ದೇವನಹಳ್ಳಿ: ಒಂದೆಡೆ ಯುದ್ಧದ ಪರಿಣಾಮ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿ ಜನ ಸಂಕಷ್ಟದಲ್ಲಿದ್ದರೆ, ಬಿಜೆಪಿ (BJP) ಆಪರೇಷನ್ ಕಮಲ (Operation Lotus) ನಡೆಸಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.
ಹೌದು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಕಂಡು ಬಂದಿದೆ. ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಆಪರೇಷನ್ ಕಮಲ ತಡೆಯಲು ಡಿಸಿಎಂ ಡಿ.ಕೆ. ಶಿವಕುಮಾರ್ ಎಂಟ್ರಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅಸ್ಸಾಂ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಅಸ್ಸಾಂನ 10 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ರಾತ್ರೋರಾತ್ರಿ ಬೆಂಗಳೂರಿಗೆ ಬಂದಿದ್ದಾರೆ.
ಭುವನೇಶ್ವರ ಹಾಗೂ ಗುಹ್ವಾಟಿಯಿಂದ ಬೆಂಗಳೂರಿಗೆ ಹೊರಟಿರುವ 10 ಕ್ಕೂ ಹೆಚ್ಚು ಕೈ ಶಾಸಕರಿಗೆ ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಸ್ಸಾಂನಲ್ಲಿ ಪಕ್ಷ ಬದಲಾವಣೆಯ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆ, ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲ ಮಾಡುವ ಆರೋಪ ವ್ಯಕ್ರವಾಗಿದೆ.
ಈ ಹಿನ್ನೆಲೆಯಲ್ಲಿ ಕೈ ಶಾಸಕರ ನ್ನು ಹಿಡಿದಿಟ್ಟುಕೊಳ್ಳಲು ಮತ್ತೆ ಟ್ರಬಲ್ ಶೂಟರ್ ಆದ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಜವಾಬ್ದಾರಿ ನೀಡಿದೆ ಎಂದು ವರದಿಯಾಗಿದೆ.
ಡಿಕೆಶಿವಕುಮಾರ್ ಗೆ ಅಸ್ಸಾಂ ಚುನಾವಣಾ ಉಸ್ತುವಾರಿಯಾಗಿದ್ದು, ಅಸ್ಸಾಂ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಮಹತ್ವದ ಜವಾಬ್ದಾರಿ ಹೊತ್ತಿದ್ದಾರೆ ಎಂದು ತಿಳಿದು ಬಂದಿದೆ.