ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ ವರದನಹಳ್ಳಿಯಲ್ಲಿ ನಡೆದಿದೆ.
ಮೃತನನ್ನು ತನ್ಮಯ್ ದಾಸ್ (25 ವರ್ಷ) ಎಂದು ಗುರುತಿಸಲಾಗಿದೆ.
ಮೃತನು ಮಡದಿಯೊಂದಿಗೆ ಮಾರಸಂದ್ರದಲ್ಲಿ ವಾಸವಿದ್ದ ಎನ್ನಲಾಗಿದ್ದು, ನಿನ್ನೆ (ಫೆ.27) ಸಂಜೆ ವರದನಹಳ್ಳಿಯ ತಂದೆಯ ಮನೆಗೆ ಬಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.