ಬೆಂಗಳೂರು: ತುಘಲಕ್ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಹೇಳಿದ್ದಾರೆ.
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 51,000 ಅಥಿತಿ ಶಿಕ್ಷಕರು ಕಳೆದ 4 ತಿಂಗಳಿಂದ ಸಂಬಳ ಇಲ್ಲದೆ ಪರದಾಡುತ್ತಿದ್ದು, ಮಾರ್ಚ್ 15ರೊಳಗೆ ಸಂಬಳ ಪಾವತಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಲು ಹೊರಟಿದ್ದಾರೆ.
ಸ್ವ ಘೋಷಿತ ಆರ್ಥಿಕ ತಜ್ಙ ಸಿಎಂ ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ. ದಿವಾಳಿ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ.! ಎಂದು ಕುಟುಕಿದ್ದಾರೆ.