ಧರ್ಮ,‌ ಪೂಜೆ, ಭಕ್ತಿ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುವ ಸಾಧನಗಳು: ಡಿಸಿಎಂ ಡಿ.ಕೆ. ಶಿವಕುಮಾರ್

Religion, worship, devotion are tools to increase a person's self-confidence: DCM D.K. Shivakumar

ಬಾಳೆಹೊನ್ನೂರು: “ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ ಸಾಧನಗಳು. ನನ್ನ ಧರ್ಮ ಸರಿ, ನಿನ್ನ ಧರ್ಮ ತಪ್ಪು ಎನ್ನುವ ಕಲ್ಪನೆ ಎಲ್ಲಿಯೂ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅಭಿಪ್ರಾಯಪಟ್ಟರು.

“ಆಕಾಶಾತ್ ಪತಿತಂ ತೋಯಂ ಯಥಾಗಚ್ಛತಿ ಸಾಗರಮ್ ಸರ್ವದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ. ಅಂದರೆ ಎಷ್ಟೇ ದೇವರಿಗೆ ನಮಸ್ಕಾರ ಮಾಡಿದರೂ ಸಹ ಅದು ಒಂದೇ ದೇವರಿಗೆ ತಲುಪುತ್ತದೆ, ಎಷ್ಟೇ ನದಿಗಳಿದ್ದರೂ ಅವು ಸೇರುವುದು ಒಂದೇ ಸಾಗರಕ್ಕೆ. ಶಿವನ ಲಿಂಗಕ್ಕೆ ಇದೇ ಆಕಾರ ಎಂಬುದು ಇಲ್ಲ. ಇಲ್ಲಿ ಇರುವುದು ನಮ್ಮ ಭಕ್ತಿ” ಎಂದು ಹೇಳಿದರು.

“ಒಕ್ಕಲಿಗನಾಗಿ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ನೀನು ಏಕೆ ಪ್ರಮಾಣ ವಚನ ಸ್ವೀಕಾರ ಮಾಡಿದೆ ಎಂದು ಕೇಳಿದರು. ಅದಕ್ಕೆ ನಾನು ಇದು ನನ್ನ ನಂಬಿಕೆ ಎಂದು ಹೇಳಿದೆ. ಅವರು ನನಗೆ ಆತ್ಮಬಲವನ್ನು ತುಂಬಿದ್ದಾರೆ. ರಂಭಾಪುರಿ ಶ್ರೀಗಳು ನನಗೆ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ” ಎಂದರು‌.

“ಅಜ್ಜಯ್ಯ ಅವರು ನನಗೆ ನೀಡಿದ ಸಾಕ್ಷಾತ್ಕಾರವನ್ನ ಬಹಿರಂಗ ಮಾಡಲು ಆಗುವುದಿಲ್ಲ. ಸಮಯ ಬಂದಾಗ ಪುಸ್ತಕ ರೂಪದಲ್ಲಿ ಹೊರತರುತ್ತೇನೆ” ಎಂದರು.

“ಎನ್ನ ಪರಮಗುರು ನೀವೇ, ಎನ್ನ ಗತಿ ಮತಿ ನೀವೇ, ಎನ್ನ ಅರಿವಿನ ಜ್ಯೋತಿ ನೀವೇ, ಎನ್ನ ಅಂತರಂಗ ಬಹಿರಂಗ ನೀವೇ ಕೂಡಲಸಂಗಮದೇವಾ ಎಂದು ಬಸವಣ್ಣ ಹೇಳುತ್ತಾರೆ. ಅಂದರೆ ಗುರುವಿಲ್ಲದೇ ಗುರಿ ಮುಟ್ಟಲು ಸಾಧ್ಯವಿಲ್ಲ” ಎಂದರು.

ರಂಭಾಪುರಿ ಮಠದ ಭವನಕ್ಕೆ 5 ಕೋಟಿ ರೂಪಾಯಿ

“ರಂಭಾಪುರಿ ಶ್ರೀಗಳು ನಿಂತು ಹೋಗಿದ್ದ ಭವನಕ್ಕೆ ನೀವು ಸಹಾಯ ಮಾಡಬೇಕು ಎಂದು ಹೇಳಿದ್ದರು. ನಾನು ಈ ಹಿಂದೆ ಸ್ವಲ್ಪ ಅಡಚಣೆಗಳಿವೆ ಎಂದು ತಡೆಯಲು ಹೇಳಿದ್ದೆ. ಈಗ ಸಮಯ ಒದಗಿ ಬಂದಿದೆ. 5 ಕೋಟಿ ರೂಪಾಯಿಗಳನ್ನು ನೀಡಲಾಗುವುದು‌. ನಾನೇ ಖುದ್ದಾಗಿ ಬಂದು ಅದನ್ನು ಉದ್ಘಾಟನೆ ಮಾಡುತ್ತೇನೆ” ಎಂದು ಹೇಳಿದರು.

“ವೀರಶೈವ, ಲಿಂಗಾಯತ ಧರ್ಮ ಹೋರಾಟ ನಡೆಯುತ್ತಿತ್ತು. ಆಗ ಶ್ರೀಗಳ ಪಾದಕ್ಕೆ ನಮಸ್ಕಾರ ಮಾಡಿ ನಮ್ಮಿಂದ ತಪ್ಪಾಯಿತು ಕ್ಷಮಿಸಿ ಎಂದು ನಾನು ಪ್ರಾರ್ಥಿಸಿದ್ದೆ. ಇಡೀ ರಾಜ್ಯದಲ್ಲಿಯೇ ಇದರ ಬಗ್ಗೆ ಚರ್ಚೆ, ಟೀಕೆ, ಟಿಪ್ಪಣಿಯಾಯಿತು. ಆಗ ನಾನು ಯಾರಿಗೂ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿ, ಆತ್ಮಸಾಕ್ಷಿಗೆ ಅನುಗುಣವಾಗಿ ಬದುಕಬೇಕು ಎಂದಿದ್ದೆ” ಎಂದು ಹೇಳಿದರು.

“ಧರ್ಮ ಯಾವುದಾದರೂ ಇರಲಿ, ತತ್ವ, ನಾಮ ನೂರಾರೂ ಇದ್ದರು ದೈವವೊಂದೇ. ಪೂಜೆ ಹಲವಾದರೂ ಭಕ್ತಿಯೊಂದೇ, ದೇವನೊಬ್ಬ ನಾಮ ಹಲವು. ಮಾನವಧರ್ಮಕ್ಕೆ ಜಯವಾಗಲಿ, ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಅಜ್ಜಯ್ಯ ಹೇಳಿದ್ದಾರೆ. ಅವರ ಮಾತಿನಂತೆ ನಾವೆಲ್ಲರೂ ನಡೆಯಬೇಕು. ಜೊತೆಗೆ ಸಾಹಿತ್ಯ, ಸಂಸ್ಕೃತಿ ಸಮೃದ್ದಿಯಾಗಲಿ. ಶಾಂತಿ ಸದ್ಬುದ್ದಿ ಸರ್ವರಿಗೂ ದೊರಕಲಿ, ಧರ್ಮಕ್ಕಾಗಿ ಏಳಲಿ, ಬಾಳಲಿ, ಆಳಲಿ ಎಂದಿದ್ದಾರೆ” ಎಂದರು.

“ಅಕ್ಕಿ ಹಾಗೂ ಅರಿಶಿನ ಬೇರೆ ಬೇರೆ ಇವೆರಡೂ ಬೆರೆತರೆ ಮಂತ್ರಾಕ್ಷತೆಯಾಗುತ್ತದೆ. ಅದೇ ರೀತಿ ಇಂದು ನನ್ನ ಕೈಯಿಂದ ಅನೇಕ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಿಸಲಾಗಿದೆ. ಉದ್ಘಾಟನೆ ಮಾಡಿಸಲಾಗಿದೆ. ನಾವುಗಳು ಯಾರೂ ಸಹ ಇದೇ ಜಾತಿಯಲ್ಲಿ ಹುಟ್ಟುಬೇಕು ಎಂದು ಅರ್ಜಿ ಹಾಕಿ ಹುಟ್ಟುವುದಿಲ್ಲ. ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಪೂರ್ವಜನ್ಮದ ಪುಣ್ಯ” ಎಂದು ಹೇಳಿದರು.

“ಹಿರಿಯರು ಮನೆ ಹುಷಾರು, ಮಠ ಹುಷಾರು ಎಂದಿದ್ದಾರೆ. ನಾವು ನಮ್ಮ ಮಠಗಳನ್ನು ಉಳಿಸಿಕೊಳ್ಳಬೇಕು. ಧರ್ಮವನ್ನು ಕಾಪಾಡಿದರೆ ಧರ್ಮ ಅವರನ್ನು ಕಾಪಾಡುತ್ತದೆ. ಈ ಹುಟ್ಟು ಸಾವಿನ ಮಧ್ಯದಲ್ಲಿ ನಾವು ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಬೇಕು” ಎಂದರು.

“ರಂಭಾಪುರಿ ಮಠ ಒಂದು ಧರ್ಮದ ಆಸ್ತಿಯಲ್ಲ. ಮಾನವ ಧರ್ಮದ ಆಸ್ತಿ. ನಾನು ಸಹ ಈ ಮಠದ ಭಕ್ತ. ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯುವವನು. ನಾವು ಮಾಡುವ ಒಳ್ಳೆ ಕೆಲಸಗಳಿಗೆ ಶ್ರೀಗಳ ಆಶೀರ್ವಾದ ಮುಖ್ಯ” ಎಂದು ಹೇಳಿದರು.

“ನಮ್ಮ ಕುಟುಂಬದಲ್ಲಿ ಯಾರೇ ಜನಿಸಿದರು ಕೆಂಪೇಗೌಡ ಎಂದೇ ನಾಮಕರಣ ಮಾಡುವುದು. ನಮ್ಮ ಅಜ್ಜ, ಮುತ್ತಜ್ಜ, ತಂದೆಯ ಹೆಸರು ಸಹ ಕೆಂಪೇಗೌಡ. ನಮ್ಮ ತಂದೆ- ತಾಯಿಗೆ ಮಕ್ಕಳ ಜನನ ಸ್ವಲ್ಪ ತಡವಾದಾಗ ನಮ್ಮ ಊರಿನ ಬಳಿ ಇರುವ ಶಿವಾಲ್ದಾಪ್ಪ ಬೆಟ್ಟದಲ್ಲಿನ ಶಿವನಿಗೆ ಪೂಜಿಸದ ಮೇಲೆ ನನ್ನ ಜನನವಾಯಿತು. ಅದಕ್ಕೆ ನನಗೆ ಶಿವಕುಮಾರ ಎಂದು ಹೆಸರಿಟ್ಟಿದ್ದಾರೆ” ಎಂದರು.

“ನನಗೂ ವೀರಶೈವರಿಗೂ ಯಾವ ಕಾರಣಕ್ಕೆ ಅವಿನಾಭಾವ ಸಂಬಂಧ ಉಂಟಾಗಿದೆ ಎನ್ನುವುದು ಗೊತ್ತಿಲ್ಲ. ನಾನು ಪಿಯು ವಿದ್ಯಾಭ್ಯಾಸವನ್ನು ವೀರಶೈವ ಸಂಸ್ಥೆಯಲ್ಲಿ ಪೂರ್ಣಗೊಳಿಸಿದೆ. ನಂತರ ವೀರ ಗಂಗಾಧರ ಅಜ್ಜನವರು ಸ್ಥಾಪಿಸಿದ್ದ ರೇಣುಕಾಚಾರ್ಯ ಸಂಸ್ಥೆಯಲ್ಲಿ ಪದವಿ ಓದುತ್ತಿದ್ದೆ. ನಾನು ವೀರ ಗಂಗಾಧರ ಅಜ್ಜನವರ ಪರಮಭಕ್ತ. ಅವರನ್ನು ಸಂಪೂರ್ಣವಾಗಿ ನಂಬಿ ಕೆಲಸ ಮಾಡುವವನು” ಎಂದು ಹೇಳಿದರು.

“ಪುರಂದರ ದಾಸರ ಕೀರ್ತನೆಯಂತೆ ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ, ಪದುಮನಾಭನ ಪಾದ ಭಜನೆ ಪರಮ ಸುಖವಯ್ಯ. ಏಕೆಂದರೆ ಪರಮಗುರು ರೇಣುಕಾಚಾರ್ಯ ಅವರ ಪ್ರತಿಮೆಯನ್ನು ಉದ್ಘಾಟನೆ ಮಾಡುವ ಭಾಗ್ಯ ನನಗೆ ಸಿಕ್ಕಿದ್ದು ನನ್ನ ಪುಣ್ಯ” ಎಂದು ಹೇಳಿದರು.

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!