ಸರಿಯಾಗಿ SSLC ಫಲಿತಾಂಶ ಬರದ ಶಾಲೆಗಳ ಅತಿಥಿ ಶಿಕ್ಷಕರ ಮೇಲೂ ಕ್ರಮ; ಸಿಇಓ ಭುವನೇಶ ಪಾಟೀಲ

Action will also be taken against guest teachers of schools whose SSLC results are not declared correctly; CEO Bhuvanesh Patil

ಧಾರವಾಡ: ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ಎಸ್.ಎಸ್.ಎಲ್.ಸಿ. (SSLC) ಫಲಿತಾಂಶ ಸುಧಾರಣೆಯಲ್ಲಿ ಎಲ್ಲ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಶಿಕ್ಷಕರ, ಆಡಳಿತ ಮಂಡಳಿಗಳ ಮತ್ತು ಇಲಾಖೆಯ ಪಾತ್ರ ಮುಖ್ಯವಾಗಿದೆ. ಪ್ರಸ್ತಕ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಕಡಿಮೆಯಾದಲ್ಲಿ ಸಂಬಂಧಿಸಿದವರೊಂದಿಗೆ, ಅತಿಥಿ ಶಿಕ್ಷಕರ ಮೇಲೂ ಕ್ರಮಕೈಗೊಳ್ಳಲಾಗುವುದು. ಮತ್ತು ಭೋದನಾ ಗುಣಮಟ್ಟ ವಿಶ್ಲೇಷಿಸಿ, ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಕ್ರಮವಹಿಸಲಾಗುವುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಎಚ್ಚರಿಕೆ ನೀಡಿದರು.

ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆಯು ಧಾರವಾಡ ಜಿಲ್ಲೆಯ 7 ತಾಲೂಕುಗಳ ಸರ್ಕಾರಿ, ಅನುದಾನಿತ ಹಾಗೂ ಅನುದಾನಿತ ಪ್ರೌಢಶಾಲೆಗಳು ನಿರೀಕ್ಷಿತ ಫಲಿತಾಂಶ ಸಾಧಿಸದ ಮುಖ್ಯೋಪಾಧ್ಯಾಯರ ಹಾಗೂ ಎಲ್ಲ ಪ್ರೌಢಶಾಲೆಗಳ ನೋಡಲ್ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಫಲಿತಾಂಶ ಸುಧಾರಣೆಯಲ್ಲಿ ಕ್ರಮವಹಿಸಿದ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಕ್ರಮವಹಿಸದ ಅನುದಾನಿತ, ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣ ಹಿಂಪಡೆಯಲು ಶಾಲೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಶಾಲೆ ನವೀಕರಣ ಮಾಡುವಾಗ ಕೇವಲ ಭೌತಿಕ ಸೌಕರ್ಯಗಳನ್ನು ಮಾತ್ರ ಪರಿಗಣಿಸದೇ ಆ ಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಹಾಗೂ ಗುಣಮಟ್ಟವನ್ನು ಪರಿಗಣಿಸಬೇಕೆಂದು ಅವರು ತಿಳಿಸಿದರು.

ಕಳೆದ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಧಾರವಾಡ ಗ್ರಾಮೀಣ-02, ಧಾರವಾಡ ಶಹರ -08, ಹುಬ್ಬಳ್ಳಿ ಗ್ರಾಮೀಣ-04, ಹುಬ್ಬಳ್ಳಿ ಶಹರ -16, ಕಲಘಟಗಿ-01, ಕುಂದಗೋಳ-03, ನವಲಗುಂದ- 03 ಸೇರಿದಂತೆ ಒಟ್ಟು 37 ಪ್ರೌಢಶಾಲೆಗಳಲ್ಲಿ ಶೇ. 50 ಕ್ಕಿಂತ ಕಡಿಮೆ ಫಲಿತಾಂಶ ಬಂದಿದೆ.

ಅನುದಾನ ರಹಿತ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಫಲಿತಾಂಶ ಕಡಿಮೆ ಆಗಿರುವುದು ವಿಶ್ಲೇಷಣೆಯಿಂದ ಕಂಡುಬಂದಿದೆ. ಇಂತಹ ಶಾಲೆಗಳ ಮಾನ್ಯತೆ ನವೀಕರಣ ಹಿಂಪಡೆಯಲು ಕ್ರಮವಹಿಸಬೇಕು. ಹಾಗೂ ಅನುದಾನಿತ ಶಾಲೆಗಳ ಅನುದಾನವನ್ನು ಹಿಂದಕ್ಕೆ ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಉಪನಿರ್ದೇಶಕರಿಗೆ ಸಿಇಓ ಭುವನೇಶ ಪಾಟೀಲ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಹಾಗೂ ಪ್ರಸ್ತುತ ವರ್ಷದಲ್ಲಿ ಪೂರ್ವಸಿದ್ಧತಾ ಪರೀಕ್ಷೆ-1 ಮತ್ತು ಪರೀಕ್ಷೆ-2 ರಲ್ಲಿ ಶೇ.50 ಕ್ಕಿಂತ ಕಡಿಮೆ ಫಲಿತಾಂಶ ಮಾಡಿದ ಶಾಲೆಗಳಲ್ಲಿ ಫಲಿತಾಂಶ ಕಡಿಮೆಯಾಗಲು ಕಾರಣಗಳೇನು ಪರಿಶೀಲಿಸಬೇಕು. ಮತ್ತು ಫಲಿತಾಂಶ ಸುಧಾರಣೆಯಲ್ಲಿ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ನೋಡಲ್ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಬೇಕು.

ಆಯಾ ಕ್ಷೇತ್ರಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ, ಮಾರ್ಗದರ್ಶನವನ್ನು ನಿರಂತರ ಭೇಟಿಯ ಮೂಲಕ ನೀಡಬೇಕೆಂದು ಅವರು ತಿಳಿಸಿದರು.

2025-26 ನೇ ಸಾಲಿನ ಪೂರ್ವಸಿದ್ಧತಾ ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಫಲಿತಾಂಶ ವಿಶ್ಲೇಷಣೆ ಮಾಡಿ, ಪೂರ್ವಸಿದ್ಧತಾ ಪರೀಕ್ಷೆ-3 ರ ಹಾಗೂ ವಾರ್ಷಿಕ ಪರೀಕ್ಷೆಯಲ್ಲಿ ನಿರಂತರವಾಗಿ ಕಡಿಮೆ ಫಲಿತಾಂಶ ಸಾಧಿಸಿದರೆ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಸ್ಥಗಿತಗೊಳಿಸಲು ಹಾಗೂ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮಾನ್ಯತೆ ನವೀಕರಣ ಹಿಂಪಡೆಯುವಲ್ಲಿ ಶಿಕ್ಷಣ ಇಲಾಖೆ ಕ್ರಮವಹಿಸಬೇಕು.

ಅನುಷ್ಠಾನಾಧಿಕಾರಿಗಳಾದ ಸಿಆರ್‍ಪಿ, ಬಿಆರ್‍ಪಿ, ಬಿಆರ್‍ಸಿ ಅವರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಿರಂತರ ಭೇಟಿ ನೀಡಿ, ಶೈಕ್ಷಣಿಕವಾಗಿ ಶಾಲೆಗಳ ಗುಣಾತ್ಮಕ ಶಿಕ್ಷಣ ಹೆಚ್ಚಿಸುವಲ್ಲಿ ಕ್ರಮವಹಿಸಬೇಕು. ಮತ್ತು ಶಾಲಾ ಭೇಟಿ, ಸಂದರ್ಶನದ ವರದಿಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಮೂಲಕ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಅವರು ಸೂಚಿಸಿದರು.

ಜಿಲ್ಲೆಯ ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು ಅತಿಥಿ ಶಿಕ್ಷಕರು ಸರಿಯಾದ ಬೋಧನೆ ಮಾಡುವಂತೆ ನಿಗಾವಹಿಸಬೇಕು. ಹಾಗೂ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡದಿರುವವರ ಮಾಹಿತಿಯನ್ನು ನೀಡಬೇಕು. ಇಂತಹ ಅತಿಥಿ ಶಿಕ್ಷಕರನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕರ್ತವ್ಯಕ್ಕೆ ಹಾಜರುಪಡಿಸಬಾರದು.

2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಅತಿಥಿ ಶಿಕ್ಷಕರ ಹಾಗೂ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರ ಕಾರ್ಯನಿರ್ವಹಣೆ ಕುರಿತು ವಿಶ್ಲೇಷಣೆ ಮಾಡಿ, ಉಪನಿರ್ದೇಶಕರು ವರದಿ ಸಲ್ಲಿಸಬೇಕು. ಮತ್ತು ಅತಿಥಿ ಶಿಕ್ಷಕರು ಅದೇ ಶಾಲೆಗಳಲ್ಲಿ ಎಷ್ಟು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದನ್ನು ಗಮನಿಸಿ ಉತ್ತಮವಾಗಿ ಕಾರ್ಯನಿರ್ವಹಿಸದೇ ಇರುವವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಸಿಇಓ ಭುವನೇಶ ಪಾಟೀಲ ಅವರು ನಿರ್ದೇಶಿಸಿದರು.

ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಚೆನ್ನಾಗಿದ್ದು, ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇದ್ದು, ಫಲಿತಾಂಶ ಚೆನ್ನಾಗಿ ಬರದೆ ಇರುವ ಶಾಲೆಗಳನ್ನು ಗುರುತಿಸಿ ಸರ್ಕಾರಕ್ಕೆ ಅನುದಾನ ಹಿಂಪಡೆಯಲು ಪ್ರಸ್ತಾವನೆ ಸಲ್ಲಿಸಲಾಗುವುದು.

2024-25 ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೇ.70, ಅನುದಾನರಹಿತ ಶಾಲೆಗಳಲ್ಲಿ ಶೇ.60 ಫಲಿತಾಂಶ ಬಂದಿದೆ. ಅನುದಾನಿತ ಶಾಲೆಗಳಲ್ಲಿ ಕಡಿಮೆ ಫಲಿತಾಂಶ ಬಂದಿರುವುದು ಕಂಡು ಬಂದಿದೆ. ಹಂತಹಂತವಾಗಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಿಸಲು ಕ್ರಮವಹಿಸಬೇಕು. 3 ನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಫಲಿತಾಂಶ ಸಾಧಿಸಬೇಕೆಂದು ಇಲಾಖೆಗೆ ಅವರು ಸೂಚಿಸಿದರು.

ವೇದಿಕೆಯಲ್ಲಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕ್ಷೇತ್ರಶಿಕ್ಷಣಾಧಿಕಾರಿಗಳು, ಡಯಟ್ ಉಪಪ್ರಾಚಾರ್ಯರು ಹಾಗೂ ಹಿರಿಯ ಉಪನ್ಯಾಸಕರು, ಆರ್.ಎಂ.ಎಸ್.ಎ ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿಗಳು, ಉಪನಿರ್ದೇಶಕರ ಕಚೇರಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು ಮತ್ತು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ಪೂರ್ವಸಿದ್ಧತಾ ಪರೀಕ್ಷೆ-2 ರಲ್ಲಿ ಶೇ.50 ಕ್ಕಿಂತ ಕಡಿಮೆ ಫಲಿತಾಂಶ ಸಾಧಿಸಿದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಭಾಗವಹಿಸಿದ್ದರು.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]