ಕುಣಿಗಲ್: ಕೃಷಿಯಲ್ಲಿ ತೊಡಗಿರುವ ತಾಲೂಕಿನ ಗಂಡು ಮಕ್ಕಳನ್ನು ಮದುವೆ ಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನ ದಲ್ಲಿ ವಿಶೇಷ ಭತ್ಯೆ (Allowance) ಹಾಗೂ ಸ್ಥಾನ ಮಾನ ಘೋಷಿಸುವಂತೆ ಕುಣಿ ಗಲ್ ಶಾಸಕ ಡಾ.ಎಚ್ ರಂಗನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಯುವತಿಯರು ಹೆಚ್ಚಾಗಿ ಸರಕಾರಿ ನೌಕರರು, ನಗರಗಳಲ್ಲಿ ಗಂಡು ಮಕ್ಕಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು, ಕೂಲಿಕಾರ್ಮಿಕರ ಮಕ್ಕಳನ್ನು ಮದುವೆ ಆಗಲು ಯಾರೂ ಒಪ್ಪದ ಕಾರಣ ಸರಕಾರ ಹೊಸ ಯೋಜನೆ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.
ಇದೀಗ ಈ ಪತ್ರ ವೈರಲ್ ಆಗಿದೆ.

ಪತ್ರದಲ್ಲೇನಿದೆ: ನನ್ನ ಮತ ಕ್ಷೇತ್ರ ಕುಣಿಗಲ್ ತಾಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಬನೆ ಹೆಚ್ಚಿದೆ. ಹೀಗಾಗಿ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ಅವರು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ.
ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, ಮೂವತ್ತು ವರ್ಷ ದಾಟಿದರೂ ಅವರ ವಿವಾಹ ನಡೆಯುತ್ತಿಲ್ಲ. ಹೀಗಾಗಿ ಅವರು ತೊಂದರೆಗೆ ಸಿಲುಕಿದ್ದು, ವ್ಯವಸಾಯ ಮಾಡಿಕೊಂಡಿರುವವರನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ, ವಿಶೇಷ ಸ್ಥಾನ ಮಾನ ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.