ದೊಡ್ಡಬಳ್ಳಾಪುರ: ನಗರದ ಸರಸ್ವತಿ ಶಾಲೆಯಲ್ಲಿ (Saraswati School) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು (Women’s Day celebration) ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ ಮಾತನಾಡಿ, ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲಿಯೂ ಮುನ್ನಡೆಯುತ್ತಿದ್ದಾರೆ. ಕ್ರಿಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಅನನ್ಯವಾಗಿದೆ. ಇಂತಹ ಮಹಿಳೆಯರಿಗೆ ಸಮಾಜ ಗೌರವ ನೀಡಿ ಅವರನ್ನು ಸ್ಮರಿಸಬೇಕಿದೆ. ಮಹಿಳೆಯರ ಸ್ವಾಭಿಮಾನ ಹಾಗೂ ಅವರಿಗೆ ನೀಡಬೇಕಾದ ಸ್ಥಾನಮಾನಗಳ ಕುರಿತು ಮಹಿಳಾ ದಿನಾಚರಣೆ ಮಹತ್ವದ್ದಾಗಿದೆ ಎಂದರು.
ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎ.ಸುಬ್ರಹ್ಮಣ್ಯ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಯನ್ನು ಸ್ಮರಿಸಿ, ಇಂದಿನ ಸಮಾಜದಲ್ಲಿ ಮಹಿಳೆ ಎಲ್ಲಾ ರಂಗಗಳಲ್ಲೂ ಸಹ ತಮ್ಮದೇ ಆಗಿರುವಂತಹ ಚಾಪನ್ನು ಮೂಡಿಸಿದ್ದಾರೆ ಅದು ಎಲ್ಲರಿಗೂ ಮಾದರಿಯಾಗಲಿ ಎಂದು ತಿಳಿಸಿದರು.
ಶಾಲಾ ಶಿಕ್ಷಕಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಮಹಿಳಾ ಶಿಕ್ಷಕಿಯರಿಗೆ ಆಡಳಿತ ಮಂಡಳಿಯವರು ವಿವಿಧ ಕ್ರೀಡೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕರಾದ ಬಿ.ಕೆ.ಸಂಪತ್ ಕುಮಾರ್, ಶಿಕ್ಷಕರು ಉಪಸ್ಥಿತರಿದ್ದರು.