ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ ಸಂತೋಷ ಲಾಡ್ ಕಟ್ಟುನಿಟ್ಟಿನ ಸೂಚನೆ

Provide electricity for 7 hours every day to facilitate farmers' agricultural work; Minister Santosh Lad

ಧಾರವಾಡ: ಬೇಸಿಗೆ ಅವಧಿ ಆರಂಭ ಆಗುತ್ತಿರುವದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad) ಅವರು ಹೇಳಿದರು.

ಅವರು ಇಂದು (ಫೆ.20) ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಹೆಸ್ಕಾಂ ಸಂಸ್ಥೆಯ ವಿವಿಧ ಕಾಮಗಾರಿಗಳ ಪ್ರಗತಿ ಹಾಗೂ ಬೇಸಿಗೆ ಅವಧಿಯ ವಿದ್ಯುತ್ ಪೂರೈಕೆ ಸಿದ್ದತೆ ಕುರಿತು ಹೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ಜರುಗುಸಿ, ಮಾತನಾಡಿದರು.

ಜಿಲ್ಲೆಯಲ್ಲಿ 67 ಕೃಷಿ ವಿದ್ಯುತ್ ಫೀಡರ್‍ಗಳಿವೆ. ಇದರಲ್ಲಿ 41 ಫೀಡರ್‍ಗಳಿಂದ ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯೊಳಗೆ, 12 ಫೀಡರ್‍ಗಳಿಗೆ ಸಂಜೆ 6 ರಿಂದ ರಾತ್ರಿ 9 ಗಂಟೆ ಹಾಗೂ ರಾತ್ರಿ 10 ರಿಂದ ಮಧ್ಯರಾತ್ರಿ 1 ಗಂಟೆಯೊಳಗೆ ಮತ್ತು 8 ಫೀಡರ್‍ಗಳಿಂದ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮತ್ತು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಹೀಗೆ ನಿಗದಿತ ಫೀಡರಗಳಿಂದ ವಿವಿಧ ಅವಧಿಯಲ್ಲಿ ಒಟ್ಟು 7 ತಾಸು ಕೃಷಿ ಚಟುವಟಿಕೆಗಳಿಗಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.

ಹಿಂಗಾರು ಗೊಧಿ, ಬತ್ತ, ಕಬ್ಬು ಬೆಳೆಗಳಿಗೆ ನೀರಿನ ಅಗತ್ಯವಿದ್ದು, ರೈತರು ನೀರಾವರಿಗಾಗಿ ಕೊಳವೆಬಾವಿಗಳ ಹೆಚ್ಚು ಅವಲಂಬನೆ ಆಗಿದ್ದಾರೆ. ಕಲಘಟಗಿ, ಅಳ್ನಾವರ ಮತ್ತು ಜಿಲ್ಲೆಯ ಇತರ ಭಾಗಗಳಲ್ಲಿ ಸರಿಯಾಗಿ ವಿದ್ಯುತ್ ಪೂರೈಸುತ್ತಿಲ್ಲ, ತಡ ರಾತ್ರಿ ವಿದ್ಯುತ್ ನೀಡುವದರಿಂದ ನೀರು ಹಾಯಿಸಲು ತೊಂದರೆ ಆಗುತ್ತಿದೆ ಎಂದು ರೈತರು ಕರೆ ಮಾಡಿ, ಸಮಸ್ಯೆ ಹೇಳುತ್ತಿದ್ದಾರೆ ಎಂದರು.

ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆಯನ್ನು ಶಿಪ್ಟ್ ಆಧಾರದಲ್ಲಿ ಮಾಡಿದರೂ ಪರವಾಗಿಲ್ಲ, ಆದರೆ ತೀರಾ ಮಧ್ಯರಾತ್ರಿ ವಿದ್ಯುತ್ ಪೂರೈಸಿದರೆ, ರಾತ್ರಿ ಹೊತ್ತಲ್ಲಿ ರೈತರಿಗೆ ತೊಂದರೆ ಆಗುತ್ತದೆ. ಇದನ್ನು ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

ಅತೀ ಹೆಚ್ಚು ಸಮಸ್ಯೆ ಉಂಟಾಗುತ್ತಿರುವ ತಬಕದಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರ ಉನ್ನತಿಕರಿಸುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲಾಧಿಕಾರಿಗಳು, ಹೆಸ್ಕಾಂ ಅಧಿಕಾರಿ, ಇಂಜನೀಯರಗಳೊಂದಿಗೆ ತಬಕದಹೊನ್ನಳ್ಳಿ ವಿದ್ಯುತ್ ಸ್ಟೇಶನ್ ಭೇಟಿ ನೀಡಿ, ಕಾಮಗಾರಿ ಪ್ರಗತಿ ಪರಿಶೀಲಿಸಲು ಸಚಿವರು ಸೂಚಿಸಿದರು.

ನಿಗದಿ ಮತ್ತು ಅರಳಿಕಟ್ಟಿ ಕ್ರಾಸ್, ಬಮ್ಮಿಗಟ್ಟಿ ಸೇರಿ ಮೂರು ಗ್ರಾಮಗಳಿಗೆ ಹೊಸದಾಗಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲು ಸರಕಾರದಿಂದ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಟೆಂಡರ್, ಗುತ್ತಿಗೆದಾರ ಸಮಸ್ಯೆಗಳಿಂದ ವಿಳಂಬವಾಗುತ್ತಿದೆ ಎಂದು ಹೇಳಿದ ಸಚಿವರು ಕೆಪಿಟಿಸಿಎಲ್ ನೂತನ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ವ್ಹಿ. ರಾಮ್ ಪ್ರಸಾತ್ ಮನೋಹರ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣ ಸಮಸ್ಯೆ ಬಗೆಹರಿಸಲು ಸೂಚಿಸಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಾತನಾಡಿ, ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ವಿತರಣೆ ಬಗ್ಗೆ ಸರಿಯಾದ ಕ್ರಮವಹಿಸಬೇಕು. ಕಾಮಗಾರಿಗಳನ್ನು ತೀವ್ರಗೊಳಿಸಿ, ಬೇಗ ಮುಗಿಸಬೇಕು. ರೈತರು ಟಿಸಿ ಬಯಸಿದಲ್ಲಿ ಬೇಗನೆ ಪೂರೈಸಬೇಕು. ಅಗತ್ಯಗಳಿಗೆ ಅನುಗುಣವಾಗಿ ಟಿಸಿಗಳ ಹೆಚ್ಚು ದಾಸ್ತಾನು ಹೊಂದಬೇಕು ಎಂದು ಅವರು ತಿಳಿಸಿದರು.

ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‍ಪೀರ್ ಎಸ್. ಖಾದ್ರಿ, ಮಹಾನಗರ ಪೆÇಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವೇದಿಕೆಯಲ್ಲಿ ಇದ್ದರು.

ಸಭೆಯಲ್ಲಿ ಹೆಸ್ಕಾಂ ತಾಂತ್ರಿಕ ನಿರ್ದೇಶಕ ಜಗದೀಶ ಸಾವಳಗಿ, ಮುಖ್ಯ ಇಂಜನೀಯರ್ ದೀಪಕ ಕಾಮತ, ಅಧೀಕ್ಷಕ ಇಂಜನೀಯರ್ ಕೆ.ವಿ.ಪಾಗಿ, ಕೆಪಿಟಿಸಿಎಲ್ ಅಧೀಕ್ಷಕ ಅಭಿಯಂತರ ಶಿಲ್ಪಾ, ಕಾರ್ಯಪಾಲಕ ಅಭಿಯಂತರರಾದ ಎಂ.ಟಿ.ದೊಡಮನಿ, ರವೀಂದ್ರ ಗದಗಕರ, ಸಹಾಯಕ ಕಾರ್ಯಪಾಲಕ ಅಭಿಯಂತರ ಗುಲ್ಜಾರ ಅಹ್ಮದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ವಿ.ಎನ್.ಪಾಟೀಲ ಸೇರಿದಂತೆ ವಿವಿಧ ಇಂಜನೀಯರಗಳು, ಅಧಿಕಾರಿಗಳು ಭಾಗವಹಿಸಿದ್ದರು.

ವಿದ್ಯುತ್ ತಗುಲಿ ಸಾವಿಗಿಡಾಗಿದ್ದ ರೈತನ ಕುಟುಂಬಕ್ಕೆ ಪರಿಹಾರ: ಕಳೆದ 2023 ಜುಲೈ ತಿಂಗಳ ಮಳೆಗಾಲ ಅವಧಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವಿಗಿಡಾಗಿದ್ದ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಮೃತ ರೈತ ಮಾರುತಿ ಕೊನಪ್ಪನವರ ಅವರ ಪತ್ನಿ ಮಲ್ಲವ್ವ ಅವರಿಗೆ ಸಚಿವ ಸಂತೋಷ ಲಾಡ ಅವರು ಹೆಸ್ಕಾಂ ಪರವಾಗಿ ರೂ.5 ಲಕ್ಷದ ಪರಿಹಾರ ಚೆಕ್ ವಿತರಿಸಿದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!