ದೊಡ್ಡಬಳ್ಳಾಪುರ: ಶ್ರೀರಾಮ ಆಸ್ಪತ್ರೆ, ಮೆಡ್ಸ್ಟಾರ್ ಆಸ್ಪತ್ರೆ ಹಾಗೂ ದೊಡ್ಡಬಳ್ಳಾಪುರ ವಕೀಲರ ಸಂಘದ ವತಿಯಿಂದ ನಗರದ ನ್ಯಾಯಾಲಯದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Free health check-up camp) ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಕೀಲರು ಮತ್ತು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ದೊಡ್ಡಬಳ್ಳಾಪುರದ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿರ್ಮಲಾ ಕೆ. ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿರಂತರ ಕೆಲಸದ ಒತ್ತಡದಲ್ಲಿರುವ ನ್ಯಾಯಾಂಗ ಕ್ಷೇತ್ರದ ಬಂಧುಗಳಿಗೆ ಇಂತಹ ಆರೋಗ್ಯ ಶಿಬಿರಗಳು ಅತ್ಯಗತ್ಯ ಎಂದು ತಿಳಿಸಿದರು.
ಕಿಮ್ಸ್ ಆಸ್ಪತ್ರೆಯ ಅಧ್ಯಕ್ಷ ಡಾ. ಟಿ.ಹೆಚ್. ಅಂಜಿನಪ್ಪ ಮಾತನಾಡಿ, ಮಾನಸಿಕ ಒತ್ತಡ ನಿರ್ವಹಣೆ (Stress Management), ಜಠರಗರುಳಿನ ಕಾಯಿಲೆಗಳು (Gastrointestinal Disorders) ಹಾಗೂ ಮಧುಮೇಹ (Diabetes) ನಿಯಂತ್ರಣದ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆಗಾಗಿ ಡಾ. ವಿಜಯ್ ಕುಮಾರ್ ಹೆಚ್.ಜಿ. ಮತ್ತು ಡಾ. ಟಿ.ಹೆಚ್. ಅಂಜಿನಪ್ಪ ಅವರನ್ನು ನ್ಯಾಯಾಧೀಶರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್.ಎ. ಶಿಲ್ಪ, 1ನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಆರ್.ಜೆ.ಎಸ್., ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾ ದಾಸರಿ ಕ್ರಾಂತಿ ಕಿರಣ್, ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಪ್ರೀತಿ ಕೆ., 2ನೇ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರು ರವಿ ಬೆಟಗಾರ್.
ವಕೀಲರ ಸಂಘದ ಅಧ್ಯಕ್ಷರ ರೇಣುಕಾ ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿಕೆ ಕನಕರಾಜು, ಉಪಾಧ್ಯಕ್ಷ ಜಗನ್ನಾಥ್, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಹಿರಿಯ ವಕೀಲರು ಉಪಸ್ಥಿತರಿದ್ದರು.