ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

We will launch a people's movement called Save Mysore Silk: R. Ashoka

ಮೈಸೂರು: ಕಮಿಶನ್‌ ಆಸೆಗಾಗಿ ಹಾಗೂ ಕೆಎಸ್‌ಐಸಿ ಮುಚ್ಚಿಹಾಕಲು ಕಾರ್ಖಾನೆಯ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇವ್‌ ಮೈಸೂರು ಸಿಲ್ಕ್‌ ಅಭಿಯಾನಕ್ಕಾಗಿ ನಾನು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತಕ್ಕೆ (KSIC) ಭೇಟಿ ನೀಡಿದ್ದೇನೆ. ಈ ಸಂಸ್ಥೆಯ ರೇಷ್ಮೆಗೆ ಜಿಐ ಟ್ಯಾಗ್‌ ದೊರೆತಿದ್ದು, ಮೈಸೂರು, ಚಾಮರಾಜನಗರ ಭಾಗದಲ್ಲಿ ಪ್ರತಿಷ್ಠೆಯ ವಿಚಾರವಾಗಿದೆ. ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌ ಇಂಗ್ಲೆಂಡ್‌ಗೆ ಹೋಗಿ ಅಲ್ಲಿ ರೇಷ್ಮೆ ಸೀರೆಗಳನ್ನು ನೋಡಿ, ಸ್ವಿಜರ್‌ಲ್ಯಾಂಡ್‌ನಿಂದ ಯಂತ್ರಗಳನ್ನು ತರಿಸಿ ಇಲ್ಲಿ ಉದ್ಯಮ ಆರಂಭಿಸಿದ್ದರು. ಇಲ್ಲಿನ ರೇಷ್ಮೆ ರೈತರಿಗೆ ಲಾಭವಾಗಲು ಈ ಉದ್ಯಮ ಸ್ಥಾಪಿಸಿದ್ದರು ಎಂದರು.

ಚನ್ನಪಟ್ಟಣದ ಕೇಂದ್ರ ಕಾರ್ಖಾನೆಯಲ್ಲಿ ಸುಮಾರು 400 ಕಾರ್ಮಿಕರಿದ್ದಾರೆ. ಟಿ.ನರಸೀಪುರದ ನೂಲು ತೆಗೆಯುವ ಕಾರ್ಖಾನೆ 13 ಎಕರೆ ಜಾಗದಲ್ಲಿದ್ದು, ಅದರಲ್ಲಿ 6 ಎಕರೆಯನ್ನು ಕ್ರೀಡಾ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಚನ್ನಪಟ್ಟಣದಲ್ಲಿ ಒಂದು ತಿಂಗಳಿಗೆ 1,400 ಸೀರೆ ತಯಾರಾಗುತ್ತಿದ್ದು, ಅದು ಒಂದೇ ದಿನದಲ್ಲಿ ಮಾರಾಟವಾಗುತ್ತದೆ. ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಇದೇ ಸೀರೆಯನ್ನು ಉಡಿಸಲಾಗುತ್ತದೆ. ಆದ್ದರಿಂದ ಮದುವೆ, ಆರತಕ್ಷತೆಗೆ ಇದನ್ನೇ ಬಳಸಲಾಗುತ್ತದೆ. ಹೀಗಾಗಿ ಈ ಸೀರೆಗೆ ಪವಿತ್ರತೆ ಹಾಗೂ ಪರಂಪರೆ ಇದೆ ಎಂದರು.

ಸಂಸ್ಥೆ ಲಾಭದಲ್ಲಿದೆ

ಈ ವರ್ಷ ಕೆಎಸ್‌ಐಸಿ ನಿಗಮಕ್ಕೆ 96 ಕೋಟಿ ರೂ. ಲಾಭ ಬಂದಿದೆ. ಇದನ್ನು ನಿಗಮದ ಸುಧಾರಣೆಗೆ ಬಳಸದೆ ಬೆಸ್ಕಾಂಗೆ ನೀಡಲಾಗಿದೆ. ನಿಗಮ ಅಭಿವೃದ್ಧಿ ಮಾಡಲು ಅಧಿಕಾರಿಗಳು ಫಾರಿನ್‌ ಟ್ರಿಪ್‌ ಮಾಡಿ 1.40 ಕೋಟಿ ರೂ. ಖರ್ಚು ಮಾಡಿದ್ದಾರೆ. ಬೇಡಿಕೆಗೆ ಹತ್ತು ಪಟ್ಟು ಅಧಿಕ ಮಾರುಕಟ್ಟೆ ಇದೆ. ಸುಮಾರು 2,000 ಜನರಿಗೆ ಕೆಲಸವಿದೆ. ಅಂದರೆ ಇದು ಮುಚ್ಚಿಹೋಗುವ ಸಂಸ್ಥೆಯಲ್ಲ. ಬಹಳ ಲಾಭದಲ್ಲಿರುವ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯ ಜಾಗದಲ್ಲೇ ಕ್ರೀಡಾಂಗಣ ಮಾಡಲು ಯೋಜನೆ ರೂಪಿಸಲಾಗಿದೆ.

ಇದೇ ಜಾಗದಲ್ಲಿ ಕ್ರೀಡಾಂಗಣ ಮಾಡಬೇಕೆಂದೇನೂ ಇಲ್ಲ. ಕಾರ್ಖಾನೆಯಲ್ಲಿ ಬಾಯ್ಲರ್‌ಗಳಿದ್ದು, ಹೆಚ್ಚು ತಾಪಮಾನ ಹಾಗೂ ದುರ್ವಾಸನೆ ಬರುತ್ತದೆ. ಅದಕ್ಕಾಗಿ ಕಾರ್ಖಾನೆಯ ಆವರಣದಲ್ಲಿ ಮರಗಳನ್ನು ಬೆಳೆಸಿದ್ದು, ಇದರಿಂದ ತಾಪಮಾನ ಇಳಿಕೆಯಾಗಿ ಪರಿಸರ ಸಮತೋಲನವಾಗುತ್ತದೆ. ಕ್ರೀಡಾಂಗಣ ನಿರ್ಮಿಸಿದರೆ 430 ಮರಗಳನ್ನು ಕಡಿದುಹಾಕಬೇಕಾಗುತ್ತದೆ.

ಕ್ರೀಡಾಂಗಣ ನಿರ್ಮಾಣವಾದರೂ, ಪಕ್ಕದಲ್ಲೇ ಬಾಯ್ಲರ್‌ ಇರುತ್ತದೆ. ಹೀಗಾಗಿ ಕ್ರೀಡಾಂಗಣದಲ್ಲಿ ಚಟುವಟಿಕೆ ನಡೆಸಲು ಅನುಮತಿ ಸಿಗುವುದಿಲ್ಲ. ಏನಾದರೂ ಅನಾಹುತವಾದರೆ ಯಾರು ಜವಾಬ್ದಾರಿ ಹೊರುತ್ತಾರೆ? ಈ ಭಾಗದಲ್ಲಿ ಶುದ್ಧ ನೀರು ಸಿಗುವುದರಿಂದ ಸೀರೆಯ ಗುಣಮಟ್ಟ ಹೆಚ್ಚಿದೆ. ಇಂತಹ ಸ್ಥಳದಲ್ಲೇ ಕ್ರೀಡಾಂಗಣ ಮಾಡಲು ನಿರ್ಧರಿಸಿದ್ದಾರೆ ಎಂದರು.

ಕಾಂಗ್ರೆಸ್‌ ಲಾಬಿ

ಕಾಂಗ್ರೆಸ್‌ ಕಡೆಯವರು 12 ಕೋಟಿ ರೂ. ಗೆ ಗುತ್ತಿಗೆ ಪಡೆದಿದ್ದು, ಅವರು ಯೋಜನೆ ಜಾರಿಗೆ ಒತ್ತಡ ಹಾಕುತ್ತಿದ್ದಾರೆ. ಒಂದು ಕ್ರೀಡಾಂಗಣದಲ್ಲಿ ಕನಿಷ್ಠ 12 ಎಕರೆ ಜಾಗ ಬೇಕಾಗುತ್ತದೆ. ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರ ನೂಲು ತೆಗೆಯುವ ಮಿಲ್‌ ಸಮೀಪದಲ್ಲಿದೆ. ಕೆಎಸ್‌ಐಸಿ ಮುಚ್ಚಿಹಾಕಿದರೆ ಇವರ ಖಾಸಗಿ ಕಾರ್ಖಾನೆಗೆ ಬೇಡಿಕೆ ಬರುತ್ತದೆ. ಈ ದುರುದ್ದೇಶದೊಂದಿಗೆ ಯೋಜನೆ ರೂಪಿಸಲಾಗಿದೆ. ಇಲ್ಲಿ ಕಲ್ಲಿದ್ದಲಿನಿಂದ ಟನ್‌ಗಟ್ಟಲೆ ಬೂದಿ ಬರುತ್ತದೆ. ಕ್ರೀಡಾಂಗಣ ಬಂದರೆ ಇದನ್ನು ನಿರ್ವಹಣೆ ಮಾಡಲು ಸಾಧ್ಯವಿಲ್ಲ. ಇಂತಹ ಯೋಜನೆ ಸುರಕ್ಷಿತವೂ ಅಲ್ಲ ಎಂದರು.

ನೇಮಕಾತಿ ಮಾಡಿ

ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶ ಮಾಡದೆ ವಿದ್ಯಾರ್ಥಿಗಳನ್ನು ಆಟವಾಡಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ನಮ್ಮ ಹೋರಾಟ ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದು ನೇಮಕಾತಿ ಆದೇಶ ಮಾಡಿದೆ. 2.84 ಲಕ್ಷ ಹುದ್ದೆಗಳಿಗೆ ನಾವು ಹೋರಾಟ ಮಾಡಿದ್ದರೂ, ಸರ್ಕಾರ 56 ಸಾವಿರ ಹುದ್ದೆಗೆ ನೇಮಕ ಆದೇಶ ಮಾಡಿದೆ. ಉಳಿದ ನೇಮಕಾತಿಗೆ ಯಾವಾಗ ಆದೇಶ ಮಾಡುತ್ತಾರೆ ಎಂದು ಸರ್ಕಾರ ತಿಳಿಸಬೇಕು. ಇಲ್ಲವಾದರೆ ಪಾದಯಾತ್ರೆಯ ಚಳವಳಿ ಮಾಡುತ್ತೇವೆ.

ಅದೇ ರೀತಿ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೋರಾಟ ಮಾಡುತ್ತೇವೆ. ಇದನ್ನು ದೊಡ್ಡ ಮಟ್ಟದ ಜನಾಂದೋಲನವಾಗಿ ರೂಪಿಸುತ್ತೇವೆ. ಬಜೆಟ್‌ ಅಧಿವೇಶನದಲ್ಲೂ ಈ ಬಗ್ಗೆ ಮಾತಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಕ್ರಿಕೆಟ್‌ ಕ್ರೀಡಾಂಗಣ ಆರಂಭಿಸಲು ಜಾಗ ಸಿಗುತ್ತದೆ. ಎಲ್ಲ ತಾಲೂಕುಗಳಲ್ಲಿ ಕಾಂಗ್ರೆಸ್‌ ಕಚೇರಿಗಳನ್ನು ನಿರ್ಮಿಸಲು ಖರಾಬು ಜಮೀನುಗಳನ್ನು ಗುರುತಿಸಿದ್ದಾರೆ. ಆದರೆ ಕ್ರೀಡಾಂಗಣ ಮಾಡಲು ಜಾಗ ಸಿಗುತ್ತಿಲ್ಲ ಎನ್ನುತ್ತಿದ್ದಾರೆ ಎಂದರು.

ಸಿಎಂ ಹುದ್ದೆ ಒಪ್ಪಂದ

ಸಿಎಂ ಹುದ್ದೆ ಒಪ್ಪಂದದ ಬಗ್ಗೆ ಯಾರೂ ಸರಿಯಾಗಿ ಹೇಳುತ್ತಿಲ್ಲ. ಇದೇ ಕಚ್ಚಾಟದಿಂದಾಗಿ ಅಭಿವೃದ್ಧಿ ಕಡೆಗಣನೆಯಾಗಿದೆ. ಇಬ್ಬರ ಕಿತಾಪತಿಯಿಂದ ಗೊಂದಲ ಸೃಷ್ಟಿಯಾಗಿದೆ. ಇಂತಹ ಕಾಮಿಡಿಯನ್ನು ಜನರು ಎಂಜಾಯ್‌ ಮಾಡುತ್ತಿದ್ದಾರೆ.

ನವೆಂಬರ್‌ ಕ್ರಾಂತಿ ಆರಂಭವಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಕಹಳೆ ಊದಲಾಗಿದೆ. ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಅವರೇ ಮುಂದೆ ಕಾಂಗ್ರೆಸ್‌ ಗೆಲ್ಲಲ್ಲ ಎಂದಿದ್ದಾರೆ. ಗ್ಯಾರಂಟಿಗಳನ್ನು ಹೊರೆ ಎಂದು ಈಗ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಚುನಾವಣೆಯಲ್ಲಿ ಘೋಷಣೆ ಮಾಡುವಾಗ ಇವರಿಗೆ ಜ್ಞಾನ ಇರಲಿಲ್ಲ. ಯುವನಿಧಿ ಈಗಾಗಲೇ ಸ್ಥಗಿತವಾಗಿದೆ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ ಎಂದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!