ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ನಗರಗಳಿಗೆ ಕುಡಿಯುವ ನೀರು ಪೂರೈಸುವ ಜಕ್ಕಲಮಡುಗು ಜಲಾಶಯಕ್ಕೆ ( Jakkalamadugu reservoir) ಜಿಲ್ಲಾಧಿಕಾರಿ ಎ.ಬಿ.ಬಸವರಾಜು (A.B. Basavaraju) ಅವರು ಭೇಟಿ ನೀಡಿ, ನೀರಿನ ಲಭ್ಯತೆ ಪರಿಶೀಲನೆ ನಡೆಸಿದರು.
ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳಿಗೆ ನೀರನ್ನು ಪೂರೈಸುವ ಜಲಾಶಯದಲ್ಲಿ ನೀರಿನ ಲಭ್ಯತೆ, ಅಗತ್ಯ, ಉಳಿತಾಯ ಸೇರಿದ ಅನೇಕ ವಿಚಾರಗಳ ಕುರಿತು ದೊಡ್ಡಬಳ್ಳಾಪುರ ನಗರಸಭೆ ಎಇಇ ರಾಮೇಗೌಡ ಅವರಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿ, ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಂತೆ, ನೀರು ಪೋಲಾಗದಂತೆ ಹೆಚ್ಚಿನ ನಿಗಾವಹಿಸಲು ಸೂಚನೆ ನೀಡಿದರು.
ಜಕ್ಕಲಮಡುಗು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯವಿದ್ದು, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ.
ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ. ಪ್ರಸ್ತುತ ಜಲಾಶಯದಲ್ಲಿ 43 ಅಡಿ ನೀರಿನ ಲಭ್ಯತೆ ಇದೆ.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ರಮೇಶ್ ಇದ್ದರು.