Implementation stalled due to central government's non-cooperation: DCM D.K. Shivakumar upset

ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ.ಕೆ. ಶಿವಕುಮಾರ್ ಅಭಯ

ಬೆಂಗಳೂರು: “ಕಾಂಗ್ರೆಸ್‌ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ತುಂಬಬೇಕು ಎಂದು ಕೆಲಸ ಮಾಡುತ್ತಿದೆ. ಯುವಕರು ಧೈರ್ಯವಾಗಿರಿ. ನಾವು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿಮಗೆ ಸಂದೇಶವನ್ನು ನೀಡುತ್ತೇವೆ. ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ, ಮಾಡುತ್ತೇವೆ, ಇದಕ್ಕೆ ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (D.K. Shivakumar) ಅಭಯ ನೀಡಿದರು.

ನಗರದ ನೆಹರೂ ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಯುವಕರ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ. ಅವರ ಸಮಯದಲ್ಲಿ ಬಹಳಷ್ಟು ಹಗರಣಗಳಾದವು. ನಮಗೆ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಇದು ನಮ್ಮ ಆದ್ಯತೆ” ಎಂದು ಹೇಳಿದರು.

“ಹುದ್ದೆಗಳ ಭರ್ತಿ ಕುರಿತು ಯೋಜನೆ ತಯಾರಿಸಿದ್ದೇವೆ. ಕೆಪಿಎಸ್‌ ಸಿ ಸೇರಿದಂತೆ ಬೇರೆ ಸಂಸ್ಥೆಗಳಿಗೆ ಹುದ್ದೆ ಭರ್ತಿಗೆ ಜವಾಬ್ದಾರಿ ನೀಡಿದ್ದೇವೆ. ಶಿಕ್ಷಕರ ಹುದ್ದೆ, ಆರೋಗ್ಯ ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಒಳಮೀಸಲಾತಿ ವಿಚಾರಕ್ಕೆ ಒಂದಷ್ಟು ಅಡಚಣೆಗಳು ಬರುತ್ತಿದೆ. ನಿರುದ್ಯೋಗಿ ಯುವಕರಿಗೆ ಶಕ್ತಿ ಬರಲಿ ಎಂದೇ ಯುವನಿಧಿ ಯೋಜನೆ ಜಾರಿಗೆ ತಂದಿದ್ದೇವೆ” ಎಂದು ತಿಳಿಸಿದರು.

ಮೆಟ್ರೋ ವಿಸ್ತರಣೆ ಸರ್ಕಾರದ ಉದ್ದೇಶಗಳಲ್ಲಿ ಒಂದು

ಮೆಟ್ರೋ ಜಾಲವನ್ನು 2027ರ ಹೊತ್ತಿಗೆ 175 ಕಿಲೋ ಮೀಟರ್‌ ಗೆ ವಿಸ್ತರಿಸಲು ಬಿಎಂಆರ್‌ಸಿಎಲ್‌ ಗೆ ಡೆಡ್‌ ಲೈನ್‌ ನೀಡಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಸರ್ವೇ ಮಾಡಿಸುತ್ತಿದ್ದೇವೆ. ಮೆಟ್ರೋ ವಿಚಾರವಾಗಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಡಬಲ್‌ ಡೆಕ್ಕರ್‌ ವಿಚಾರದಲ್ಲಿ ಸಣ್ಣ ಸ್ಪಷ್ಟನೆ ಕೇಳುತ್ತಿರುವ ಕಾರಣಕ್ಕೆ ಸಧ್ಯದಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ. ಮೆಟ್ರೋ ವಿಸ್ತರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದಕ್ಕೆ ನಾವು ಬದ್ಧವಾಗಿದ್ದೇವೆ. ಇದು ನಮ್ಮ ಸರ್ಕಾರದ ಉದ್ದೇಶ” ಎಂದು ಹೇಳಿದರು.

ಎಲ್ಲಾ ಇಲಾಖೆಗಳಲ್ಲೂ ಬಿಲ್‌ ಬಾಕಿ ಇರುವ ಬಗ್ಗೆ ಕೇಳಿದಾಗ, “ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಸರ್ಕಾರದ ವೇಳೆ ಯಾವುದೇ ಆರ್ಥಿಕ ಸ್ಥಿತಿಗತಿಯನ್ನು ನೋಡದೆ ಹೆಚ್ಚಿನ ಕಾಮಗಾರಿಗಳಿಗೆ ಅನುಮತಿ ನೀಡಲಾಯಿತು. ಈ ಕಾರಣಕ್ಕೆ ಈಗ ಸಮಸ್ಯೆ ಉಂಟಾಗಿದೆ. ನಾವು ಅನೇಕ ಗುತ್ತಿಗೆದಾರರಿಗೆ ಹಣ ಲಭ್ಯತೆ ಇಲ್ಲದೇ ಇರುವ ಕಾರಣಕ್ಕೆ ಕಾಮಗಾರಿಗಳನ್ನು ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದರೂ, ಒಂದಷ್ಟು ಜನ ಕಾಮಗಾರಿಗಳನ್ನು ತೆಗೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ” ಎಂದರು.

ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ ಮಾಡುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ” ಎಂದು ಹೇಳಿದರು.

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!