ದ್ವಿತೀಯ PUC ಮೊದಲ ದಿನದ ಪರೀಕ್ಷೆ ಸುಸೂತ್ರ: ಜಿಲ್ಲೆಯಲ್ಲಿ 111 ವಿದ್ಯಾರ್ಥಿಗಳು ಗೈರು

Second PUC first day exam formula

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು (PUC Exam) ಸುಗಮವಾಗಿ ಪ್ರಾರಂಭಗೊಂಡಿದೆ. ಯಾವುದೇ ಪರೀಕ್ಷಾ ಅಕ್ರಮಗಳ ಕುರಿತು ವರದಿಯಾಗಿಲ್ಲ.

ಬೆಳಿಗ್ಗೆ 9 ಗಂಟೆಯಿಂದಲೇ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಉತ್ಸಾಹದಿಂದ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ತಲುಪಲು ಸಾರಿಗೆ ಸಂಸ್ಥೆಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ ನಡೆದ ಕನ್ನಡ ಭಾಷೆ ಪರೀಕ್ಷೆಗೆ ಒಟ್ಟು 9569 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ಇದರಲ್ಲಿ 9458 ವಿದ್ಯಾರ್ಥಿಗಳು ಹಾಜರಾಗಿ ಒಟ್ಟು 111 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಎನ್.ಮೋಹನ್ ಕುಮಾರ್ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿದ್ದು ವೆಬ್ ಕಾಸ್ಟಿಂಗ್ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ ಮಾರ್ಗದರ್ಶನದಂತೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಪ್ರಥಮ ಭಾಷೆಗೆ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು (661)2 ವಿದ್ಯಾರ್ಥಿಗಳು, ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಕೇಂದ್ರದಲ್ಲಿ (638) 14 ವಿದ್ಯಾರ್ಥಿಗಳು, ಶ್ರೀ ದೇವರಾಜ ಅರಸು ಪದವಿ ಪೂರ್ವ ಕಾಲೇಜು(530)ಕೇಂದ್ರದಲ್ಲಿ ಒಬ್ಬರು ಸೇರಿ ಮೂರು ಪರೀಕ್ಷಾ ಕೇಂದ್ರಗಳಿಂದ 1829 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮೂರು ಕೇಂದ್ರಗಳಿಂದ ಒಟ್ಟು 17ವಿದ್ಯಾರ್ಥಿಗಳು ಗೈರಾಗಿದ್ದರು.

ಕಾನೂನು ವ್ಯವಸ್ಥೆ

ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ ವ್ಯವಸ್ಥೆ ಜೊತೆಗೆ ಪೊಲೀಸ್ ಭದ್ರತಾ ವ್ಯವಸ್ಥೆ ಕಂಡು ಬಂತು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚಿದ್ದವು.

ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರ ಪರಿಶೀಲನೆ ಮಾಡಿ, ಪರೀಕ್ಷಾ ಕೊಠಡಿಗಳಿಗೆ ಕಳುಹಿಸುತ್ತಿದ್ದ ದೃಶ್ಯ ಕಂಡು ಬಂತು. ವಿದ್ಯಾರ್ಥಿಗಳಿಗೆ ಶೂ, ಬ್ಲೇಸರ್, ಕೈಗಡಿಯಾರ ಧರಿಸದಂತೆ ನಿರ್ಭಂಧಿಸಲಾಗಿತ್ತು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!