ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ಕನಕೇನಹಳ್ಳಿ- ಅಡಕ್ವಾಳ ನಡುವಿನ ಮಲ್ಲೇಗೌಡನಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಭಕ್ತರಹಳ್ಳಿ ಸಮೀಪದ ತಂಬೇನಹಳ್ಳಿ ಗ್ರಾಮದ ಚಂದನ್ (30 ವರ್ಷ), ಮುತ್ತುರಾಜು (31 ವರ್ಷ) ಎಂದು ಗುರುತಿಸಲಾಗಿದೆ.
ದೊಡ್ಡಬೆಳವಂಗಲ ಕಡೆಯಿಂದ ಕನಕೇನಹಳ್ಳಿ ಮಾರ್ಗವಾಗಿ ಬರುವ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್, ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.