Support Congress's fight to restore MNREGA: Cmsiddaramaiah

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ‘ಮನರೇಗಾ ವನ್ನು ಉಳಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನ್ಲದಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾ ವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿಅವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು.ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.

ಮನರೇಗಾ ಅಡಿ 12.16 ಕೋಟಿ ಜನರಿಗೆ ಉದ್ಯೋಗ

ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ , 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53 % ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11 % ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದರು.

ಗ್ರಾಮಸ್ವರಾಜ್ಯ ಪರಿಕಲ್ಪನೆಗೆ ಶಕ್ತಿ ತುಂಬಿದ್ದ ಮನರೇಗಾ

ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಗ್ರಾಮಪಂಚಾಯತಿ ಮತ್ತು ಗ್ರಾಮಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ , ಅನುಮತಿ ಇಲ್ಲದೇ , ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಸಾಧ್ಯ. ಆದ್ದರಿಂದ ಮನರೇಗಾ ವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾ ದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿಜಿರಾಮ್ ಜಿ ರದ್ದುಪಡಿಸಿ, ಮನರೇಗಾ ವನ್ನು ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದರು.

ಬೇಡಿಕೆ ಈಡೇರುವವರೆಗೂ ಹೋರಾಟ

ಬೇಡಿಕೆಗಳು: ವಿಬಿಜಿರಾಮ್ ಜಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಮನರೇಗಾ ವನ್ನು ಮರು ಜಾರಿಗೊಳಿಸಬೇಕು. ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ, ದಿನಕ್ಕೆ 400 ರೂ.ಗಳ ಕನಿಷ್ಠ ವೇತನವನ್ನು ದೇಶಾದ್ಯಂತ ನೀಡಬೇಕು. ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದರು. ರೈತವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು. ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್ ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು.

ಬಿಜೆಪಿ ಅಂತಿಮ ದಿನಗಳು ಸಮೀಪಿಸುತ್ತಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

“ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ದೀಪ ಆರುವಾಗ ಜೋರಾಗಿ ಉರಿಯುತ್ತದೆಯಂತೆ. ಅದೇ ರೀತಿ ಬಿಜೆಪಿಯ ಅಂತಿಮ ದಿನಗಳು ಸಮೀಪಿಸಿರುವ ಕಾರಣ, ಮಹಾತ್ಮಾ ಗಾಂಧಿ ಅವರ ಹೆಸರು ಬದಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಈ ದೇಶ ಉಳಿಸಲು ಇಂದು ನಾವು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಪಕ್ಷ ಸದಾ ಎಲ್ಲಾ ವರ್ಗದ ಜನರಿಗೆ ಕಾರ್ಯಕ್ರಮ ನೀಡುತ್ತಾ ಬದುಕಿನಲ್ಲಿ ಬದಲಾವಣೆ ತರುವ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಾತ್ಮ ಗಾಂಧಿ ಅವರ ಹೆಸರಿನಲ್ಲಿ 20 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರವು ಬಡವರಿಗಾಗಿ ಉದ್ಯೋಗ ಖಾತರಿ ಕಾರ್ಯಕ್ರಮ ನೀಡಿತ್ತು. ಇದು ದೇಶದ ಪಾಲಿಗೆ ಕ್ರಾಂತಿಕಾರಿ ಕಾರ್ಯಕ್ರಮ” ಎಂದು ತಿಳಿಸಿದರು.

ಮನರೇಗಾ ಉಳಿಸಿ, ಹಳ್ಳಿಗಳು, ಕಾರ್ಮಿಕರು, ಪಂಚಾಯಿತಿಗಳು ಹಾಗೂ ಮಹಾತ್ಮಾ ಗಾಂಧಿ ಹೆಸರು ರಕ್ಷಿಸಬೇಕು

“ಈ ಕಾರ್ಯಕ್ರಮದಲ್ಲಿ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಯಾವ ಕಾಮಗಾರಿ ಮಾಡಬೇಕು ಎಂಬ ತೀರ್ಮಾನ ಮಾಡುವ ಅಧಿಕಾರ ಹೊಂದಿದ್ದವು. ಹಸಿದ ಹೊಟ್ಟೆ, ಖಾಲಿ ಜೇಬಿನ ನೋವು ಏನು ಎಂಬುದು ನಮಗೆ ಅರಿವಿದೆ. 60% ಗ್ರಾಮೀಣ ಭಾಗದ ಮಹಿಳೆಯರು ಕೂಲಿ ಮಾಡುತ್ತಿದ್ದಾರೆ. ರಾಜ್ಯದಲ್ಲಿರುವ 5900 ಪಂಚಾಯ್ತಿಗಳಲ್ಲಿ, ಕನಿಷ್ಠ 1-2 ಕೋಟಿಯಷ್ಟು ಹಣವನ್ನು ಪಂಚಾಯಿತಿಗಳಲ್ಲಿ ನೀಡಿ ಅಲ್ಲಿ ಶಾಶ್ವತ ಆಸ್ತಿ ಸೃಷ್ಟಿಸಿ ಜನರಿಗೆ ಉದ್ಯೋಗ ಕಲ್ಪಿಸಲಾಗುತ್ತಿತ್ತು. ಮನರೇಗಾ ಉಳಿಸುವ ಮೂಲಕ, ಹಳ್ಳಿಗಳು, ಈ ದೇಶ, ಕಾರ್ಮಿಕರು, ಪಂಚಾಯಿತಿಗಳು ಹಾಗೂ ಮಹಾತ್ಮ ಗಾಂಧಿ ಅವರ ಹೆಸರು ಉಳಿಸಬೇಕಾಗಿದೆ” ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ

“ನೋಟಿನ ಮೇಲಿರುವ ಗಾಂಧಿ ಫೋಟೋವನ್ನು ತೆಗೆದು ನಿಮ್ಮ ಫೋಟೋ ಹಾಕಿಕೊಳ್ಳುವಂತೆ ನಾನು ಸವಾಲು ಹಾಕಿದೆ. ನಮ್ಮ ಪಕ್ಷ ಹಾಗೂ ಸರ್ಕಾರ ಚರ್ಚೆ ಮಾಡಿ ಪ್ರತಿ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನಿಸಿದ್ದೇವೆ. ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮ ಮಾತ್ರವಲ್ಲ. ದೇಶದ ಬಡವರು, ಕೂಲಿ ಕಾರ್ಮಿಕರ ಕಾರ್ಯಕ್ರಮ. ಗ್ರಾಮೀಣ ಭಾಗದ ಕಾರ್ಮಿಕರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ. ಮತ್ತೊಮ್ಮೆ ಮನರೇಗಾ ಯೋಜನೆ ಮರುಸ್ಥಾಪಿಸಿ, ಉದ್ಯೋಗದ ಹಕ್ಕು ಹಾಗೂ ಗ್ರಾಮಗಳ ಸ್ವಯಂ ಆಡಳಿತ ಹಕ್ಕನ್ನು ಪುನರ್ ಸ್ಥಾಪಿಸಬೇಕಾಗಿದೆ” ಎಂದು ಸಂದೇಶ ನೀಡಿದರು.

ಕೇಂದ್ರ ಸರ್ಕಾರದ ನೂತನ ಕಾನೂನು ಮರಣ ಶಾಸನ

“ಕನ್ನಡಿಗರ ಮೇಲೆ, ಬಡವರ ಮೇಲೆ ಅನ್ಯಾಯ ನಡೆಯುತ್ತಿದೆ. ಈಗ ಹೊಸ ಯೋಜನೆಯಲ್ಲಿ ರಾಜ್ಯ ಸರ್ಕಾರ 40% ಅನುದಾನ ಭರಿಸಬೇಕಾಗಿದೆ. ಬಿಜೆಪಿ ಆಡಳಿತ ಯಾವುದೇ ರಾಜ್ಯಗಳಲ್ಲಿ ಈ ಯೋಜನೆ ಜಾರಿಯಾಗುವುದಿಲ್ಲ. ನೆರೆ ರಾಜ್ಯ ಚಂದ್ರಬಾಬು ನಾಯ್ಡು ಅವರು ನಮ್ಮಿಂದ ಸಾಧ್ಯವಿಲ್ಲ ಎಂದಿದ್ದಾರೆ. ಇದರಿಂದ ಸರ್ಕಾರ ಬಿದ್ದು ಹೋಗುವ ಭಯದಿಂದ ಅವರಿಗೆ ಓಲೈಕೆ ಮಾಡುತ್ತಿದ್ದಾರೆ. ಈ ಬಡವರ ರಕ್ಷಣೆಗೆ ನಾವು ಹೋರಾಟ ಮಾಡಬೇಕಿದೆ. ಮರದಿಂದ ಬಿದ್ದ ಹೂವು ಯಾವತ್ತು ಅರಳುವುದಿಲ್ಲ. ನಮ್ಮ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆ ಕಾರ್ಯಕ್ರಮ ನೀಡಿದ್ದು ಕಾರ್ಮಿಕರ ಪ್ರತಿನಿತ್ಯದ ಬದುಕಿಗಾಗಿ. ಅವರ ಹೊಟ್ಟೆ ತುಂಬಿಸಲು. ಆದರೆ ಕೇಂದ್ರ ಸರ್ಕಾರದ ಈ ನೂತನ ಕಾನೂನು ಮರಣ ಶಾಸನವಾಗಿದೆ” ಎಂದು ಕಿಡಿಕಾರಿದರು.

ನೀವು ಇಂದು ಈ ಹೋರಾಟಕ್ಕೆ ಹೆಜ್ಜೆ ಹಾಕಿದ್ದು, ಬಡತನದ ಅನುಭವವಿರುವವರಿಗೆ ಮಾತ್ರ ಅನ್ನದ ಬೆಲೆ ಗೊತ್ತಿದೆ. ಮನರೇಗಾ ಕೂಡ ಉದ್ಯೋಗ ಗ್ಯಾರಂಟಿ ನೀಡುವ ಯೋಜನೆಯಾಗಿತ್ತು. ಬಡವರಿಗೆ ಆರ್ಥಿಕ ಶಕ್ತಿ ತುಂಬಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆ ತಂದಿದೆ. ಇದರ ಮೂಲಕ ನಿಮ್ಮ ಮನೆಯನ್ನು ಉಚಿತವಾಗಿ ಬೆಳಗಿಸಲಾಗುತ್ತಿದೆ. ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇನ್ನು ಮುಂದೆ 5 ಕೆ.ಜಿ ಅಕ್ಕಿ ಉಳಿದ ಐದು ಕೆ.ಜಿ ವಿವಿಧ ದಿನಸಿ ಪದಾರ್ಥ ನೀಡಲು ಸರ್ಕಾರ ಮುಂದಾಗಿದೆ. ಬಡ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ನೀಡಲಾಗುತ್ತಿದೆ. ಇದು ನಮ್ಮ ಸರ್ಕಾರದ ಐತಿಹಾಸಿಕ ತೀರ್ಮಾನ” ಎಂದರು.

ಗ್ಯಾರಂಟಿ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ

“ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಆದರೆ ಈ ಗ್ಯಾರಂಟಿ ಯೋಜನೆಗಳು ದೇಶದ ಯೋಜನೆಯಾಗಿದೆ. ಈ ಯೋಜನೆಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಹೋರಾಟ ಮಾಡುವವನು ಗೆದ್ದೇ ಗೆಲ್ಲುತ್ತಾನೆ. ಯಾವ ಕಾರಣಕ್ಕೂ ಅವನಿಗೆ ಸೋಲಿನ ಭಯ ಇರುವುದಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಅದೇ ರೀತಿ ನಾವು ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಬದುಕಿನಲ್ಲಿ ಹೆಜ್ಜೆ ಗುರುತು ಉಳಿಸಿಕೊಂಡು ಹೋಗಬೇಕು. ದೇಶದಲ್ಲಿ ಮಹಾತ್ಮಾ ಗಾಂಧಿ ಹೆಸರು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ. ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿಕೊಂಡು ನೂರು ವರ್ಷವಾಗಿದೆ. ಅವರು ಅಧಿಕಾರ ವಹಿಸಿಕೊಂಡ ಬಳಿಕ ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು, ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ನೀಡಿದೆ. ಮನರೇಗಾ ನಾಶವಾಗಲು ಬಿಡುವುದಿಲ್ಲ, ರೈತರ ಉದ್ಯೋಗ ಕಿತ್ತುಕೊಳ್ಳಲು ಅವಕಾಶ ಕೊಡುವುದಿಲ್ಲ” ಎಂದು ಭರವಸೆ ನೀಡಿದರು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಹಕ್ಕು ಕಸಿಯುವ ಪ್ರಯತ್ನದಂತೆ, ಉದ್ಯೋಗದ ಹಕ್ಕನ್ನು ಕಸಿಯಲಾಗುತ್ತಿದೆ. ನಮ್ಮ ತಾಲ್ಲೂಕಿನಲ್ಲಿ ವರ್ಷಕ್ಕೆ 5 ಕೋಟಿಯಷ್ಟು ಅನುದಾನ ಬಳಸಿಕೊಂಡು ಕೆಲಸ ಮಾಡಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ಬಡವರ ಬದುಕಿಗೆ ಉದ್ಯೋಗ ಖಾತ್ರಿ ಮೂಲಕ ಹೊಸ ರೂಪ ನೀಡಿದ್ದೇವೆ. 60 ಸಾವಿರ ಇಂಗು ಗುಂಡಿ, 54 ಸಾವಿರ ಕೊಟ್ಟಿಗೆ ನಿರ್ಮಾಣ ಮಾಡಿದ್ದೇವೆ. ನಿಮ್ಮದೇ ಜಮೀನಿನಲ್ಲಿ ಕೂಲಿ ಮಾಡಿಕೊಳ್ಳಲು, ಜಮೀನು ಮಟ್ಟ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದೇವೆ. ಇಂತಹ ಕಾರ್ಯಕ್ರಮವನ್ನು ಬದಲಾಯಿಸಲು ಅವಕಾಶ ನೀಡುವುದು ಬೇಡ. ನಮ್ಮ ಹೋರಾಟಕ್ಕೆ ನಿಮ್ಮ ಸಹಕಾರ ಬೇಕು” ಎಂದು ತಿಳಿಸಿದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!