ಚಿಕ್ಕಬಳ್ಳಾಪುರ: ಅಮೇರಿಕಾ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಕಾರಣ ಭಾರತದಲ್ಲಿ LPG ಸಿಲಿಂಡರ್ ಪಡೆಯಲು ಜನರು ಪರದಾಡುವ ಸ್ಥಿತಿ ಎದುರಾಗಿದೆ. ಆದರೆ ಕೇಂದ್ರದ ಮೋದಿ ಸರ್ಕಾರ ಹಾಗೂ ಅಧಿಕಾರಿಗಳು ಯಾವುದೇ ಸಮಸ್ಯೆ ಇಲ್ಲವೇ ಇಲ್ಲ ಎಂಬಂತೆ ಹೇಳಿಕೆ ನೀಡುತ್ತಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ದಲ್ಲಿ ಸಿಲಿಂಡರ್ ಪಡೆಯಲು ಸರದಿ ಸಾಲಿನಲ್ಲಿ ಸಾವಿರಾರು ಮಂದಿ ನಿಲ್ಲುವ ಅನಿರ್ವಾರ್ಯತೆ ಎದುರಾಗಿದೆ.
ಪೆರೇಸಂದ್ರ ಭಾರತ್ ಗ್ಯಾಸ್ ಏಜೆನ್ಸಿ ಕಚೇರಿ ಮುಂದೆ ಬೆಳಗ್ಗೆ 6 ಗಂಟೆಯಿಂದ ಕಾದರೂ ಗ್ಯಾಸ್ ಸಿಲಿಂಡರ್ ಸಿಗದಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಕೊರತೆ ಇಲ್ಲ ಎನ್ನುತ್ತೆ. ಅಧಿಕಾರಿಗಳು ತೊಂದರೆ ಇಲ್ಲ ಅಂತಾರೆ ಆದರೆ ಸಿಲಿಂಡರ್ ಬುಕ್ ಆಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸುಮಾರು ಅರ್ಧ ಕಿಲೋ ಮೀಟರ್ ನಷ್ಟು ದೂರ ಕ್ಯೂ ನಿಂತ ಜನ, ಕಳೆದ ಮೂರು ನಾಲ್ಕು ದಿನಗಳಿಂದ ಬಂದು ವಾಪಸ್ ಹೋಗುತ್ತಿರುವುದಾಗಿ ಆರೋಪಿಸಿದ್ದಾರೆ.