Caste Census: B.Y. Vijayendra calls for listing as Hindu

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಬೆಂಗಳೂರು: ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ ನೀಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 56ಕ್ಕೆ ಏರಿಸಿದ್ದಾರೆ. ನೀವು 50 ಸಾವಿರ ಖಾಲಿ ಹುದ್ದೆ ಭರ್ತಿ ಮಾಡುತ್ತೀರಾ, ಅಥವಾ 1 ಲಲಕ್ಷ ಹುದ್ದೆ ಭರ್ತಿ ಮಾಡುವಿರಾ ಎಂಬುದು ನಿಮಗೆ ಬಿಟ್ಟದ್ದು.

ಎಲ್ಲ ಖಾಲಿ ಹುದ್ದೆ ಭರ್ತಿ ಮಾಡಿ ಎಂಬ ಆಗ್ರಹ ನಮ್ಮದು. ಶೇ 56 ಒಳ ಮೀಸಲಾತಿ ನೀಡಿ ಬಿಜೆಪಿ ಸರಕಾರವು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿದೆ. ಅದರ ಆಧಾರದಡಿ ಶೋಷಿತ- ಪೀಡಿತ ಸಮುದಾಯಗಳಿಗೆ ಒಳ ಮೀಸಲಾತಿ ಪರಿಗಣಿಸಿ ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳೇ ಪದೇಪದೇ ಈ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದೀರಿ. ಪರಿಶಿಷ್ಟ ಜಾತಿ- ಪಂಗಡಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ರಾಜ್ಯ ನ್ಯಾಯಾಲಯದ ಕುಂಟುನೆಪ ಹೇಳದೇ ಈ ಸಮುದಾಯಗಳಿಗೆ ಉದ್ಯೋಗ ನೀಡಿ ನ್ಯಾಯ ಕೊಡಿ ಎಂದು ಒತ್ತಾಯಿಸಿದರು.

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ- ಪಂಗಡಗಳ ಯುವಜನತೆ ಸೇರಿ ಎಲ್ಲ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಿ. ಅದನ್ನು ಬಿಟ್ಟು ಈ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ತೊಟ್ಟಿಲು ತೂಗುವ ಜೊತೆಗೇ ಮಗುವನ್ನು ಚಿವುಟುವ ಕೆಲಸ ಮಾಡುತ್ತಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು. ಹಳೆಯ ಮೀಸಲಾತಿ ಪ್ರಮಾಣದಡಿ ನೇಮಕಾತಿ ಮಾಡಲು ಮುಂದಾಗಿರುವ ರಾಜ್ಯ ಸರಕಾರವು ರಾಜ್ಯದಲ್ಲಿ ಬೆಂಕಿ ಹಚ್ಚಲು ಹೊರಟಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನೀವೆಷ್ಟು ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುತ್ತೀರೆಂಬುದು ನಮಗೆ ತಿಳಿದಿಲ್ಲ. ಆದರೆ, ಯಾವ ಅಹಿಂದ ಸಮುದಾಯದ ಅಧಿಕಾರ ಹಿಡಿದ ಮುಖ್ಯಮಂತ್ರಿಗಳೇ ಆ ಸಮುದಾಯದ ತಾಳ್ಮೆಯನ್ನು ಪರೀಕ್ಷೆ ಮಾಡದಿರಿ. ಶೋಷಿತ- ಪೀಡಿತ ಸಮುದಾಯಗಳನ್ನು ಕೆಣಕದಿರಿ. ಒಳ ಮೀಸಲಾತಿ ಜಾರಿ ಮಾಡದೇ ಖಾಲಿ ಹುದ್ದೆ ಭರ್ತಿ ಮಾಡುವ ಕೆಲಸ ಮಾಡಿದರೆ, ರಾಜ್ಯದಲ್ಲಿ ಮುಂದೆ ಆಗುವ ಘಟನೆಗಳಿಗೆ ತಾವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದೆಲ್ಲವನ್ನು ಪರಿಗಣಿಸಿ ಸಮರ್ಪಕ ನಿರ್ಧಾರವನ್ನು ಮುಖ್ಯಮಂತ್ರಿಗಳು ಮಾಡಬೇಕೆಂದು ಮನವಿ ಮಾಡಿದರು.

ಯುವಜನತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಯೋಮಿತಿ ಮೀರುತ್ತಿದೆ. ಅವರ ಸಹನೆಯ ಕಟ್ಟೆ ಒಡೆದು ಹೋಗಿದೆ. ಇದನ್ನು ಕೂಡ ಪರಿಗಣಿಸಿ ನ್ಯಾಯ ಕೊಡುವ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳಬೇಕೆಂದು ಒತ್ತಾಯವನ್ನು ಮುಂದಿಟ್ಟರು.

ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಪ್ರಾರಂಭ ಆಗಲಿವೆ

ಇದೇ 6ರಂದು ಅಧಿವೇಶನ ಆರಂಭ ಆಗುತ್ತಿದೆ. ಸರಣಿ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಪ್ರಾರಂಭ ಆಗಲಿದೆ. ನುಡಿದಂತೆ ನಡೆದ ಸರಕಾರ ಯಾವುದೇ ಭರವಸೆಯನ್ನೂ ಈಡೇರಿಸಿಲ್ಲ ಎಂದು ಟೀಕಿಸಿದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ಪ್ರಾರಂಭ ಮಾಡಲಿದ್ದಾರೆ. ಅತಿಥಿ ಉಪನ್ಯಾಸಕರ ಆಶ್ವಾಸನೆಯನ್ನೂ ಸರಕಾರ ಈಡೇರಿಸಿಲ್ಲ. ಅವರೂ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಸೃಷ್ಟಿಯಾಗಿದೆ ಎಂದು ಗಮನ ಸೆಳೆದರು.

ಕೆಎಸ್‍ಆರ್‍ಟಿಸಿ- ಬಿಎಂಟಿಸಿ ನೌಕರರಿಗೆ ಪಿಎಫ್- ಗ್ರಾಚ್ಯುಟಿ ಕೊಡದೇ ಅನ್ಯಾಯ ಮಾಡುತ್ತಿದ್ದು, ಅವರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರೂ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿಗೆ ಬಂದು ತಲುಪಿದೆ. ಮತ್ತೊಂದೆಡೆ 108 ಆಂಬುಲೆನ್ಸ್ ಕೆಟ್ಟು ನಿಂತು ನೌಕರರಿಗೆ ಸಂಬಳ ಕೊಟ್ಟಿಲ್ಲ. 34 ತಿಂಗಳಿನಿಂದ ಸಣ್ಣಪುಟ್ಟ ಗುತ್ತಿಗೆದಾರರು ಸೇರಿಸಿಕೊಂಡು ಸುಮಾರು 40- 45 ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ. ಈಗಾಗಲೇ ಆತ್ಮಹತ್ಯೆ ಪ್ರಕರಣಗಳೂ ನಡೆದಿವೆ ಎಂದು ವಿವರಿಸಿದರು.

ಬೆಂಗಳೂರಿನ ಕಸದ ಸಮಸ್ಯೆ ತಮಗೆ ತಿಳಿದೇ ಇದೆ. ಪೌರಕಾರ್ಮಿಕರ ಹೋರಾಟವೂ ನಡೆಯಲಿದ್ದು, ಸರಣಿ ಹೋರಾಟಗಳು ಪ್ರಾರಂಭ ಆಗಲಿವೆ. ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.
ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರನ್ನು ಸಮಾಧಾನಪಡಿಸಲು ನೀವು ವಿದೇಶ ಪ್ರವಾಸ ಕಲ್ಪಿಸಿ ಕೊಟ್ಟಿದ್ದೀರೆಂದರೆ, ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ; ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಭಿವೃದ್ಧಿಯಿಂದ ಕರ್ನಾಟಕವು ವಂಚಿತವಾಗಿದೆ. ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ. ಇದು ವಾಸ್ತವಿಕ ಸತ್ಯ. ಆದ್ದರಿಂದ ಮುಖ್ಯಮಂತ್ರಿಗಳು ಕೇಂದ್ರ ಸರಕಾರವನ್ನು ದೂರುವುದನ್ನು ಬಿಟ್ಟು ಇವೆಲ್ಲ ವಿಚಾರಗಳನ್ನು ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Cm Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Budget) ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.

[ccc_my_favorite_select_button post_id="119969"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ಸ್ಥಳದಲ್ಲಿಯೇ ಸಾವನಪ್ಪಿ, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ***** ಬಳಿ ಸಂಭವಿಸಿದೆ

[ccc_my_favorite_select_button post_id="119977"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!