ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನ

Applications invited for mobile canteen subsidy

ಬೆಂ.ಗ್ರಾ.ಜಿಲ್ಲೆ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ (Mobile canteen) ನಡೆಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ತರಬೇತಿಯನ್ನು ವಸತಿ ಸಹಿತಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿರುತ್ತದೆ.

ಅರ್ಜಿದಾರರ ಅರ್ಹತೆಗಳು ಮತ್ತು ಸಲ್ಲಿಸಬೇಕಾದ ದಾಖಲೆಗಳು

  1. ಅರ್ಜಿದಾರನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
  2. ಅರ್ಜಿದಾರನ ವಯಸ್ಸು 20 ರಿಂದ 55 ವರ್ಷದೊಳಗಿರಬೇಕು.
  3. ಅರ್ಜಿದಾರನು 10ನೇ ತರಗತಿಯಲ್ಲಿ ಉತ್ತೀರ್ಣನಾಗಿರಬೇಕು.
  4. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.2.00 ಲಕ್ಷ ಮೀರಬಾರದು.
  5. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷ ಮೀರಬಾರದು.
  6. ಅರ್ಜಿದಾರನು ಯಾವ ಜಿಲ್ಲೆಯ ನಿವಾಸಿಯಾಗಿರುತ್ತಾರೋ ಅದೇ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಬೇಕು.
  7. ಆಧಾರ್ ಕಾರ್ಡ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
  8. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರ್ ಅವರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಮತ್ತು ಆದಾರ ಪತ್ರದ ಪ್ರತಿ.
  9. ಚಾಲ್ತಿಯಲ್ಲಿರುವ ಲಘುವಾಹನ ಚಾಲನ ಪರವಾನಿಗೆ ಜೆರಾಕ್ಸ್ ಪ್ರತಿ.
  10. ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿ.
  11. ಯಾವುದೇ ಸರ್ಕಾರಿ ಇಲಾಖೆ/ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿ ಸೇವೆ ಸಲ್ಲಿಸುತ್ತಿಲ್ಲವೆಂದು ಮತ್ತು ಮೊಬೈಲ್ ಕ್ಯಾಂಟೀನ್ ಫಲಾನುಭವಿಯಾಗಿ ಆಯ್ಕೆಯಾದ ಬಳಿಕ ಪ್ರವಾಸೋದ್ಯಮ ‘ಇಲಾಖೆಯಿಂದ ನೀಡುವ ಕೌಶಲ್ಯಾಭಿವೃದ್ಧಿ Enterprenuership (EP) ತರಬೇತಿಯನ್ನು ಕಡ್ಡಾಯವಾಗಿ ಪಡೆಯತ್ತೇನೆ. ರೂ. 100/- ಬೆಲೆಯ ಛಾಪಾ ಕಾಗದದ Affidavit ನಮೂನೆಯಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.
  12. ಅರ್ಜಿದಾರರು ಖಾತೆ ಹೊಂದಿದ ಬ್ಯಾಂಕ್ ನಿಂದ ಸಾಲ ಮಂಜೂರಾತಿ ದೃಢೀಕರಣ ಪತ್ರ ಪಡೆದು ಜೆರಾಕ್ಸ್ ಪ್ರತಿ ಲಗತ್ತಿಸುವುದು.
  13. ಅರ್ಜಿದಾರರು ವಾಸಸ್ಥಳ ದೃಢೀಕರಣದ ಜೆರಾಕ್ಸ್ ಪ್ರತಿ.
  14. ಅರ್ಜಿದಾರನು ಮೇಲಿನ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಮುಚ್ಚಿದ ಲಕೋಟೆಯಲ್ಲಿ ದ್ವಿಪ್ರತಿಯಲ್ಲಿ ಸಲ್ಲಿಸತಕ್ಕದ್ದು.

ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 2026 ರ ಮಾರ್ಚ್. 13 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಲು ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದನ್ನ ಸಹಿಸಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದನ್ನ ಸಹಿಸಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ದಕ್ಷಿಣ ಭಾರತದ ಕ್ಷೇತ್ರಗಳನ್ನು ಕತ್ತರಿಸಿ ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದು ಸರಿಯಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="121132"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!