ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ, ವೀರಾಪುರ ಗ್ರಾಮದ ಸರ್ಕಾರಿ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರಾಗಿದ್ದ ಬೈಲಾಂಜಿನಪ್ಪ (Bylanjinappa) ಅವರು ಹೃದಯಾಘಾತದಿಂದ (Heart attack) ನಿಧನರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.
ನಿನ್ನ ಸಂಜೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡು, ಅನಾರೋಗ್ಯಕ್ಕೆ ಒಳಗಾಗಿದ್ದರು.
ಕೂಡಲೇ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರು ಇಬ್ಬರು ಮಕ್ಕಳು ಹಾಗೂ ಮಡದಿಯನ್ನು ಅಗಲಿದ್ದಾರೆ. ಮೃತರ ಕಣ್ಣುಗಳನ್ನು ದಾನ ಮಾಡುವ ಮೂಲಕ ನೋವಿನಲ್ಲಿಯೂ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ.
ಅಂತ್ಯಕ್ರಿಯೆ ಇಂದು (ಫೆ.21) ಮಧ್ಯಾಹ್ನ 12.30 ಕ್ಕೆ ವೀರಾಪುರದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.