ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಬಸವರಾಜ ಬೊಮ್ಮಾಯಿ

World leaders should stop war before more disasters occur: Basavaraja Bommai

ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಡೆಯುತ್ತಿರುವ ಯುದ್ದದಲ್ಲಿ ಇಸ್ರೇಲ್ ಮಾತ್ರವಲ್ಲ, ಅಮೇರಿಕಾ‌ ಕೂಡ ಅದರ ಹಿಂದಿದೆ. ಮಧ್ಯಪ್ರಾಚ್ಯ ಇಡೀ ವಿಶ್ವದ ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರದೇಶ. ಅಲ್ಲಿ ಹಲವು ಯುದ್ಧಗಳನ್ನು ಕಂಡಿದ್ದೇವೆ. ಮೊದಲು ಜರಸಲೇಮ್ (ಧರ್ಮಕ್ಕಾಗಿ) ಗಾಗಿ ಯುದ್ಧ ನಡೆಯುತಿತ್ತು. ಈಗ ಪೆಟ್ರೋಲಿಯಂ, ಧಾರ್ಮಿಕ ವಿಚಾರಕ್ಕೆ ಯುದ್ಧ ಅಗುತ್ತಿದೆ. ಅಮೇರಿಕಾ ಆಯಿಲ್ ಮೇಲೆ ಹಿಡಿತ ಸಾಧಿಸಲು ಹೋರಾಟ ಮಾಡುತ್ತಿದೆ. ಅಮೇರಿಕಾ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೆಳಿದರು.

ಮೂರನೇ ವಿಶ್ವ ಯುದ್ಧ ಆಗುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂರನೇ ವಿಶ್ವ ಯುದ್ದ ಆಗಲು ಚೀನಾ ಮತ್ತು ರಷ್ಯಾ ಇನ್ನೂ ಯುದ್ದಕ್ಕೆ ಇಳಿದಿಲ್ಲ. ಕಾದು ನೋಡುವ ತಂತ್ರ ಮಾಡುತ್ತಿವೆ. ಅವರೂ ಯುದ್ದ ರಂಗಕ್ಕೆ ಇಳಿದರೆ ಬಹಳ‌ ದೊಡ್ಡ ಮಟ್ಟಕ್ಕೆ ಹೋಗಲಿದೆ. ದೊಡ್ಡ ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಹೇಳಿದರು.

ಯುಎಇಯಲ್ಲಿ ಕನ್ನಡಿಗರು ಸಿಲುಕಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಲವು ಯುದ್ಧಗಳ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ. ಶಾಂತಿ ನೆಲೆಸಿದ ಬಳಿಕ ಕರೆ ತರಬಹುದು.

ದುಬೈ, ಅಬುದಾಬಿ, ಸೌಧಿ ಅರೇಬಿಯಾ ಒಂದೇ ಬಾರಿ ಯುದ್ಧ ನಡೆಯುತ್ತಿದೆ ಹಾಗಾಗಿ ಒಟ್ಟಿಗೆ ಸಮಸ್ಯೆ ಆಗಿದೆ. ಎಲ್ಲಾ ಕಡೆ ಭಾರತೀಯರು ಇದ್ದಾರೆ. ಭಾರತ ಸರ್ಕಾರ ಮಹತ್ವದ ಪಾತ್ರವಿದೆ. ಭಾರತ ಸರ್ಕಾರ ಎಲ್ಲಾ ರಾಯಭಾರಿ ಕಚೇರಿಗೆ ಸಂಪರ್ಕ ಮಾಡಿ. ಅವರಿಗೆ ಅನ್ನ, ವಸತಿ ನೀಡುವ ಬಗ್ಗೆ ಕ್ರಮ ಆಗಬೇಕು. ಭಾರತ ತನ್ನ ಆಯಿಲ್ ರಿಸೋರ್ಸ್ ಮೇಲೆ ಅವಲಂಭಿತವಾಗಿತ್ತು. ಹಾಗಾಗಿ ಭಾರತದ ಮೇಲೂ ಪರಿಣಾಮ ಬೀರಲಿದೆ.

ಹತ್ತು ವರ್ಷಗಳ ಹಿಂದೆ ಆಯಿಲ್‌ಗಾಗಿ ಕ್ಯೂ ನಿಂತಿತ್ತು. ಮತ್ತೆ ಅಂತದ್ದೇ ಪರಿಸ್ಥಿತಿ ಬರಬಹುದು. ಪಾಕಿಸ್ತಾನ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಆಗಿರುವ ಹಿಂಸೆ ನೋಡಿದರೆ ಭಾರತದಲ್ಲಿ ಅಂತ ಹಿಂಸೆ ಆಗಿಲ್ಲ‌. ಪಾಕಿಸ್ತಾನದಲ್ಲಿ ಗೋಲಿಬಾರ್ ಆಗಿತ್ತು. ಭಾರತದಲ್ಲಿ ಆ ರೀತಿ ಆಗಲು ಅವಕಾಶ ಇಲ್ಲ ಎಂದು ಹೇಳಿದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!