ಬೆಂ.ಗ್ರಾ.ಜಿಲ್ಲೆ: 2026-27ನೆ ಸಾಲಿಗೆ ತೋಟಗಾರಿಕೆ ಇಲಾಖಾ ತರಬೇತಿ ಕೇಂದ್ರದಲ್ಲಿ ತರಬೇತಿಗೆ ಅಭ್ಯರ್ಥಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ (Applications invited).
ರಾಜ್ಯದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2026-27ನೇ ಸಾಲಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ದಿನಾಂಕ 02-05-2026 ರಿಂದ 28-02-2027 ರವರೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ದಿನಾಂಕ:15-04-2026 ರ ಸಂಜೆ 5.30 ಗಂಟೆಯವರೆಗೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ.
ದಿನಾಂಕ:23-04-2026 ರಂದು ಸಂದರ್ಶನ ಇರುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ (ಜಿಪಂ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಕಛೇರಿಗೆ ನಿಗಧಿತ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸ ಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.