20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

Manufacturing of 500 helicopters in 20 years: M.B. Patil

ವೇಮಗಲ್ (ಕೋಲಾರ): ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಈ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ (M.B. Patila) ಹೇಳಿದ್ದಾರೆ.

ಮಂಗಳವಾರ ಇಲ್ಲಿ ನಡೆದ ನೂತನ ಘಟಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರು ಮಹಾರಾಷ್ಟ್ರದ ಲೋಕಭವನದಿಂದ ವರ್ಚುಯಲ್ ಮೂಲಕ ಈ ಘಟಕವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವೇಮಗಲ್ ಘಟಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್, ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು, ಕೋಲಾರ ಸಂಸದ ಮಲ್ಲೇಶಬಾಬು ಕೂಡ ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ ಅವರು, ‘ಈ ಘಟಕಕ್ಕೆ ನಾನು ಕೈಗಾರಿಕಾ ಸಚಿವನಾದ ಮೇಲೆ 17 ಎಕರೆ ಜಾಗ ಕೊಟ್ಟಿದ್ದು ದಾಖಲೆ ಅವಧಿ ಅಂದರೆ ಒಂದೂವರೆ ವರ್ಷದಲ್ಲಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ’ ಎಂದು ಹರ್ಷ ವ್ಯಕ್ತಪಡಿಸಿದರು.

‘ಯೋಜನೆಗೆ ತ್ವರಿತ ಗತಿಯಲ್ಲಿ ಅನುಮೋದನೆ, ಇಲಾಖೆಗಳ ನಡುವೆ ಅತ್ಯುತ್ತಮ ಸಮನ್ವಯ, ಮೂಲಸೌಕರ್ಯ ಸನ್ನದ್ಧತೆ ಮತ್ತು ಕೈಗಾರಿಕಾ ಪಾಲುದಾರರೊಂದಿಗೆ ಸಕ್ರಿಯ ಪಾಲ್ಗೊಳ್ಳುವಿಕೆಗಳಿಂದ ಈ ಚಾರಿತ್ರಿಕ ಯೋಜನೆ ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಂಡಿದೆ’ ಎಂದು ಸಚಿವರು ಹೇಳಿದರು.

ಫ್ರಾನ್ಸ್, ಅಮೆರಿಕ, ಬ್ರೆಜಿಲ್ ನಂತರ ನಮ್ಮಲ್ಲಿ ಜಗತ್ತಿನ ನಾಲ್ಕನೆಯ ಎಚ್125 ಹೆಲಿಕಾಪ್ಟರ್ ತಯಾರಿಕೆ ಮತ್ತು ಅಂತಿಮ ಜೋಡಣೆ ಘಟಕ (ಎಫ್ಎಎಲ್- ಫೈನಲ್ ಅಸೆಂಬ್ಲಿ ಲೈನ್) ಬಂದಿರುವುದು ಈ ವಲಯಕ್ಕೆ ಮತ್ತಷ್ಟು ಬಲ ತರಲಿದೆ. ಜೊತೆಗೆ ನಿರ್ವಹಣೆ, ದುರಸ್ತಿ ಮತ್ತು ಓವರಹಾಲ್ (ಎಂಆರ್ಒ- ಮೇಂಟೆನೆನ್ಸ್, ರಿಪೇರ್ & ಓವರ್ಹಾಲ್) ಸ್ಥಾವರವೂ ಆರಂಭಗೊಂಡಿರುವುದು ರಾಜ್ಯದ ಕೈಗಾರಿಕಾಸ್ನೇಹಿ ವಾತಾವರಣಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಇಲ್ಲಿ ಮೊದಲಿಗೆ ವರ್ಷಕ್ಕೆ 10 ಹೆಲಿಕಾಪ್ಟರುಗಳನ್ನು ತಯಾರಿಸಲಾಗುವುದು. ಮುಂದಿನ ಎರಡು ದಶಕಗಳಲ್ಲಿ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಇಲ್ಲಿ ಏವಿಯಾನಿಕ್ಸ್, ಹೈಡ್ರಾಲಿಕ್ ಸರ್ಕ್ಯೂಟ್, ಬಿಡಿಭಾಗಗಳು, ಇಂಧನ ವ್ಯವಸ್ಥೆ ಮತ್ತು ಎಂಜಿನ್ನುಗಳ ತಯಾರಿಕೆ ಸೇರಿದಂತೆ ಹಲವು ಮಹತ್ವದ ಚಟುವಟಿಕೆಗಳು ನಡೆಯಲಿವೆ. ಆಂಧ್ರಪ್ರದೇಶ, ಉತ್ತರಪ್ರದೇಶ ಮತ್ತು ಗುಜರಾತ್ ರಾಜ್ಯಗಳ ತೀವ್ರ ಸ್ಪರ್ಧೆಯನ್ನು ಎದುರಿಸಿ, ರಾಜ್ಯವು ಈ ಯೋಜನೆಯನ್ನು ಗೆದ್ದುಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಅವರು ಬಣ್ಣಿಸಿದ್ದಾರೆ.

ಏರ್ ಬಸ್ ಕಂಪನಿಯು ಜಾಗತಿಕ ಮಟ್ಟದಲ್ಲಿ ಏಕ ಎಂಜಿನ್ ಹೆಲಿಕಾಪ್ಟರುಗಳ ಕ್ಷೇತ್ರದಲ್ಲಿ 4,300 ಹೆಲಿಕಾಪ್ಟರುಗಳೊಂದಿಗೆ, ಮಾರುಕಟ್ಟೆಯಲ್ಲಿ ಶೇಕಡ 80ರಷ್ಟು ಪಾಲು ಹೊಂದಿದೆ. ಈ ಹೆಲಿಕಾಪ್ಟರುಗಳು ಇದುವರೆಗೂ 38 ಮಿಲಿಯನ್ ಗಂಟೆಗಳಷ್ಟು ಕಾಲ ಹಾರಾಟ ನಡೆಸಿ ದಾಖಲೆ ನಿರ್ಮಿಸಿವೆ. ರಾಜ್ಯದಲ್ಲಿ ಎಚ್125 ದರ್ಜೆಯ ಹೆಲಿಕಾಪ್ಟರ್ ತಯಾರಿಕೆಗೆ ಬೇಕಾದ ವಿಶ್ವಾಸಾರ್ಹತೆ ಮತ್ತು ಎಂಜಿನಿಯರಿಂಗ್ ಪರಿಣತಿ ಇದೆ. ಈ ವಲಯದಲ್ಲಿ ರಾಜ್ಯ ಸರಕಾರವು ಕೇಂದ್ರ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುವ ಆಸಕ್ತಿ ಹೊಂದಿದೆ ಎಂದು ಅವರು ಹೇಳಿದ್ದಾರೆ.

ಈ ಘಟಕವು ಭಾರತದ ದಕ್ಷತೆಯು ಪಡೆದುಕೊಳ್ಳುತ್ತಿರುವ ಹೊಸ ಶಕ್ತಿ ಮತ್ತು ಜಾಗತಿಕ ಮಟ್ಟದಲ್ಲಿ ಏರ್ಪಡಿಸಿಕೊಳ್ಳುವ ಸಹಭಾಗಿತ್ವದ ಸಂಕೇತವಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಮೃದ್ಧ ಅವಕಾಶಗಳು ತೆರೆದುಕೊಳ್ಳಲಿದ್ದು, ಉದ್ಯೋಗಸೃಷ್ಟಿಯೂ ಹೆಚ್ಚಾಗಲಿದೆ. ಇದರಿಂದ ರಾಜ್ಯದ ಯುವಜನರಿಗೆ ಆಧುನಿಕ ತಂತ್ರಜ್ಞಾನ ವಲಯಕ್ಕೆ ಪ್ರವೇಶ ಸಿಗಲಿದೆ ಎಂದು ಪಾಟೀಲ ಹೇಳಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!