ಮೆಳೇಕೋಟೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ.. ಕಿಸಾನ್ ಮೇಳ: ಗಮನ ಸೆಳೆದ ವಸ್ತು ಪ್ರದರ್ಶನ

District level Millet festival and Kisan Mela in Melekote

ದೊಡ್ಡಬಳ್ಳಾಪುರ: ತಾಲ್ಲೂಕಿನ ಮೆಳೇಕೋಟೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ “ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ-2026” (Millet festival and Kisan Mela) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

“ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ-2026” ಕಾರ್ಯಕ್ರಮವನ್ನು ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಸಿರಿಧಾನ್ಯ ಪದಾರ್ಥಗಳಲ್ಲಿ ಆರೋಗ್ಯ ವೃದ್ಧಿಸುವಂತಹ ಶಕ್ತಿ ಅಡಗಿದೆ. ನಮ್ಮ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಪದಾರ್ಥಗಳನ್ನು ಸೇವನೆ ಮಾಡಿ ಆರೋಗ್ಯ, ಆಯಸ್ಸು ವೃದ್ಧಿಸಿಕೊಳ್ಳಬೇಕು ಎಂದರು.

ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ, ಕೊಟ್ಟಿಗೆ ಗೊಬ್ಬರದ ಸಾವಯವ ಪದ್ದತಿ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ತಕ್ಷಣಕ್ಕೆ ರುಚಿ ಕೊಟ್ಟು, ಪೌಷ್ಟಿಕತೆ ಕಡಿಮೆ ಜತೆಗೆ ಆರೋಗ್ಯ ಕ್ಷೀಣಿಸಲು ನಾವೇ ದಾರಿ ಮಾಡಿಕೊಟ್ಟಂತೆ ಎಂದರು.

ಸರ್ಕಾರವು ರೈತರ ಉತ್ಪನ್ನಗಳಿಗೆ ಬೆಲೆ ನೀಡಿ, ಉತ್ತಮ ಮಾರುಕಟ್ಟೆ ಕಲ್ಪಿಸುವ ಕೆಲಸ ಮಾಡಬೇಕು. ನಮ್ಮ ರೈತರು ಗುಣಮಟ್ಟದ ಬೆಳೆಗಳು ಬೆಳೆಯುತ್ತಿದ್ದು, ವಿದೇಶಗಳಿಗೆ ಆಹಾರ ಪದಾರ್ಥಗಳು ಹಾಗೂ ಸಿರಿಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಪ್ತು ಆಗುತ್ತಿದೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಬಿ.ಜಿ ಕಲಾವತಿ ಅವರು ಮಾತನಾಡಿ ಕೃಷಿ ಇಲಾಖೆಯಿಂದ ಜಿಲ್ಲೆಯ ರೈತರಲ್ಲಿ ಸಾವಯವ ಪದ್ದತಿಯಲ್ಲಿ ಬೆಳೆ ಬೆಳೆಯಲು ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವರ್ಷ ‘ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳ’ದಂತಹ ಕೃಷಿ ಕಾರ್ಯಕ್ರಮಗಳು ಆಯೋಜಿಸಿ, ಇಲಾಖೆಯ ಯೋಜನೆಗಳು ಹಾಗೂ ಹೊಸ ಕೃಷಿ ಸಂಬಂಧಿ ಪರಿಕರಗಳ ಪರಿಚಯ ಮಾಡಿಕೊಡಲಾಗುತ್ತಿದೆ. ಜಿಲ್ಲೆಯ ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳದಲ್ಲಿ ಸಿರಿಧಾನ್ಯಗಳಿಂದ ಅಲಂಕರಿಸಲ್ಪಟ ರಂಗೋಲಿಯು ಎಲ್ಲರ ಗಮನ ಸೆಳೆಯಿತು.

ಜಿಲ್ಲೆಯ ವಿವಿಧ ಭಾಗದ 45 ಜನ ಸ್ಪರ್ಧೆಯಲ್ಲಿ ಭಾಗಿ

ಮೆಳೇಕೋಟೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ.. ಕಿಸಾನ್ ಮೇಳ: ಗಮನ ಸೆಳೆದ ವಸ್ತು ಪ್ರದರ್ಶನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾನಾ ಭಾಗಗಳಿಂದ ಜನ “ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಸ್ಪರ್ಧೆ”ಯಲ್ಲಿ 45 ಜನ ಮಹಿಳೆಯರು ಭಾಗವಹಿಸಿ, ಪಾಕ ಸ್ಪರ್ಧೆಯಲ್ಲಿ ತಮ್ಮ ಕೈಚಳಕದಿಂದ ತಯಾರಿಸಿದ ರಾಗಿ ಉಪ್ಪಿಟ್ಟು, ಕರದಂಟು, ನವಣೆ ಪಲಾವ್, ಸಜ್ಜೆ ಲಾಡು, ಅಗಸೆ ಮಜ್ಜಿಗೆ, ಮೆಂತ್ಯೆ ಕಡುಬು ಮತ್ತು ಸಿರಿಧಾನ್ಯಗಳ ಪಾಯಸ ಸೇರಿದಂತೆ ವಿವಿಧ ಖಾದ್ಯಗಳನ್ನು ಪ್ರದರ್ಶಿಸಿದರು.

ಗಮನ ಸೆಳೆದ ಹಳೆಯ ಹಾಗೂ ಆಧುನಿಕ ವಸ್ತು ಪ್ರದರ್ಶನ

ಮೆಳೇಕೋಟೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ.. ಕಿಸಾನ್ ಮೇಳ: ಗಮನ ಸೆಳೆದ ವಸ್ತು ಪ್ರದರ್ಶನ

ಕಿಸಾನ್ ಮೇಳದಲ್ಲಿ ಹಿಂದಿನ ಕಾಲದಲ್ಲಿ ಪೂರ್ವಿಕರು ದಿನಬಳಕೆ ಮಾಡುತ್ತಿದ್ದ ಪಾರಂಪರೀಕ ವಸ್ತುಗಳು, ಲೋಹಗಳು, ಮಶೀನ್ ಗಳನ್ನು ಸೇರಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಮತ್ತು ಮೀನುಗಾರಿಕೆ ಇಲಾಖೆಗಳು ಇಲಾಖಾ ಯೋಜನೆಗಳ ಕುರಿತು ಮಾಹಿತಿಯನ್ನೊಳಗೊಂಡ ವಸ್ತು ಪ್ರದರ್ಶನವನ್ನು ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಯಪ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ. ಜಗನ್ನಾಥ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್ ಆರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಪಂಕಜ ಹೆಚ್, ಸಹಾಯಕ ಕೃಷಿ ನಿರ್ದೇಶಕ ಡಾ.ಪಿ.ರಾಘವೇಂದ್ರ ಸೇರಿದಂತೆ, ನಾಲ್ಕು ತಾಲೂಕುಗಳ ಕೃಷಿಕ ಸಮಾಜದ ಅಧ್ಯಕ್ಷರು, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!