ದೊಡ್ಡಬಳ್ಳಾಪುರ: ನಗರ SC ಮೊರ್ಚಾ ಅಧ್ಯಕ್ಷ ಕುಮಾರ್ (Kumar) ಅವರು ನಿಧನರಾಗಿದ್ದಾರೆ. ಅವರಿಗೆ 31 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದು, ಅಂತ್ಯಕ್ರಿಯೆ ವೀರಭದ್ರನಪಾಳ್ಯದ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ನೆರವೇರಲಿದೆ ಎಂದು ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಹೇಳಿದ್ದಾರೆ.
ಮೃತ ಕುಮಾರ್ ಅವರ ಅಗಲಿಕೆಯ ನೋವಲ್ಲಿಯೂ ಕುಟುಂಬಸ್ಥರು ನೇತ್ರಧಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.