Tomorrow's SSLC exam: All preparations in Doddaballapura

ನಾಳೆ SSLC ಪರೀಕ್ಷೆ: ದೊಡ್ಡಬಳ್ಳಾಪುರದಲ್ಲಿ ಸಕಲ ಸಿದ್ಧತೆ

ದೊಡ್ಡಬಳ್ಳಾಪುರ; ತಾಲೂಕು ಹಂತದಲ್ಲಿ ಮಾ.18 ರಿಂದ ಏ.2 ರವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳನ್ನು ತಾಲೂಕಿನ14 ಕೇಂದ್ರಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳಂತೆ, ತಾಲೂಕು ಆಡಳಿತದ ಮಾರ್ಗದರ್ಶನದಲ್ಲಿ ಪಾರದರ್ಶಕತೆಯಿಂದ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ 17 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 36 ಅನುದಾನ ರಹಿತ ಪ್ರೌಢಶಾಲೆಗಳನ್ನು ಒಳಗೊಂಡಂತೆ ಒಟ್ಟು 69 ಪ್ರೌಢಶಾಲೆಗಳಿದ್ದು, ಈ ಪ್ರೌಢಶಾಲೆಗಳಿಂದ ತಾಲ್ಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ.

3626 ಶಾಲಾ ವಿದ್ಯಾರ್ಥಿಗಳು, 285 ಪುನಾರಾವರ್ತಿತ ವಿದ್ಯಾರ್ಥಿಗಳು ಹಾಗೂ 53 ಖಾಸಗಿ ವಿದ್ಯಾರ್ಥಿಗಳು,18 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟಾರೆ 3982 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಕಳೆದ ಬಾರಿ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಶೇ 70.09 ರಷ್ಟು ಫಲಿತಾಂಶ ಪಡೆದಿದ್ದು ಈ ಬಾರಿಯು ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶಕ್ಕಾಗಿ 29 ಅಂಶಗಳ ಕಾರ್ಯಕ್ರಮಗಳನ್ನು ಪ್ರತಿ ಶಾಲೆಗಳಲ್ಲೂ ಅನುಷ್ಠಾನಗೊಳಿಸಲಾಗಿದೆ.

ದತ್ತು ಯೋಜನೆ, ಪೋಷಕರ ಮನೆಭೇಟಿ,‌ ಮಕ್ಕಳ ಆರೋಗ್ಯ ತಪಾಸಣೆ, ಡಿಸೆಂಬರ್ ಒಳಗೆ ಪಠ್ಯವಿಷಯ ಪೂರ್ಣಗೊಳಿಸುವುದು, ಪೋಷಕರ ಸಭೆಗಳು, ಪ್ರಾರಂಭದಿಂದಲೂ ವಿಶೇಷ ತರಗತಿ,ಮುಖ್ಯ ಶಿಕ್ಷಕರ ಸಭೆಗಳು,ಶಿಕ್ಷಕರಿಗೆ ವಿಷಯವಾರು ತರಬೇತಿ ಕಾರ್ಯಾಗಾರಗಳು, ಪ್ರಶ್ನೆಪತ್ರಿಕೆ ವಿನ್ಯಾಸ ಪರಿಚಯ ,ಗುಂಪು ಕಲಿಕೆ, ವಿದ್ಯಾರ್ಥಿಗಳಿಗೆ ವಿಶೇಷ ಸಂಪನ್ನೂಲ ಶಿಕ್ಷಕರಿಂದ ಪ್ರೇರಣಾ ತರಬೇತಿ ಶಿಬಿರಗಳು, ಆನ್ಲೈನ್ ತರಬೇತಿ ಕಾರ್ಯಾಗಾರ,ಮಕ್ಕಳ ಸಹಾಯವಾಣಿ, ನಿಧಾನ ಕಲಿಕಾ ವಿದ್ಯಾರ್ಥಿಗಳಿಗೆ ರಾತ್ರಿಶಾಲೆ, ಭಾನುವಾರದ ತರಗತಿಗಳ ಮೂಲಕ ವಿಶೇಷ ಕ್ರಿಯಾ ಯೋಜನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಅತ್ಯುತ್ತಮ ಫಲಿತಾಂಶ ಪಡೆಯಲು ಕ್ರಮ ವಹಿಸಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಪರೀಕ್ಷಾ ಬಂದೋಬಸ್ತ್

ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿಯವರು ವಿದ್ಯಾರ್ಥಿಗಳಿಗೆ ಸ್ಟಡಿ ಕಾರ್ನರ್ ಮೂಲಕ ವಿಷಯ ಹಾಗೂ ಪಾಠಾಧಾರಿತ ಪ್ರಶ್ನೆ ಕೋಠಿ,4 ಮಾದರಿ ಪ್ರಶ್ನೆಪತ್ರಕೆಗಳು ಹಾಗೂ ಮಾದರಿ ಉತ್ತರಗಳನ್ನು ಒದಗಿಸಿರುತ್ತದೆ. ಅಲ್ಲದೆ ರಾಜ್ಯ ಹಂತದಲ್ಲಿ 3 ಪೂರ್ವ ಸಿದ್ದತಾ ಪರೀಕ್ಷೆಗಳನ್ನು ನಡೆಸಿರುತ್ತದೆ. ವಿದ್ಯಾರ್ಥಿಗಳ ಉತ್ತಮ ಅಭ್ಯಾಸಕ್ಕಾಗಿ ಸಂಪನ್ಮೂಲ ಶಿಕ್ಷಕ ತಂಡದಿಂದ ಮಾರ್ಗದರ್ಶನ ನೀಡಲಾಗಿದೆ.

ಹಾಗೆಯೇ ಈ ಬಾರಿ 14 ಪರೀಕ್ಷಾ ಕೇಂದ್ರಗಳಲ್ಲಿ 5 ಪಟ್ಟಣ ವ್ಯಾಪ್ತಿಯಲ್ಲಿ ಮತ್ತು 9 ಗ್ರಾಮೀಣ ಭಾಗದ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ವೆಬ್ ಕಾಸ್ಟಿಂಗ್ ತಂಡದ ವೀಕ್ಷಣೆ ನಡೆಸಲಾಗುತ್ತಿದೆ.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಮೂಲಭೂತ ಸೌಲಭ್ಯಗಳಾದ ಗಾಳಿ, ಕುಡಿಯುವ ನೀರು, ವಿದ್ಯುತ್, ಇಂಟರ್ ನೆಟ್, ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ವಹಿಸಲಾಗಿದೆ. ಆರೋಗ್ಯ ಇಲಾಖೆ ಸಹಕಾರ ಹಾಗೂ ಪೋಲೀಸ್ ಇಲಾಖೆಯ ಸಹಕಾರ ಭದ್ರತೆಯೊಂದಿಗೆ ಸುಸೂತ್ರವಾಗಿ ಪರೀಕ್ಷಾ ಕಾರ್ಯ ನಡೆಯಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕು ಖಜಾನೆ ಅಧಿಕಾರಿಗಳು, ತಹಶೀಲ್ದಾರವರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಸೂಕ್ತ ಭದ್ರತೆಯೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ 14 ಕೇಂದ್ರಗಳಿಗೆ ತಲುಪಿಸಲು ವಾಹನ ವ್ಯವಸ್ಥೆ ಮತ್ತು 06 ಮಾರ್ಗಾಧಿಕಾರಿಗಳ ನೇಮಕ ಮಾಡಿಕೊಳಲಾಗಿದೆ.

ಇನ್ನು ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಲು 14 ಮುಖ್ಯ ಅಧೀಕ್ಷಕರು. 3 ಉಪಅಧೀಕ್ಷಕರು,14 ಪ್ರಶ್ನೆಪತ್ರಿಕೆ ಅಭಿರಕ್ಷಕರು, 239 ಕೊಠಡಿ ಮೇಲ್ವಿಚಾರಕರನ್ನು,.14 ಮೊಬೈಲ್ ಸ್ವಾಧೀನಾಧಿಕಾರಿಗಳು,14 ಸ್ಥಾನಿಕ ಜಾಗೃತ ದಳ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕು ಹಾಗೂ ಜಿಲ್ಲಾ ಹಂತದ ಅಧಿಕಾರಿ ತಂಡ ಜಾಗೃತ ವಿಚಕ್ಷಣ ತಂಡಗಳಲ್ಲಿ ಕಾರ್ಯ ನಿರ್ವಹಿಸಲ್ಲಿದ್ದು ಪರೀಕ್ಷಾ ಗೌಪ್ಯತೆ ಮತ್ತು ಪಾವಿತ್ರತೆ ಕಾಪಾಡಿಕೊಂಡು ಮಂಡಳಿಯ ನಿಯಮಾನುಸಾರ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯವನ್ನು ಬಹಳ ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ, ಶಾಂತಿಯುತವಾಗಿ,ಯಾವುದೇ ಅವ್ಯವಹಾರಗಳಿಗೆ ಆಸ್ಪದ ಇಲ್ಲದಂತೆ ನಡೆಸಲು ಸಕಲ ರೀತಿಯಲ್ಲೂ ಅಗತ್ಯ ಕ್ರಮ ವಹಿಸಲಾಗುತ್ತಿದೆ.

ಪರೀಕ್ಷಾ ವೇಳಾಪಟ್ಟಿ

ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆಗಳು ನಡೆಯಲಿವೆ.

ಮಾ.18-ಪ್ರಥಮಭಾಷೆ (ಕನ್ನಡ), ಮಾ.23- ವಿಜ್ಞಾನ, ಮಾ.25-ಇಂಗ್ಲೀಷ್, ಮಾ.28- ಗಣಿತ, ಮಾ.30- ತೃತೀಯ ಭಾಷೆ (ಹಿಂದಿ), ಏ.2-ಸಮಾಜ ವಿಜ್ಞಾನ.

14 ಪರೀಕ್ಷಾ ಕೇಂದ್ರಗಳು

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, , ಶ್ರೀ ದೇವರಾಜ ಅರಸ್ ಪ್ರೌಢಶಾಲೆ,ಕಾರ್ಮೆಲ್ ಜ್ಯೋತಿ ಪ್ರೌಢಶಾಲೆ, ಕೊಂಗಾಡಿಯಪ್ಪ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಅರಳುಮಲ್ಲಿಗೆ ಬಾಗಿಲು, ಸರ್ಕಾರಿ ಪ್ರೌಢಶಾಲೆ ಬಾಶೆಟ್ಟಿಹಳ್ಳಿ, ಜಿ.ಜೆ.ಸಿ ತೂಬಗೆರೆ, ಶ್ರೀ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಪ್ರೌಢಶಾಲೆ, ಕೆ.ಪಿ.ಎಸ್ ದೊಡ್ಡಬೆಳವಂಗಲ, ಸರ್ಕಾರಿ ಪ್ರೌಢಶಾಲೆ ಹುಲಿಕುಂಟೆ, ಜಿ.ಜೆ.ಸಿ ಕನಸವಾಡಿ, ಸರ್ಕಾರಿ ಪ್ರೌಢಶಾಲೆ ಚನ್ನವೀರನಹಳ್ಳಿ, ಸರ್ಕಾರಿ ಪ್ರೌಢಶಾಲೆ ಹೊಸಹಳ್ಳಿ, ಶ್ರೀ ರಾಮಪ್ರೌಢಶಾಲೆ ಕಾಡನೂರು ಪರೀಕ್ಷಾ ಕೇಂದ್ರಗಳಾಗಿವೆ.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!