ಇಂದು ಹೊಸಕೋಟೆಯಲ್ಲಿ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶ

Revenue Services Guarantee Dedication Conference in Hoskote today

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶದ ಕಾರ್ಯಕ್ರಮವನ್ನು ಕಂದಾಯ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಮಾರ್ಚ್ 04 ಬೆಳಗ್ಗೆ 11 ಗಂಟೆಗೆ ಹೊಸಕೋಟೆ (Hoskote) ನಗರದಲ್ಲಿರುವ ಬಿ.ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೆರವೇರಿಸಲಿದ್ದಾರೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಂದಾಯ ಸೇವೆಗಳ ದಾಖಲೆಗಳನ್ನ ವಿತರಣೆ ಮಾಡಲಿದ್ದಾರೆ.

5ನೇ ಹಣಕಾಸು ಆಯೋಗದ ಅಧ್ಯಕ್ಷ ಶ್ರೀ ಸಿ. ನಾರಾಯಣಸ್ವಾಮಿ ಉಪಸ್ಥಿತಿ ಇರಲಿದ್ದು, ರಾಜ್ಯ ವಿದ್ಯುನ್ಮಾನಾಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಎನ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ರಾಜಣ್ಣ, ಹೊಸಕೋಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್. ಕೇಶವಮೂರ್ತಿ, ಹೊಸಕೋಟೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿಕ್ಕಹುಲ್ಲೂರು ಬಚ್ಚೇಗೌಡ ಉಪಸ್ಥಿತರಿರುತ್ತಾರೆ.

ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ , ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌನ್ಸಿಲ್, ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಿ.ಸಿ.ಜಾಫರ್, ಕಂದಾಯ ಆಯುಕ್ತೆ ಸಿ.ಎನ್. ಮೀನಾ ನಾಗರಾಜ್, ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳು, ಬೆಂಗಳೂರು ಶ್ರೀ ಮುಲ್ಫ್ ಮುಹಿಲನ್ ಎಂ.ಪಿ. ಭಾ.ಆ.ಸೇ. ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಎಸ್. ಹೊನ್ನಾಂಬ, ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತ ವೆಂಕಟರಾಜ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ನಿರ್ದೇಶಕರು (ಪ್ರಭಾರ) ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ ಕಂದಾಯ ಆಯುಕ್ತಾಲಯ ನಿರ್ದೇಶಕ ಎಂ.ಎಸ್. ದಿವಾಗರ ವಿಶೇಷ ಆಹ್ವಾನಿತರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಚಂದ್ರಕಾಂತ್, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು ಸರ್ಕಾರಿ ನೌಕರರ ಸಂಘ ಮತ್ತು ಇತರೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಸ್ತ ನಾಗರಿಕರು, ಪತ್ರಿಕಾ ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ.

ರಾಜಕೀಯ

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ (Women's reservation Bill) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

[ccc_my_favorite_select_button post_id="121067"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!