ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

Traders support Doddaballapura bandh

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮತ್ತು ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲಿಸಿ, ಇಂದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವಿವಿಧ ಕಾರ್ಮಿಕ ಸಂಘಗಳಿಂದ ಬಂದ್ (Bandh) ನಡೆಸಲಾಯಿತು. ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದವು.

ಗುರುವಾರ ಬೆಳಿಗ್ಗೆ ಕಾರ್ಮಿಕ ಸಂಘಟನೆಗಳ ಮುಖಂಡರು, ಬೈಕ್‌ ರ್ಯಾಲಿ ನಡೆಸಿ, ಸ್ವಯಂ ಪ್ರೇರಿತ ಬಂದ್‌ ಗೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ವರ್ತಕರು ಮಾರುಕಟ್ಟೆ ಪ್ರದೇಶ, ಎಪಿಎಂಸಿ ಮೊದಲಾದ ಕರೆ ಮಧ್ಯಾಹ್ನದವರೆಗೆ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಬಂದ್‌ ಬೆಂಬಲಿಸಿದರು. ಕೈಗಾರಿಕಾ ಪ್ರದೇಶದಲ್ಲಿ ಶೇ. 60 ರಷ್ಟು ಕಾರ್ಖಾನೆಗಳು ಕಾರ್ಯ ನಿರ್ವಹಿಸಲಿಲ್ಲ. ಚಿತ್ರಮಂದಿರಗಳ ಪ್ರದರ್ಶನ ಸ್ಥಗಿತವಾಗಿತ್ತು.

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಉಳಿದಂತೆ ಬಸ್‌ ಸಂಚಾರ ಎಂದಿನಂತಿತ್ತು. ಶಾಲಾಕಾಲೇಜುಗಳು, ಕಚೇರಿಗಳು ಕಾರ್ಯ ನಿರ್ವಹಿಸಿದವು. ಅಲ್ಲದೆ ಬಹುತೇಕ ಜನ ಜೀವನ ಎಂದಿನಂತಿತ್ತು.

ದೊಡ್ಡಬಳ್ಳಾಪುರ ನಗರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಸಿದ್ದಲಿಂಗಯ್ಯ ವೃತ್ತದ ಬಳಿ ಸೇರಿದ ನೂರಾರು ಕಾರ್ಮಿಕರು ಬಹಿರಂಗ ಸಭೆಯಲ್ಲಿ ಭಾಗವಹಿಸಿದ್ದರು.

ಬಹಿರಂಗ ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಮುಖಂಡರು, ಕೇಂದ್ರ ಸರ್ಕಾರ ಕಾರ್ಮಿಕರ ವಿರುದ್ಧ 4 ಕಾರ್ಮಿಕ ಮಸೂದೆ ಗಳನ್ನು ಜಾರಿಗೊಳಿಸಿರುವುದು ಕಾರ್ಮಿಕರಿಗೆ ಮಾರಕವಾಗಿದೆ. ತಮ್ಮ ಹಕ್ಕು ಭಾದ್ಯತೆಗಳನ್ನು ಉಳಿಸಿಕೊಳ್ಳಲು ಇದ್ದ, ಕಾರ್ಮಿಕ ಸಂಘಟನೆ, ಮುಷ್ಕರ, ಕೆಲಸದ ಅವಧಿ ಮೊದಲಾದ ಹಕ್ಕುಗಳನ್ನು ಈ ಮಸೂದೆಯಲ್ಲಿ ಕಿತ್ತುಕೊಂಡು ಕಾರ್ಮಿಕರನ್ನು ಶೋಷಣೆಗೆ ಗುರಿ ಮಾಡುತ್ತಿವೆ.

ಕಾರ್ಮಿಕರು ನೂರಾರು ವರ್ಷಗಳ ಕಾಲ ಹೋರಾಟ ಮಾಡಿ ಪಡೆದ ಹಕ್ಕುಗಳನ್ನು ನಿರಾಕರಿಸುತ್ತವೆ ಮತ್ತು ಮಾಲೀಕರ ಪರವಾಗಿವೆ. ಈ ಮಸೂದೆಗಳನ್ನು ರದ್ದುಗೊಳಿಸಬೇಕು. ಬಡವರ ಜೀವನಧಾರವಾಗಿರುವ ನರೇಗಾ ಯೋಜನೆಯನ್ನು ಪುನ‌ರ್ ಸ್ಥಾಪಿಸಿ ಜಿ-ಬಿರಾಮ್‌ಜಿ ಕಾಯ್ದೆ ಹಾಗೂ ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು. ರಾಜ್ಯ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಸೇವಾ ನಿಯಮಗಳನ್ನುರಚಿಸಬಾರದು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ದೇಶದ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿಲುವು ಬದಲಾಗಬೇಕು, ರೈತರಿಗೆ ಮಾರಕವಾಗಿರುವ ಬೀಜ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು, ವಿಮಾ ತಿದ್ದುಪಡಿ ಕಾಯ್ದೆ. ಶಾಂತಿ ಕಾಯ್ದೆರದ್ದುಗೊಳಿಸಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್ ಅನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕು. ಈ ನಿಟ್ಟಿನಲ್ಲಿ ಇಂದು ಕರೆ ನೀಡಿರುವ ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೆಂಬಲಿಸಿವೆ ಎಂದರು.

ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘ, ಕನ್ನಡ ಪಕ್ಷದ ದಲಿತ ಸಂಘರ್ಷ ಸಮಿತಿ, ಸಿಪಿಎಂ, ಕನ್ನಡಪರ, ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ವಿವಿಧ ಕಾರ್ಖಾನೆಗಳ ಕಾರ್ಮಿಕ ಸಂಘಗಳು, ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]