ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

ಅಂತೆಯೆ ಇಂದು ಬಾಶೆಟ್ಟಿಹಳ್ಳಿಯ ಮನೆಯಲ್ಲಿ ಸ್ನಾನಕ್ಕೆಂದು ತೆರಳಿದ 15 ವರ್ಷದ ಬಾಲಕಿ ವಿಷಾನಿಲ ಸೇವಿಸಿ ಸಾವನಪ್ಪಿದ್ದಾರೆ.

ಮೃತ ಬಾಲಕಿಯನ್ನು ಬಿಂದುಶ್ರೀ (15 ವರ್ಷ) ಎಂದು ಗುರುತಿಸಲಾಗಿದೆ.
ಶಂಕರಪ್ಪ ಎನ್ನುವವರ ಮಗಳಾದ ಬಿಂದುಶ್ರೀ ಸ್ನಾನಕ್ಕೆಂದು ತೆರಳಿದ್ದ ವೇಳೆ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದು, ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ, ಉಸಿರಾಟದ ಸಮಸ್ಯೆಯಿಂದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ಯಾಸ್ ಗೀಸರ್ ವಿಷಾನಿಲದಿಂದ ಸಾವನಪ್ಪಿರುವ ಕುರಿತಂತೆ ಪೊಲೀಸರು ಶಂಕಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)