
ದೊಡ್ಡಬಳ್ಳಾಪುರ: ಸುಮಾರು 4,5 ತಿಂಗಳ ಹಿಂದೆ ಕಾರ್ಖಾನೆಗೆ ಸೇರಿದ ನಿರ್ಜನ ಪ್ರದೇಶದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗುತ್ತಿರುವ ವ್ಯಕ್ತಿಯೋರ್ವನ ಅಸ್ಥಿಪಂಜರ (Skeleton) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಪತ್ತೆಯಾಗಿದೆ.
ಮೃತನ ಗುರುತು, ವಿಳಾಸ ಪತ್ತೆಯಾಗಿಲ್ಲ.
ಬ್ಯಾಂಕ್ ಸರ್ಕಲ್ ಬಳಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಪ್ಯಾಕ್ಟರಿಗೆ ಸೇರಿದ ನಿರ್ಜನ ಪ್ರದೇಶದಲ್ಲಿ ಸುಮಾರು 4,5 ತಿಂಗಳ ಹಿಂದೆ ನೇಣುಬಿಗಿದು ಕೊಂಡಿರುವ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ.
ಇಂದು ನಿರ್ಜನ ಪ್ರದೇಶದ ಸ್ವಚ್ಚತಾ ಕಾರ್ಯದ ವೇಳೆ, ಹೊಂಗೆ ಮರದ ಕೆಳಗೆ ಮೂಳೆಗಳು ದೊರೆತಿದ್ದು, ಮರದ ಮೇಲೆ ನೋಡಿದಾಗ ನೇತಾಡುತ್ತಿರುವ ಸ್ಥಿತಿಯಲ್ಲಿ ಬುರುಡೆ ನೇತಾಡುತ್ತಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸುತ್ತಿದ್ದಾರೆ.