ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಪರೀಕ್ಷೆ (SSLC Exam) ಹಿನ್ನೆಲೆಯಲ್ಲಿ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಹೂ, ನೀಡಿ ಸಿಹಿ ಹಂಚಿ ಶುಭ ಹಾರೈಸುವ ಮೂಲಲ ಸ್ವಾಗತ ಕೋರಲಾಯಿತು.

ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ಬಿ.ಆರ್ಸಿ ಆರ್.ನಾರಾಯಣಸ್ವಾಮಿ, ಎಂ.ಡಿ.ಎಂ ಸಹಾಯಕ ನಿರ್ದೇಶಕ ಶಶಿಶೇಖರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಾಳಯ್ಯ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಯಲ್ಲಪ್ಪ ಎಸ್ ಬಡಣ್ಣವರ, ಎಸ್ಡಿಎಂಸಿ ಅಧ್ಯಕ್ಷರಾದ ಮಾಲಯ್ಯ, ಉಪಾಧ್ಯಕ್ಷe ಸುಧಾಮಣಿ, ನಿಕಟ ಪೂರ್ವ ಎಸ್ಡಿಎಂಸಿ ಅಧ್ಯಕ್ಷ ಕೃಷ್ಣಮೂರ್ತಿ ಸದಸ್ಯರಾದ ಭಾರ್ಗವಿ ಶ್ರೀನಿವಾಸ್ ಸೇರಿದಂತೆ ಎಸ್ ಡಿ ಎಂ ಸಿ ಸಮಿತಿ ಸದಸ್ಯರು, ಪರೀಕ್ಷಾ ಕರ್ತವ್ಯಕ್ಕೆ ಹಾಜರಿದ್ದ ಅಧಿಕಾರಿಗಳ ತಂಡ, ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ 17 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 36 ಅನುದಾನ ರಹಿತ ಪ್ರೌಢಶಾಲೆಗಳನ್ನು ಒಳಗೊಂಡಂತೆ ಒಟ್ಟು 69 ಪ್ರೌಢಶಾಲೆಗಳಿದ್ದು, ಈ ಪ್ರೌಢಶಾಲೆಗಳಿಂದ ತಾಲ್ಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ.
3626 ಶಾಲಾ ವಿದ್ಯಾರ್ಥಿಗಳು, 285 ಪುನಾರಾವರ್ತಿತ ವಿದ್ಯಾರ್ಥಿಗಳು ಹಾಗೂ 53 ಖಾಸಗಿ ವಿದ್ಯಾರ್ಥಿಗಳು,18 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟಾರೆ 3982 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.