಸದರು ಸಿಡಿದೆದ್ದಿದ್ದು, ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ರದ್ದುಗೊಳಿಸಲು ಪ್ರಸ್ತಾವನೆಯನ್ನು ಮಂಡಿಸಲು ನೋಟಿಸ್‌ ಸಲ್ಲಿಸಿದ್ದಾರೆ. ಬುಧವಾರ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿ, ಕಾಂಗ್ರೆಸ್ ಸಂಸದರ ಭಾಷಣದಲ್ಲಿ ಯಾವುದೇ ಸತ್ಯಗಳಿಲ್ಲ ಹಾಗೂ ಎಲ್ಲಾ ಆರೋಪಗಳು ಆಧಾರರಹಿತವಾಗಿವೆ ಎಂದಿದ್ದಾರೆ.

ರಾಹುಲ್ ಗಾಂಧಿಯವರು ಜೀವಮಾನವಿಡೀ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಬೇಕೆಂದು ಬಿಜೆಪಿ ತನ್ನ ನೋಟಿಸ್‌ನಲ್ಲಿ ಒತ್ತಾಯಿಸಿದೆ.

ಬುಧವಾರ ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿಯವರು ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಆಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಕಿಡಿ ಕಾರಿದರು.

ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರಕಾರ ಸಂಪೂರ್ಣ ಶರಣಾಗಿದೆ. ಈ ಮೊದಲು ಭಾರತದ ಉತ್ಪನ್ನಗಳಿಗೆ ಶೇ.3ರಷ್ಟು ಸುಂಕ ವಿಧಿಸಲಾಗುತ್ತಿತ್ತು. ಇದನ್ನು ಈಗ ಶೇ.18ಕ್ಕೆ ಏರಿಸಲಾಗಿದೆ. ಆದರೂ ಇದನ್ನು ಚಾರಿತ್ರಿಕ ಒಪ್ಪಂದ ಎಂದು ಸಂಭ್ರಮಿಸಲಾಗುತ್ತಿದೆ. ನಾವು ಜವಳಿ ಉತ್ಪನ್ನಗಳ ರಷ್ಟಿಗೆ ಶೇ. 18 ಸುಂಕ ನೀಡಬೇಕಾಗಿದೆ. ಆದರೆ ನೆರೆಯ ಬಾಂಗ್ಲಾದೇಶದ ಟೆಕ್ಸ್‌ ಟೈಲ್ ಉದ್ಯಮಕ್ಕೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಟ್ರಂಪ್ ಬಿಗಿಪಟ್ಟು ಹಾಕಿ ಮೋದಿ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದು ರಾಹುಲ್ ದೂರಿದರು. ಮೋದಿ ಕಣ್ಣಲ್ಲಿ ಭಯ ಕಾಣುತ್ತಿದೆ. ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ಗಳಿಂದ 146 ಬಿಲಿಯನ್ ಡಾಲರ್‌ಗಳಿಗೆ ಏರಿಕೆಯಾಗಲಿದೆ. ಆದರೆ, ಅಮೆರಿಕಕ್ಕೆ ಭಾರತದ ಬಗ್ಗೆ ಯಾವುದೇ ಬದ್ಧತೆ ಇಲ್ಲ, ಆದರೆ ಭಾರತಕ್ಕೆ ಅಮೆರಿಕದ ಬದ್ರತೆ ಇದೆ. ಈ ಒಪ್ಪಂದ ಯಾವ ಪ್ರಧಾನಿ ಒಪ್ಪುತ್ತಿರಲಿಲ್ಲ. ನಾವು ಮೂರ್ಖರಂತೆ ನಿಂತಿದ್ದೇವೆ ಎಂದು ಆರೋಪಿಸಿದ ರಾಹುಲ್, ನಮ್ಮೊಂದಿಗೆ ಸೇವಕರಂತೆ ಅಲ್ಲ ಸಮಾನರಂತೆ ಮಾತನಾಡಿ ಎಂದು ಅಮೆರಿಕಕ್ಕೆ ಸಂದೇಶ ನೀಡಿದರು.

ಇನ್ನೂ ಬಿಜೆಪಿ ಸಂಸದರ ನೋಟಿಸ್ ಕುರಿತಂತೆ ಕಾಂಗ್ರೆಸ್ ಬೆಂಬಲಿಗರು ಕಿಡಿಕಾರಿದ್ದು, ರಾಹುಲ್ ಗಾಂಧಿ ಅವರ ಪ್ರಶ್ನೆಗೆ ಉತ್ತರಿಸಲಾಗದೆ. ಈ ರೀತಿ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡುತ್ತಿದ್ದಾರೆ.

ರಾಜಕೀಯ

ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ಇದು ಸರ್ಕಾರ ಪಾಪರ್‌ ಆಗಿರುವುದರ ಸಂಕೇತವಾಗಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಟೀಕಿಸಿದರು.

[ccc_my_favorite_select_button post_id="119355"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!