ಬೆಂಗಳೂರು ಗ್ರಾಮಾಂತರ ಜಿಲ್ಲೆ: ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು (A.B. Basavaraju) ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್ ಆದೇಶಿಸಿದ್ದಾರೆ.
ಎ.ಬಿ. ಬಸವರಾಜು ಅವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಜಿಲ್ಲಾಪಂಚಾಯಿತಿ ಸಿಇಒ ಆಗಿದ್ದ ಡಾ. ಅನುರಾಧ ಕೆ.ಎನ್. ಅವರನ್ನು ನೇಮಕ ಮಾಡಲಾಗಿದ್ದು, ಜಿಪಂ ಪ್ರಭಾರ ಸಿಇಒ ಆಗಿ ಮುಂದುವರಿಸಲಾಗಿದೆ.

ನೂತನ ಜಿಲ್ಲಾಧಿಕಾರಿ ಅನುರಾದ ಅವರಿಗೆ ದೇವನಹಳ್ಳಿ ತಾಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ ಶುಭಕೋರಿದ್ದಾರೆ.