ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ (Maramma’s temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ಕಲ್ಲುದೇವನಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಲ್ಲುದೇವನಹಳ್ಳಿ ಗ್ರಾಮದ ನಡು ಭಾಗದಲ್ಲಿರುವ ಮಾರಮ್ಮ ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಕಳ್ಳರು, ದೇವಿಯ ವಿಗ್ರಹಕ್ಕೆ ಅಳವಡಿಸಿದ್ದ ಚಿನ್ನದ ಮೂರು ಮಾಂಗಲ್ಯ ಹಾಗೂ ಗುಂಡುಗಳನ್ನು ಕದ್ದು ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ ಗ್ರಾಮಸ್ಥರು ದೇವಾಲಯದ ಬಳಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.