Budget; Ar. Ashoka, B.Y. Vijayendra angered by holding mug

ಬಜೆಟ್; ಚೊಂಬು ಹಿಡಿದ ವಿರೋಧ ಪಕ್ಷ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಮೇಲೆ ಸಾಲದ ಹೊರೆ ಹೇರಿದ್ದಾರೆ. ಈ ಬಜೆಟ್‌ ಸೇರಿದಂತೆ 4,39,254 ಕೋಟಿ ರೂ. ಸಾಲವನ್ನು ಸಿಎಂ ಮಾಡಿದ್ದು, ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಕ್ರೋಶ ಹೊರಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮಾಡಿ ತುಪ್ಪ ತಿನ್ನು ಎನ್ನುವಂತಹ ಉಪ್ಪು, ಹುಳಿ ಖಾರ ಇಲ್ಲದ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ಯಾವುದೇ ಹೊಸ ಯೋಜನೆಗಳಿಲ್ಲ ಕೇವಲ ʼಸಾಲʼದ ಯೋಜನೆಗಳೇ ತುಂಬಿವೆ.

ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ 4,39,254 ಕೋಟಿ ರೂ. ಸಾಲದ ಹೊರೆಯನ್ನು ರಾಜ್ಯದ ಜನರ ತಲೆ ಮೇಲೆ ಹೇರಿದ್ದಾರೆ. ಈ ಹಣಕ್ಕೆ ಬಡ್ಡಿ ಪಾವತಿಸಲು ಕೂಡ ಆಗದ ಪರಿಸ್ಥಿತಿ ಬಂದಿದೆ. ವಿತ್ತೀಯ ಕೊರತೆ 97,000 ಕೋಟಿ ರೂ. ಆಗಿದೆ. ಸಿದ್ದರಾಮಯ್ಯನವರು ಇನ್ನೂ ಮುಂದುವರಿದರೆ ಸಾಲದ ಹೊರೆ 10 ಲಕ್ಷ ಕೋಟಿ ರೂ. ಆಗಲಿದೆ. ಸಿದ್ದರಾಮಯ್ಯನವರು ಹಿಂದಿನ ಎಲ್ಲ ಮುಖ್ಯಮಂತ್ರಿಗಳನ್ನು ಮೀರಿಸಿ ಹತ್ತು ಪಟ್ಟು ಅಧಿಕ ಸಾಲ ಮಾಡಿದ್ದಾರೆ ಎಂದರು.

ನೀರಾವರಿ ಕ್ಷೇತ್ರಕ್ಕೆ ಇವರು ಯಾವುದೇ ಕೊಡುಗೆ ನೀಡಿಲ್ಲ. ಕೃಷ್ಣೆಗೆ ಪ್ರತಿ ವರ್ಷ 10,000 ಕೋಟಿ ರೂ. ನೀಡುತ್ತೇನೆಂದು ಹೇಳಿ ಕೇವಲ ಕಣ್ಣೀರು ನೀಡಿದ್ದಾರೆ. ಎಲ್ಲ ನೀರಾವರಿ ಯೋಜನೆಗಳು ಸೇರಿ 8,045 ಕೋಟಿ ರೂ. ಕೊಟ್ಟಿದ್ದಾರೆ. ಬೆಂಗಳೂರು ಕಸ ನಿರ್ವಹಣೆ ಬಗ್ಗೆ, ರಸ್ತೆಗುಂಡಿ ಬಗ್ಗೆ ಚಕಾರ ಎತ್ತಿಲ್ಲ. ಗೋವಿಂದರಾವ್‌ ವರದಿಯಂತೆ ಉತ್ತರ ಕರ್ನಾಟಕಕ್ಕೆ 43,000 ಕೋಟಿ ರೂ. ನೀಡಿಲ್ಲ. ಪ್ರತಿ ವರ್ಷ 15,000 ಕೋಟಿ ರೂ. ಕೊಡಬೇಕಿತ್ತು. ಈ ಬಗ್ಗೆ ನಾನು ಕೂಡ ಪತ್ರ ಬರೆದಿದ್ದೆ. ಆ ವರದಿಯ ಬಗ್ಗೆ ಎಲ್ಲೂ ಉಲ್ಲೇಖ ಮಾಡದೆ ಉತ್ತರ ಕರ್ನಾಟಕವನ್ನು ಕಡೆಗಣಿಸಿದ್ದಾರೆ ಎಂದರು.

ಮಂಗಳೂರು, ಉಡುಪಿ, ಉತ್ತರ ಕನ್ನಡ ಮೊದಲಾದ ಭಾಗಗಳಿಗೆ ಏನೂ ನೀಡಿಲ್ಲ. ಕರಾವಳಿಗೆ ಒಣಗಿದ ಮೀನು ಕೂಡ ನೀಡಿಲ್ಲ. ಇಲ್ಲಿಗೆ ಸಂಪೂರ್ಣ ಚೊಂಬು ನೀಡಿದ್ದಾರೆ. ಅತಿ ಹೆಚ್ಚು ತೆರಿಗೆ ನೀಡುವ ಕರಾವಳಿಗೆ ಇದು ಕರಾಳ ದಿನವಾಗಿದೆ. ದ್ವೇಷ ಭಾಷಣ ಕಾನೂನಿನಡಿ ಜೈಲಿಗೆ ಹಾಕುತ್ತೇನೆ ಎಂದು ಹೆದರಿಸಿದ್ದಾರೆ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣ ದುರುಪಯೋಗ ಮಾಡಲ್ಲ ಎಂದು ಎಲ್ಲೂ ಹೇಳಿಲ್ಲ. ಈ ಮೂಲಕ ಪರಿಶಿಷ್ಟರ ಹಣವನ್ನು ಮತ್ತೆ ಲೂಟಿ ಮಾಡಿದ್ದಾರೆ. ಈ ಹಿಂದೆ ನೋಂದಣಿಗೆ ಬಡವರಿಗೆ 5% ರಷ್ಟು ರಿಯಾಯಿತಿ ನೀಡಲಾಗುತ್ತಿತ್ತು. ಈಗ ಅದು ಕೂಡ ಇಲ್ಲ ಎಂದರು.

ಜಿಡಿಪಿ ಪ್ರಗತಿ ಕಡಿಮೆಯಾಗುತ್ತಿದೆ. ವಿತ್ತೀಯ ಕೊರತೆಯನ್ನು 3% ಒಳಗೆ ಇಟ್ಟಿದ್ದೇವೆ ಎಂದು ಹೇಳಿದ್ದರೂ, ಅದನ್ನು ಈಗಾಗಲೇ ಮೀರಿದ್ದಾರೆ. ಹಣದ ಕೊರತೆ ಬಂದಾಗ ಬಾಂಡ್‌ಗಳನ್ನು ತರುತ್ತಾರೆ. ಹೀಗೆಯೇ ಬೆಂಗಳೂರಿನ ಅಭಿವೃದ್ಧಿಗೆ ಬಾಂಡ್‌ಗಳನ್ನು ತಂದಿದ್ದಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಇದರಿಂದಲೇ ಗೊತ್ತಾಗುತ್ತದೆ. ಈ ಬಾರಿ 22,957 ಕೋಟಿ ರೂ. ಕೊರತೆ ಇದೆ. 2023 ರಲ್ಲಿ ಸಿದ್ದರಾಮಯ್ಯ 85,218 ಕೋಟಿ ರೂ., 2024 ರಲ್ಲಿ 1.05 ಲಕ್ಷ ಕೋಟಿ ರೂ. ಸಾಲ, 2025 ರಲ್ಲಿ 1.16 ಲಕ್ಷ ಕೋಟಿ ರೂ. ಹಾಗೂ ಈ ಬಾರಿ 1,32,190 ಕೋಟಿ ರೂ. ಸಾಲ ಮಾಡಿದ್ದಾರೆ ಎಂದರು.

ಸರ್ಕಾರಿ ಉದ್ಯೋಗಕ್ಕಾಗಿ ಯುವಜನರು ಹೋರಾಟ ಮಾಡಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ, ಗ್ರಾಮೀಣ ರಸ್ತೆಗಳಿಗೆ ಅನುದಾನ ನೀಡಿಲ್ಲ. ಹಾಲಿಗೆ 7 ರೂ. ಪ್ರೋತ್ಸಾಹಧನ ನೀಡಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಗೃಹಲಕ್ಷ್ಮಿಯಲ್ಲಿ ನುಂಗಿದ 5,000 ಕೋಟಿ ರೂ. ಇನ್ನೂ ಯಕ್ಷಪ್ರಶ್ನೆಯಾಗಿದೆ. ಈ ಬಾರಿಯೂ ಒಂದೊಂದೇ ತೆರಿಗೆಗಳನ್ನು ಆರಂಭಿಸುತ್ತಾರೆ. ಆದಾಯ ಬಂದಿದೆ ಎಂದು ನಾಟಕ ಮಾಡಿದ್ದಾರೆ. ವಾಸ್ತವದಲ್ಲಿ ಅಷ್ಟೊಂದು ಹಣ ಬಂದಿಲ್ಲ. ಇಲಾಖೆಗಳಿಗೂ ಹಣ ಬಿಡುಗಡೆಯಾಗಿಲ್ಲ. ಆದ್ದರಿಂದ ಖಾಲಿ ಚೊಂಬು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಸರ್ವರಿಗೂ ಸಾಲ

“ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ಸರ್ಕಾರ ಇಂದು ಕರ್ನಾಟಕದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬ ಸ್ಥಿತಿ ನಿರ್ಮಿಸಿದೆ. ಜನರ ಕೆಂಗಣ್ಣಿಗೆ ಗುರಿಯಾಗಿ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಾಗಲೆಲ್ಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರನ್ನು ದಿಕ್ಕು ತಪ್ಪಿಸುವ ಚಳಿಯನ್ನು ಬಜೆಟ್‌ನಲ್ಲಿಯೂ ಮುಂದುವರೆಸಿರುವ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲೂ ಅದೇ ಚಾಳಿ ಪ್ರದರ್ಶನ ಮಾಡಿದ್ದಾರೆ.

ರಾಜ್ಯದ ಆರ್ಥಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡಬೇಕಾದ ಬಜೆಟ್‌ನಲ್ಲಿ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಹೇಳುವ ಬದಲು ಕಟ್ಟು ಕಥೆಗಳನ್ನು ಹೇಳುತ್ತಾ ಕಾಲಹರಣ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದ ಸಾಲದ ಪ್ರಮಾಣವೇ ಅದರ ಆರ್ಥಿಕ ನಿರ್ವಹಣೆಯ ನಿಜ ಮುಖವನ್ನು ಬಯಲಿಗೆಳೆಯುತ್ತದೆ.

2023–24ರಲ್ಲಿ ಸುಮಾರು ₹82,000 ಕೋಟಿ, 2024–25ರಲ್ಲಿ ₹1.05 ಲಕ್ಷ ಕೋಟಿ, 2025–26ರಲ್ಲಿ ₹1.16 ಲಕ್ಷ ಕೋಟಿ, ಮತ್ತು ಈಗ 2026–27ರ ಬಜೆಟ್ ಅಂದಾಜಿನಲ್ಲಿ ₹1.32 ಲಕ್ಷ ಕೋಟಿ ಸಾಲ ಮಾಡಲು ಯೋಜನೆ ರೂಪಿಸಲಾಗಿದೆ. ಅಂದರೆ ಕೇವಲ ನಾಲ್ಕು ವರ್ಷಗಳಲ್ಲಿ ಈ ಸರ್ಕಾರವು ಸುಮಾರು ₹4.4 ಲಕ್ಷ ಕೋಟಿ ಹೊಸ ಸಾಲ ಮಾಡುವ ಪರಿಸ್ಥಿತಿ ಉಂಟುಮಾಡಿದೆ.

ಇದು ಅಭಿವೃದ್ಧಿಗಾಗಿ ಮಾಡಿದ ಸಾಲವೇ? ಅಥವಾ ಚುನಾವಣಾ ಗ್ಯಾರಂಟಿಗಳಿಗಾಗಿ ರಾಜ್ಯದ ಭವಿಷ್ಯವನ್ನು ಗಿರವಿ ಇಟ್ಟ ಸಾಲವೇ ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ಕನ್ನಡಿಗನ ಮನಸ್ಸಿನಲ್ಲಿ ಮೂಡಿದೆ ಎಂದು ಅವರು ಹೇಳಿದರು.

ರಾಜ್ಯದ ಹಣಕಾಸಿನ ವಾಸ್ತವ ಸ್ಥಿತಿ ಇನ್ನಷ್ಟು ಆತಂಕಕಾರಿಯಾಗಿದೆ. 2026–27ರಲ್ಲಿ ಕರ್ನಾಟಕದ ಒಟ್ಟು ರಾಜಸ್ವ ಆದಾಯ ಸುಮಾರು ₹3.15 ಲಕ್ಷ ಕೋಟಿ ಆಗಿದ್ದರೆ, ಕೇವಲ ಸಂಬಳ, ಪಿಂಚಣಿ ಮತ್ತು ಬಡ್ಡಿ ಪಾವತಿಗೆ ಹೋಗುತ್ತಿರುವ ಮೊತ್ತವೇ ಸುಮಾರು ₹2.77 ಲಕ್ಷ ಕೋಟಿ. ಅಂದರೆ ರಾಜ್ಯದ ಆದಾಯದ ಸುಮಾರು 88% ಕೇವಲ ಕಮಿಟೆಡ್ ವೆಚ್ಚಗಳಿಗೆ ಹೋಗುತ್ತಿದೆ. ಇದರ ಪರಿಣಾಮವಾಗಿ ಈ ವರ್ಷ ರಾಜಸ್ವ ಕೊರತೆ ₹22,957 ಕೋಟಿ, ಮತ್ತು ವಿತ್ತೀಯ ಕೊರತೆ ಸುಮಾರು ₹1,09,998 ಕೋಟಿ ತಲುಪಿದೆ.

ಅಭಿವೃದ್ಧಿ ಯೋಜನೆಗಳಿಗೆ ಹಣ ಮೀಸಲಿಡುವ ಬದಲು ಸಾಲದ ಬಲೆಗೆ ರಾಜ್ಯವನ್ನು ತಳ್ಳುತ್ತಿರುವುದು ಈ ಬಜೆಟ್‌ನ ಕಹಿ ಸತ್ಯ ಎಂದು ಅವರು ದೂರಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಹಣಕಾಸಿನ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿತ್ತು. ರಾಜ್ಯದ ಸಾಲವು ಜಿಎಸ್‌ಡಿಪಿಯ 25% ಒಳಗೆ ಇತ್ತು, ಫಿಸ್ಕಲ್ ಡೆಫಿಸಿಟ್ 3% ಒಳಗೆ ಇತ್ತು ಮತ್ತು ಹಲವಾರು ವರ್ಷಗಳಲ್ಲಿ ರಾಜಸ್ವ ಉಳಿಕೆ ಕೂಡ ಇತ್ತು. ಆದರೆ ಇಂದು ಸ್ಥಿತಿ ಸಂಪೂರ್ಣ ಬದಲಾಗಿದೆ. ಸಾಲ ಮಾಡಿ ಸಂಬಳ ಕೊಡುವ ಮಟ್ಟಕ್ಕೆ ರಾಜ್ಯವನ್ನು ತಳ್ಳಿರುವುದು ಈ ಕಾಂಗ್ರೆಸ್‌ ಸರ್ಕಾರದ ಆರ್ಥಿಕ ದುರಾಡಳಿತದ ಸ್ಪಷ್ಟ ಉದಾಹರಣೆ. ಅಭಿವೃದ್ಧಿಯ ಬದಲು ಸಾಲ, ಆರ್ಥಿಕ ಶಿಸ್ತಿನ ಬದಲು ಅರಾಜಕತೆ, ದೂರದೃಷ್ಟಿಯ ಬದಲು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಕ್ಷುಲ್ಲಕ ರಾಜಕೀಯ ಎಂದು ಅವರು ಹೇಳಿದ್ದಾರೆ.

6-3-2026
ಗೆ,
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು

ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ
ಬಜೆಟ್: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬಜೆಟ್ ಓದಲು ಆರಂಭಿಸಿದಾಗ ಅದನ್ನು ಕೇಳುತ್ತಿದ್ದರೆ ಯಾರೋ ಸಾಹಿತಿಗಳು ಬರೆದುಕೊಟ್ಟಂತಿತ್ತು. ಕೇಳುವುದಕ್ಕೆ ತುಂಬ ಚೆನ್ನಾಗಿತ್ತು. ಓದಲೂ ಚೆನ್ನಾಗಿ ಅನಿಸಿರಬಹುದು. ಆದರೆ, ರಾಜ್ಯದ ಜನತೆಗೆ ಯಾವುದೇ ಪ್ರಯೋಜನ ಆಗಿಲ್ಲ; 17ನೇ ಬಜೆಟ್ ಮೂಲಕ ನಾಡಿನ ಜನತೆಗೆ ಚೊಂಬನ್ನು ನೀಡಿದ್ದಾರೆ ಎಂದರು.

ಕಳೆದ 3 ಬಜೆಟ್ ಅನ್ನು ನೋಡಿದರೆ, ಹಿಂದಿನ ಬಜೆಟ್‍ನಲ್ಲಿ 1 ಲಕ್ಷ 16 ಸಾವಿರ ಕೋಟಿ ಸಾಲ ಮಾಡಿದ್ದರು. ಈ ಬಾರಿ 2025-26ನೇ ಸಾಲಿಗೆ 1 ಲಕ್ಷ 32 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. ಕಳೆದ 3 ವರ್ಷಗಳಲ್ಲಿ 4 ಲಕ್ಷ 39 ಸಾವಿರ ಕೋಟಿ ರೂ. ಸಾಲ ಮಾಡಿದ್ದೇ ಸಿದ್ದರಾಮಯ್ಯನವರ ದಾಖಲೆ ಎಂದು ಟೀಕಿಸಿದರು.

ಒಬ್ಬ ಅನುಭವಿ ಮುಖ್ಯಮಂತ್ರಿಗಳಿದ್ದು, 17ನೇ ಬಜೆಟ್ ಮಂಡಿಸುವ ಸುವರ್ಣಾವಕಾಶ ಅವರಿಗೆ ಸಿಕ್ಕಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರಿನಲ್ಲಿ ಹೋಮ ಮಾಡುವ ಕೆಲಸವನ್ನು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ ಬಜೆಟ್ ಇದು ಎಂದು ಆಕ್ಷೇಪಿಸಿದರು. ಮುಖ್ಯಮಂತ್ರಿಯವರು ಬಜೆಟ್ ಓದುವಾಗ ನಾನು ಆಡಳಿತ ಪಕ್ಷದ ಶಾಸಕರನ್ನು ಗಮನಿಸುತ್ತಿದ್ದೆ. ಯಾವುದೇ ಶಾಸಕರಲ್ಲಿ ಈ ಬಜೆಟ್ ಬಗ್ಗೆ ಆಸಕ್ತಿ ಇಲ್ಲದಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು ಎಂದು ನುಡಿದರು.

ಆಡಳಿತ ಪಕ್ಷದ ಶಾಸಕರು ಹಿರಿಯ ಶಾಸಕರ ಹತ್ತಿರ ತೆರಳಿ ಮುಖ್ಯಮಂತ್ರಿಗಳು ಪಂಗನಾಮ ಹಾಕಿದ್ದಾರೆ ಎಂದು ತಿಳಿಸಿದ್ದನ್ನು ಗಮನಿಸಿದ್ದಾಗಿ ವಿವರಿಸಿದರು. ಕೇವಲ ಏಳೆಂಟು ಸಚಿವರಷ್ಟೇ ಇದ್ದರು. ಬೇರೆ ಸಚಿವರಿಗೆ, ಆಡಳಿತ ಪಕ್ಷದ ಶಾಸಕರಿಗೆ ಈ ಬಜೆಟ್ ಬಗ್ಗೆ ಆಸಕ್ತಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಆದ್ಯತಾ ರಂಗ ಎನಿಸಿದ ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಕಳೆದ ಬಾರಿಗಿಂತ ಅನುದಾನ ಕಡಿಮೆ ಮಾಡಿದ್ದಾರೆ. ಕಳೆದ ಬಾರಿ ಶಿಕ್ಷಣಕ್ಕೆ ಶೇ 12 ನೀಡಿದ್ದು, ಈ ಬಾರಿ ಕಡಿಮೆ ಕೊಟ್ಟಿದ್ದಾರೆ. ಯಾವುದೇ ಆದ್ಯತಾ ರಂಗಕ್ಕೆ ಆದ್ಯತೆ ನೀಡಿಲ್ಲ. ಬಂಡವಾಳ ಹೂಡಿಕೆಗೆ ಆದ್ಯತೆ ಕೊಟ್ಟಿಲ್ಲ. ಅಭಿವೃದ್ಧಿ ದೃಷ್ಟಿ ಇಟ್ಟುಕೊಂಡು ಈ ಬಜೆಟ್ ಮಂಡಿಸಿಲ್ಲ ಎಂದು ಟೀಕಿಸಿದರು.

ಇಂಥ ಬಜೆಟ್ ಮಂಡಿಸಿಯಾರೆಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮುಖ್ಯಮಂತ್ರಿಗಳು ರೈತರ ಬಗ್ಗೆಯೂ ಯಾವುದೇ ಕಾಳಜಿ ತೋರಿಲ್ಲ. ಯುವಜನತೆಗೆ ಆದ್ಯತೆ ಕೊಡುತ್ತಾರೆ; ಉದ್ಯೋಗ ಅವಕಾಶಕ್ಕೆ ಪೂರಕ ಬಜೆಟ್ ಕೊಡುವ ನಿರೀಕ್ಷೆ ಇತ್ತು. ಅದಕ್ಕೆ ಅವಕಾಶ ನೀಡಿಲ್ಲ; ತಮ್ಮ ಪಂಚ ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಸಾಧ್ಯ ಆಗದೇ ಪದೇಪದೇ ಅಬಕಾರಿ ಇಲಾಖೆ ಮೇಲೆ ಇವರು ಅವಲಂಬಿತರಾಗಿದ್ದಾರೆ ಎಂದು ದೂರಿದರು.

ಕುಡುಕರ ರಾಜ್ಯವಾಗಿ ಮಾಡಲು ಹೊರಟಿದ್ದಾರೆ

ಈ ಬಾರಿಯೂ 45 ಸಾವಿರ ಕೋಟಿ ರೂ. ಗಳನ್ನು ಮುಖ್ಯಮಂತ್ರಿಗಳು ಅಬಕಾರಿ ಇಲಾಖೆಯಿಂದ ನಿರೀಕ್ಷೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯವನ್ನು ಕುಡುಕರ ರಾಜ್ಯವಾಗಿ ಮಾಡಲು ಹೊರಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರೋಗ್ಯ ಇಲಾಖೆ, ನೀರಾವರಿ ಯೋಜನೆಗಳ ಕಡೆ ಗಮನ ಕೊಟ್ಟಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿಗೂ ಕಿಂಚಿತ್ತು ಕಾಳಜಿ ತೋರಿಸಿಲ್ಲ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳಿಗೆ ಜನ್ಮ ಕೊಟ್ಟ ಮೈಸೂರು ಜಿಲ್ಲೆಗೂ ಯಾವುದೇ ಕೊಡುಗೆ ಕೊಟ್ಟಿಲ್ಲ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕರಾವಳಿ ಭಾಗವು ಬಿಜೆಪಿಗೆ ದೊಡ್ಡ ಶಕ್ತಿಯನ್ನು ಕೊಟ್ಟಿದೆ ಎಂಬ ಒಂದೇ ಒಂದು ಕಾರಣಕ್ಕೆ ಅದರ ಉಲ್ಲೇಖವನ್ನೂ ಮಾಡಿಲ್ಲ. ಹಾಗಾಗಿ ಕರಾವಳಿ ಭಾಗ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಸೇರಿ ಇಡೀ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಕೋನ ಇಲ್ಲದ ಬಜೆಟ್ ಇದಾಗಿದೆ ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!