ಇಂದಿನಿಂದ ದ್ವಿತೀಯ PUC ಪರೀಕ್ಷೆ -01; ಮಕ್ಕಳೇ ಆಲ್ ದಿ ಬೆಸ್ಟ್

Provisional schedule for SSLC and Second PUC exams 2026 announced

ಬೆಂ.ಗ್ರಾ.ಜಿಲ್ಲೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು (Second PUC exams) ಫೆಬ್ರವರಿ 28 ಶನಿವಾರದಿಂದ ಮಾರ್ಚ್ 17 ಮಂಗಳವಾರದವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯ ವರೆಗೆ ಜರುಗಲ್ಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 04, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 03, ಹೊಸಕೋಟೆ ತಾಲ್ಲೂಕಿನಲ್ಲಿ 07, ನೆಲಮಂಗಲ ತಾಲ್ಲೂಕಿನಲ್ಲಿ 06 ಒಟ್ಟು 20 ಪರೀಕ್ಷಾ ಕೇಂದ್ರಗಳು ಇವೆ.

ಪರೀಕ್ಷೆಗೆ ನೋಂದಾಯಿಸಿಕೊಂಡ ಹೊಸ ವಿದ್ಯಾರ್ಥಿಗಳು 10,821, ಖಾಸಗಿ ವಿದ್ಯಾರ್ಥಿಗಳು 166, ಪುನರಾವರ್ತಿತ ವಿದ್ಯಾರ್ಥಿಗಳು 578 ಸೇರಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಸಂಖ್ಯೆ 11,565 ಇದ್ದು, ಕಲಾ ವಿಭಾಗದಲ್ಲಿ 833 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5405, ವಿಜ್ಞಾನ ವಿಭಾಗದಲ್ಲಿ 4583, ಸರ್ಕಾರಿ ಕಾಲೇಜುಗಳಲ್ಲಿ 1,724 ವಿದ್ಯಾರ್ಥಿಗಳು, ಅನುದಾನಿತ ಕಾಲೇಜಿನಲ್ಲಿ 1,074, ಅನುದಾನರಹಿತ ಕಾಲೇಜಿನಲ್ಲಿ 8,023 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗೆ ಹಾಜರಾಗುವ ಗಂಡು ಮಕ್ಕಳ ಸಂಖ್ಯೆ 4695, ಹೆಣ್ಣುಮಕ್ಕಳ ಸಂಖ್ಯೆ 6126 ಸೇರಿ ಒಟ್ಟು 10,821 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲ್ಲಿದ್ದಾರೆ. ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

ಮಕ್ಕಳೇ ಆಲ್ ದಿ ಬೆಸ್ಟ್

“ದ್ವಿತೀಯ ಪಿಯುಸಿ ಸುಗಮವಾಗಿ, ಸುಲಲಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ-ಭೀತಿ ಇಲ್ಲದೇ ಧೈರ್ಯದಿಂದ ಪರೀಕ್ಷೆ ಎದರುರಿಸಿ. ಪರೀಕ್ಷೆ ಬರೆಯಲಿರುವ ಮಕ್ಕಳಲ್ಲಿ ಪೋಷಕರು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು: ಡಾ. ಕೆ.ಎನ್. ಅನುರಾಧ, (ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ)

(ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!