ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.
ನೆಲಮಂಗಲ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಹಾಗೂ ದೊಡ್ಡಬಳ್ಳಾಪುರ ಮಾರ್ಗವಾಗಿ ನೆಲಮಂಗಲ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ಹಾಗೂ ಕಂಟೈನರ್ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ.
ಈ ವೇಳೆ ಕ್ಯಾಂಟರ್ ಚಾಲಕ ಇಳಿದು ಪರಾರಿಯಾಗುವಾಗ ಅದೇ ರಸ್ತೆಯಲ್ಲಿ ಎದುರಿಗೆ ಬಂದ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ನೆಲಕ್ಕೆ ಬಿದ್ದು ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಗೊಂಡಿರುವ ಬೈಕ್ ಸವಾರನನ್ನು
ಕುಂಬಳಗುಂಟೆ ಲಕ್ಷ್ಮೀಕಾಂತ ಎಂದು ಗುರುತಿಸಲಾಗಿದೆ.
ದೊಡ್ಡಬೆಳವಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇನ್ನೂ ಚನ್ನಾದೇವಿ ಅಗ್ರಹಾರದ ಬಳಿ ಕಳೆದೊಂದು ವರದಲ್ಲಿ ಇದು ಮೂರನೆ ಅಪಘಾತವಾಗಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಪೊಲೀಸ್ ಸಿಬ್ಬಂದಿಗಳು ಅಪಘಾತ ತಡೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಉಪ ನಗರ ವರ್ತುಲ ಯೋಜನೆ ಪ್ರಾಧಿಕಾರದ ಸದಸ್ಯ (STRR) ನ್ಯಾಯವಾದಿ ದೀಪು ಬೇಸರ ವ್ಯಕ್ತಪಡಿಸಿದ್ದಾರೆ.