ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.
ಮೃತ ದುರ್ದೈವಿಯನ್ನು ಗೀತಂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮರಿಸ್ವಾಮಿ (21 ವರ್ಷ) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ಕುಮ್ಮಾರ ರಾಜಶೇಖರ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬಾಶೆಟ್ಟಿಹಳ್ಳಿ ಕಡೆಯಿಂದ ದೊಡ್ಡಬಳ್ಳಾಪುರ ಕಡೆಗೆ ಬರುವ ವೇಳೆ ರೈಲ್ವೇ ಸ್ಟೇಷನ್ ಸಮೀಪದ ಮಮತಾ ಪೆಟ್ರೋಲ್ ಬಂಕ್ ಸಮೀಪ ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ವಿದ್ಯಾರ್ಥಿಗಳು ಡಿಕ್ಕಿ ಹೊಡೆದು, ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.