ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಆರೋಗ್ಯ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

Serve with humanity, transcending caste and religion - CM Siddaramaiah

ಬೆಂಗಳೂರು: ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜೀವ ಉಳಿಸುವ ಸಾರ್ಥಕ ವೃತ್ತಿ

ಇಂದು 1000 ಜನರಿಗೆ ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯವನ್ನೊಳಗೊಂಡಿದೆ ಎಂದರು.

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ

ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೇಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ. ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತ್ಯಂತ ಅವಶ್ಯಕವಾಗಿದ್ದು, ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತದೆ. 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದರು.

ಭ್ರಷ್ಠಾಚಾರ ತಡೆಯಲು ಕೌನ್ಸೆಲಿಂಗ್ ಪ್ರಕ್ರಿಯೆ

ಈ ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. 5700 ಹುದ್ದೆಗಳನ್ನು ವೈದ್ಯರನ್ನು ಸೇರಿದಂತೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ನೌಕರರು ಇದಕ್ಕೆ ಬಲಿಯಾಗಬಾರದು ಎಂದರು.

ರೋಗತಡೆಗಟ್ಟುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು

ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳಿಗೆ ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತವನ್ನು ಪಡೆಯಲು ಯಾವುದೇ ಜಾತಿಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದಂತಹ ತಕ್ಷಣ ಪುನ: ಜಾತಿಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಇಲಾಖೆ ಕಾರ್ಯತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರ ಕಾರ್ಯಗತಗೊಳಿಸಲಾಗುತ್ತಿದೆ ಎಂದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]