Youth Congress protests against Uday Bhanu Chib's arrest

ದೊಡ್ಡಬಳ್ಳಾಪುರ: ಉದಯ್ ಭಾನು ಚಿಬ್ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಕೃತಕ ಬುದ್ಧಿಮತ್ತೆ (ಎಐ) ಶೃಂಗಸಭೆಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ (Youth Congress) ಅಧ್ಯಕ್ಷ ಉದಯ್ ಭಾನು ಚಿಬ್ (Uday Bhanu Chib’s) ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು (Youth Congress) ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ತಾಲೂಕು ಅಧ್ಯಕ್ಷ ಪುನೀತ್ ಗೌಡ ಮಲ್ಲೊಹಳ್ಳಿ ನೇತೃತ್ವದಲ್ಲಿ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್ ಮಾತನಾಡಿ, ‘ಸಂವಿಧಾನದ ನೀಡಿದ ಹಕ್ಕಿನಡಿಯೇ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಆದರೂ, ಅವರನ್ನು ಬಿಜೆಪಿ ಸರ್ಕಾರ ಬಂಧಿಸಿದ್ದು ಖಂಡನೀಯ. ಇದು ಬಿಜೆಪಿಯ ದುಂಡಾವರ್ತನೆಗೆ ನಿದರ್ಶನ’ ಎಂದು ಟೀಕಿಸಿದರು.

‘ಎಪ್‌ಸ್ಟೈನ್ ಫೈಲ್ಸ್‌ನಲ್ಲಿ ಹೆಸರಿರುವ ಪ್ರಧಾನಿ ನರೇಂದ್ರ ಮೋದಿ ದೇಶದ ಘನತೆ ಕುಗ್ಗಿಸಿದ್ದಾರೆ. ದೇಶದ ರೈತರ ಹಿತಾಸಕ್ತಿ ಬಲಿಕೊಟ್ಟು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಎದುರು ಮಂಡಿಯೂರಿದ್ದಾರೆ. ಅವರ ಬಳಿ ಇದ್ಯಾವುದಕ್ಕೂ ಉತ್ತರವಿಲ್ಲ. ಇದೀಗ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಿರುವ ಚಿಬ್ ಅವರನ್ನು ಬಿಡುಗಡೆ ಮಾಡಿದಿದ್ದರೆ, ದೇಶದಾದ್ಯಂತ ಪ್ರತಿಭಟನೆಗಳು ನಡೆಯಲಿವೆ’ ಎಂದು ಎಚ್ಚರಿಸಿದರು.

ತಾಲೂಕು ಅಧ್ಯಕ್ಷ ಪುನೀತ್ ಗೌಡ ಮಲ್ಲೊಹಳ್ಳಿ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಬೆಳ್ಳಿ ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್ ಗೌಡ, ಯಶ್ವಂತ್ ಆರಾಧ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನಿರ್ದೇಶಕ ಅಂಜನ್ ಮೂರ್ತಿ, ದೊಡ್ಡಬಳ್ಳಾಪುರ ನಗರ ಬ್ಲಾಕ್ ನ ಅಧ್ಯಕ್ಷ ಭರತ್ ಶರ್ಮ, ನಗರಸಭಾ ಸದಸ್ಯ ಅಲ್ತಾಫ್, ಮಂಜುನಾಥ್, ಆನಂದ್, ಶಿವಕುಮಾರ್ (ಶಿವು), ಮಾಜಿ ನಗರಸಭಾ ಸದಸ್ಯ ಫಯಾಜ್, ಅನೇಕ ಯುವ ಕಾಂಗ್ರೆಸ್ನ ಕಾರ್ಯಕರ್ತರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಉದಯ್ ಭಾನು ಚಿಬ್ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಉದಯ್ ಭಾನು ಚಿಬ್ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಕೃತಕ ಬುದ್ಧಿಮತ್ತೆ (ಎಐ) ಶೃಂಗಸಭೆಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ (Youth Congress) ಅಧ್ಯಕ್ಷ ಉದಯ್ ಭಾನು ಚಿಬ್ (Uday Bhanu Chib's) ಅವರನ್ನು ದೆಹಲಿ ಪೊಲೀಸರು

[ccc_my_favorite_select_button post_id="119756"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!