Arvind Kejriwal wins in court

ಅರವಿಂದ್ ಕೇಜ್ರಿವಾಲ್ ಖುಲಾಸೆ.. ಸಿಬಿಐಗೆ ನ್ಯಾಯಾಲಯ ತರಾಟೆ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದ ಪ್ರಕರಣ ಕುರಿತು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್‌ ಅವರು ಆದೇಶ ಪ್ರಕಟಿಸಿದ್ದಾರೆ.

ಸಾಕ್ಷಾಧಾರಗಳ ಕೊರತೆ ಮತ್ತು ಆರೋಪಪಟ್ಟಿಯಲ್ಲಿ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಕೇಜ್ರವಾಲ್, ಸಿಸೋಡಿಯಾ ಸೇರಿದಂತೆ ಇತರ 21 ಜನರನ್ನು ಖುಲಾಸೆಗೊಳಿಸಿ ಜಿತೇಂದ್ರ ಸಿಂಗ್ ತೀರ್ಪು ನೀಡಿದ್ದಾರೆ.

ಅಲ್ಲದೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅವರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ನ್ಯಾಯಾಲಯವು ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿತು, ಯಾವುದೇ ಸಾಕ್ಷಿ ಅಥವಾ ಹೇಳಿಕೆಯಿಂದ ಬೆಂಬಲಿಸದ ಬೃಹತ್ ಆರೋಪಪಟ್ಟಿಯಲ್ಲಿ ಹಲವು ದೋಷಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಕೋರ್ಟ್‌ ಅವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರವಾಲ್‌, ‘ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಕಳೆದ ಕೆಲವು ವರ್ಷಗಳಿಂದ ಬಿಜೆಪಿ ನಾಯಕರು ನಮ್ಮ ಮೇಲೆ ಆರೋಪ ಮಾಡುತ್ತಿದ್ದರು. ಇಂದು ನ್ಯಾಯಾಲಯವು ಈ ಎಲ್ಲಾ ಆರೋಪಗಳನ್ನು ತಿರಸ್ಕರಿಸಿದೆ. ಇದು ಸತ್ಯಕ್ಕೆ ಲಭಿಸಿದ ಗೆಲುವು’ ಎಂದು ಭಾವುಕರಾಗಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಪಕ್ಷದ (ಎಎಪಿ) ವಿರುದ್ಧ ಪಿತೂರಿ ನಡೆಸಿದ್ದರು. ಹಾಲಿ ಮುಖ್ಯಮಂತ್ರಿಯಾಗಿದ್ದ ನನ್ನನ್ನೂ ಸೇರಿದಂತೆ ಐವರು ಎಎಪಿ ನಾಯಕರನ್ನು ಬಂಧಿಸಲಾಗಿತ್ತು. ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಲಾಗಿತ್ತು. ಪ್ರತಿ ಚಾನೆಲ್‌ನಲ್ಲಿಯೂ ನಮ್ಮನ್ನು ಭ್ರಷ್ಟರೆಂದು ಬಿಂಬಿಸಲಾಗಿತ್ತು. ಆದರೆ, ನಾನು ಭ್ರಷ್ಟನಲ್ಲ. ನಾನು ಪ್ರಾಮಾಣಿಕತೆಯನ್ನು ಮಾತ್ರ ಗಳಿಸಿದ್ದೇನೆ. ಕೇಜ್ರವಾಲ್, ಸಿಸೋಡಿಯಾ ಸೇರಿದಂತೆ ಎಎಪಿ ನಾಯಕರು ಪ್ರಾಮಾಣಿಕರು ಎಂದು ನ್ಯಾಯಾಲಯ ಹೇಳಿದೆ’ ಎಂದು ಅವರು ಕಣ್ಣೀರು ಹಾಕಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ ಕುರಿತು ಫೆಬ್ರುವರಿ 12ರಂದು ಸಿಬಿಐ, ಕೇಜ್ರವಾಲ್, ಸಿಸೋಡಿಯಾ ಸೇರಿದಂತೆ ಇತರ 21 ಆರೋಪಿಗಳಿಂದ ವಿವರವಾದ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಪ್ರಕರಣ ದಾಖಲಾಗಿದ್ದ ವೇಳೆ ಕೇಜ್ರವಾಲ್ ಅವರು ದೆಹಲಿ ಮುಖ್ಯಮಂತ್ರಿಯಾಗಿ ಮತ್ತು ಸಿಸೋಡಿಯಾ ಅವರು ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

2022ರಲ್ಲಿ ಸಿಬಿಐ ಮೊದಲ ಚಾರ್ಜ್‌ಶೀಟ್ ಅನ್ನು ಸಲ್ಲಿಸಿತ್ತು. ಪ್ರಕರಣದಲ್ಲಿ ಕೇಜ್ರವಾಲ್, ಸಿಸೋಡಿಯಾ, ಕೆ. ಕವಿತಾ, ಕುಲದೀಪ್ ಸಿಂಗ್, ನರೇಂದರ್ ಸಿಂಗ್, ವಿಜಯ್ ನಾಯ‌ರ್, ಅಭಿಷೇಕ್ ಬೋಯಿನಪಲ್ಲಿ, ಅರುಣ್ ರಾಮಚಂದ್ರ ಪಿಳ್ಳೆ, ಮೂತ ಗೌತಮ್, ಸಮೀರ್ ಮಹೇಂದ್ರು, ಅಮನದೀಪ್ ಸಿಂಗ್ ಧಲ್‌, ಅರ್ಜುನ್ ಪಾಂಡೆ, ಬುಚ್ಚಿಬಾಬು ಗೋರ್ನಲ್ಲಾ, ರಾಜಮೋದೇಶ್ ಪ್ರಸಾದ್ ಶರ್ಮಾ, ರಾಕೇಶ ಪ್ರಸಾದ್ ಜೊನತ್ತಾ, ರಾಕೇಶ ಪ್ರಸಾದ್ ಜೊನತ್ತಾ ಸೇರಿದಂತೆ ಒಟ್ಟು 23 ಆರೋಪಿಗಳನ್ನು ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ರಾಯತ್, ಅರವಿಂದ್ ಕುಮಾರ್ ಸಿಂಗ್, ದುರ್ಗೇಶ್ ಪಾಠಕ್, ಅಮಿತ್ ಅರೋರಾ, ವಿನೋದ್ ಚೌಹಾಣ್, ಆಶಿಶ್ ಮಾಥುರ್, ಮತ್ತು ಪಿ ಶರತ್ ಚಂದ್ರಾ ರೆಡ್ಡಿ ಹೆಸರು ತಳುಕು ಹಾಕಿಕೊಂಡಿತ್ತು.

2024ರ ಮಾರ್ಚ್‌ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಅರವಿಂದ ಕೇಜ್ರವಾಲ್ ಅವರನ್ನು ಬಂಧಿಸಿತ್ತು.

ಈ ಆದೇಶ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ವಿರುದ್ಧ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಈ ಪ್ರಕರಣ ಕೂಡ ಸಾಕ್ಷಿಯಾಗಿದೆ ಎಂಬ ಆರೋಪ ವಿರೋಧ ಪಕ್ಷಗಳ ಮುಖಂಡರದ್ದಾಗಿದೆ‌.

ರಾಜಕೀಯ

ಅರವಿಂದ್ ಕೇಜ್ರಿವಾಲ್ ಖುಲಾಸೆ.. ಸಿಬಿಐಗೆ ನ್ಯಾಯಾಲಯ ತರಾಟೆ

ಅರವಿಂದ್ ಕೇಜ್ರಿವಾಲ್ ಖುಲಾಸೆ.. ಸಿಬಿಐಗೆ ನ್ಯಾಯಾಲಯ ತರಾಟೆ

ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

[ccc_my_favorite_select_button post_id="119792"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!