ದೊಡ್ಡಬಳ್ಳಾಪುರ: ತಾಲೂಕಿನ ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ಅಧಿಕಾರಿ ನಾಗಮಣಿ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಗಿದ್ದು, ಎನ್.ಎಮ್. ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ (MPCS) 13 ಮಂದಿ ಸದಸ್ಯರಿದ್ದು, ಇಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ 6 ಮಂದಿ ಗೈರಾಗಿ 7 ಮಂದಿ ಹಾಜರಾಗಿದ್ದರು.

ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಗೋವಿಂದರಾಜು, ಎನ್.ಸಿ. ಕೆಂಪೇಗೌಡ, ಕಾಂಗ್ರೆಸ್ ಹಿರಿಯ ಮುಖಂಡ ರಾಜ್‌ಕುಮಾರ್, ಹಾದ್ರಿಪುರ ಗ್ರಾಪಂ ಮಾಜಿ ಅಧ್ಯಕ್ಷ ಟಿ.ಕೆಂಪೇಗೌಡ ಹಾಗೂ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.