ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಅದಕ್ಕೆ ಸೇರ್ಪಡೆಯಾಗಿ ಮೂರು ದಿನದ ತಂಗಳು ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ, ಪತ್ನಿ ನಡುವೆ ತೆಗೆದಿದ್ದರಿಂದ ಮನನೊಂದ ಪತ್ನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.
ನಗರದ 27 ವರ್ಷದ ಮಹಿಳೆ ಕಾವ್ಯ ಬದುಕನ್ನೇ ಅಂತ್ಯಗೊಳಿಸಿದ್ದಾಳೆ.
ಪತಿಗೆ ಕಳೆದ ಮೂರು ದಿನಗಳಿಂದ ಒಂದೇ ಸಾಂಬಾರು ಬಡಿಸಿದ್ದಾಳೆ. ಫ್ರಿಡ್ಜ್ನಲ್ಲಿಟ್ಟು ತೆಗೆದು ಬಿಸಿ ಮಾಡಿ ಅದೇ ಸಾರನನ್ನು ಮೂರು ದಿನದಿಂದ ಬಡಿಸಿದ್ದಾಳೆ.
ಎರಡು ದಿನ ಸಹಿಸಿಕೊಂಡ ಗಂಡ ಮೂರನೇ ದಿನ ಆಕ್ರೋಶಗೊಂಡಿದ್ದಾನೆ. ಮೂರು ದಿನದ ಹಿಂದಿನ ಸಾರನ್ನು ಬಡಿಸುತ್ತಿದ್ದಿಯಾ ಎಂದು ಪತ್ನಿ ವಿರುದ್ದ ಜಗಳಕ್ಕೆ ನಿಂತಿದ್ದಾನೆ. ಪತ್ನಿಯನ್ನು ಹಿಗ್ಗಾಮುಗ್ಗ ಜಾಡಿಸಿದ್ದಾನೆ. ಪತಿಯ ಆಕ್ರೋಶ, ಬೈಗುಳಕ್ಕೆ ನೊಂದ ಪತ್ನಿ ಬದುಕನ್ನೇ ಅಂತ್ಯಗೊಳಿಸಿದ ಘಟನೆ ನಡೆದಿದೆ.
ಪರಿಣಾಮ 4 ವರ್ಷದ ಮಗು ಇದೀಗ ತಾಯಿಯನ್ನು ಕಳೆದುಕೊಂಡ ಘಟನೆ ನಡೆದಿದೆ.
ಬೆಂಗಳೂರು ನಿವಾಸಿ ರಂಗಸ್ವಾಮಿ ವ್ಯಕ್ತಿಯನ್ನು ಮದುವೆಯಾಗಿ ಕಳೆದ 5 ವರ್ಷದಿಂದ ಬೆಂಗಳೂರಿನಲ್ಲಿ ಸಂಸಾರ ನಡೆಸುತ್ತಿದ್ದರು. ಹೆಚ್ಚಿನ ಸಮಸ್ಯೆಗಳಿಲ್ಲದೇ ಸಂಸಾರ ಸಾಗಿತ್ತು. ಇದರ ನಡುವೆ ಉದ್ಭವಗೊಂಡ ಸಾಂಬರು ಸಮಸ್ಯೆ ಜೀವವನ್ನೇ ಬಲಿಪಡೆದಿದೆ ಎಂದು ವರದಿಯಾಗಿದೆ